Homeಮುಖಪುಟಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

- Advertisement -
- Advertisement -

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಉದಯನಿಧಿ ಬಂಧನಕ್ಕೂ ಮುನ್ನ ಮಂಗಳವಾರ (ಆ.4) ಬೆಳಿಗ್ಗೆ ಪೊಲೀಸರು ಚೆನ್ನೈನ ನೀಲಾಂಕರೈ ನಿವಾಸಕ್ಕೆ ಆಗಮಿಸಿದಾಗ ಭಾರೀ ಹೈಡ್ರಾಮ ನಡೆದಿದೆ ಎಂದು ವರದಿಗಳು ಹೇಳಿವೆ.

ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸೋಮವಾರ ತಂಜಾವೂರಿನಲ್ಲಿ ರೈತರ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜಯ್ ವಿರುದ್ಧ ಉದಯನಿಧಿ ಮಾತನಾಡುತ್ತಿದ್ದಾಗ, ಜನಸಮೂಹದಿಂದ ನಟಿ ‘ತ್ರಿಶಾ’ ಅವರ ಹೆಸರು ಕೇಳಿಬಂದಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಉದಯನಿಧಿ ನೀಡಿದ ದ್ವಂದ್ವಾರ್ಥದ ಹೇಳಿಕೆಯು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ತಂಜಾವೂರು ಪೊಲೀಸರು, ಚೆನ್ನೈನ ನೀಲಾಂಕರೈನಲ್ಲಿರುವ ಮನೆಗೆ ಆಗಮಿಸಿ ಉದಯನಿಧಿ ಅವರನ್ನು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಲು ಆಗಮಿಸುತ್ತಿದ್ದಂತೆ, ಡಿಎಂಕೆ ಪಕ್ಷದ ವಕೀಲರು ಮದ್ರಾಸ್ ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿ ಬಂಧನದಿಂದ ರಕ್ಷಣೆ ನೀಡುವಂತೆ ಕೋರಿದ್ದಾರೆ. ಉದಯನಿಧಿ ಅವರು ವಿಧಾನಸಭೆ ಕಲಾಪಗಳಲ್ಲಿ ಭಾಗವಹಿಸುವುದನ್ನು ತಡೆಯಲು ಈ ಬಂಧನ ಮಾಡಲಾಗಿದೆ ಎಂದು ಡಿಎಂಕೆ ಆರೋಪಿಸಿದೆ.

ಆಡಳಿತಾರೂಢ ಟಿವಿಕೆ ಪಕ್ಷವು ಉದಯನಿಧಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರೆ, ಬಿಜೆಪಿ ಕೂಡ ಬಂಧನಕ್ಕೆ ಒತ್ತಾಯಿಸಿತ್ತು. ಇತ್ತೀಚೆಗಷ್ಟೇ ಡಿಎಂಕೆ ಶಾಸಕ ಅನಿತಾ ರಾಧಾಕೃಷ್ಣನ್ ಅವರ ಬಂಧನದ ಬೆನ್ನಲ್ಲೇ ಉದಯನಿಧಿ ಅವರ ಬಂಧನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...