Homeಮುಖಪುಟಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

- Advertisement -
- Advertisement -

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್, ಡಿಎಂಕೆ ಆರಂಭದಿಂದಲೂ ಕ್ಷೇತ್ರ ಪುನರ್ ವಿಂಗಡಣೆಯನ್ನು ವಿರೋಧಿಸುತ್ತಾ ಬಂದಿದೆ ಮತ್ತು ಮುಂದೆಯೂ ಇದನ್ನು ವಿರೋಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಏರಿಸುವ ಉದ್ದೇಶಿತ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯು ದಕ್ಷಿಣ ಭಾರತದ, ವಿಶೇಷವಾಗಿ ತಮಿಳುನಾಡಿನ ರಾಜಕೀಯ ಪ್ರಾತಿನಿಧ್ಯ ಮತ್ತು ಸಂಸದೀಯ ಧ್ವನಿಯನ್ನು ಕ್ಷೀಣಿಸಲಿದೆ ಎಂಬ ಆತಂಕ ತಮಿಳುನಾಡು ರಾಜಕೀಯ ಅಂಗಳದಲ್ಲಿ ಭುಗಿಲೆದ್ದಿದೆ.

ಉದಯನಿಧಿ ಸ್ಟಾಲಿನ್ ಸ್ಪಷ್ಟನೆ: ವದಂತಿಗಳಿಗೆ ತೆರೆ

ಮಸೂದೆಯ ಕುರಿತು ಡಿಎಂಕೆ ತನ್ನ ನಿಲುವನ್ನು ಬದಲಾಯಿಸಿಕೊಳ್ಳುತ್ತಿದೆ ಎಂಬ ಊಹಾಪೋಹಗಳ ಕುರಿತು ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್, ಜನಸಂಖ್ಯಾ ನಿಯಂತ್ರಣ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ದಕ್ಷಿಣದ ರಾಜ್ಯಗಳಿಗೆ ಕ್ಷೇತ್ರ ಪುನರ್ ವಿಂಗಡಣೆಯ ಮೂಲಕ ಅನ್ಯಾಯ ಎಸಗಲಾಗುತ್ತಿದೆ. ಮಸೂದೆಯನ್ನು ಬೆಂಬಲಿಸುವ ಅಥವಾ ನಿಲುವನ್ನು ಸಡಿಲಗೊಳಿಸುವ ಪ್ರಶ್ನೆಯೇ ಇಲ್ಲ. ಡಿಎಂಕೆಯ ಪ್ರತಿರೋಧ ಎಂದಿನಂತೆ ಮುಂದುವರಿಯಲಿದೆ” ಎಂದಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಮಸೂದೆಯನ್ನು ಬೆಂಬಲಿಸುವವರನ್ನು 21 ನೇ ಶತಮಾನದ ಎಟ್ಟಪ್ಪನ್‌ಗಳು (ದ್ರೋಹಿಗಳು) ಎಂದು ಕಟುವಾಗಿ ಟೀಕಿಸಿದ್ದರು. ರಾಷ್ಟ್ರೀಯ ಮಟ್ಟದ ಇಂಡಿಯಾ ಒಕ್ಕೂಟದಲ್ಲಾದ ಸಣ್ಣಪುಟ್ಟ ರಾಜಕೀಯ ಗೊಂದಲಗಳು ಹಾಗೂ ಡಿಎಂಕೆ ಸ್ಪಷ್ಟ ನಿಲುವು ಪ್ರಕಟಿಸಿಲ್ಲ ಎಂಬ ಕಾಂಗ್ರೆಸ್‌ನ ಕೆಲ ಮುಖಂಡರ ಅಸಮಾಧಾನದ ಬೆನ್ನಲ್ಲೇ, ಉದಯನಿಧಿ ನೀಡಿರುವ ಈ ಸ್ಪಷ್ಟನೆ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ.

ಮುಖ್ಯಮಂತ್ರಿ ವಿಜಯ್‌ರಿಂದ ರಾಜ್ಯದ ಸಂಸದರ ತುರ್ತು ಸಭೆ

ಮತ್ತೊಂದೆಡೆ, ಪ್ರಸ್ತಾವಿತ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯಿಂದ ತಮಿಳುನಾಡಿಗೆ ಆಗುವ ರಾಜಕೀಯ ಹಾಗೂ ಆರ್ಥಿಕ ನಷ್ಟದ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (ತಮಿಳಗ ವೆಟ್ರಿ ಕಳಗಂ – TVK) ಅವರು ರಾಜ್ಯದ ಎಲ್ಲಾ ಲೋಕಸಭಾ ಮತ್ತು ರಾಜ್ಯಸಭಾ ಸಂಸದರ ಜಂಟಿ ಸಭೆಯನ್ನು ಕರೆದಿದ್ದಾರೆ.

ಕ್ಷೇತ್ರ ಪುನರ್ ವಿಂಗಡಣೆಯಿಂದಾಗಿ ಕೇಂದ್ರದ ಅನುದಾನ ಹಂಚಿಕೆ ಹಾಗೂ ಸಂಸತ್ತಿನಲ್ಲಿ ದಕ್ಷಿಣದ ಧ್ವನಿ ಕುಸಿಯಲಿದೆ ಎಂದು ಮುಖ್ಯಮಂತ್ರಿ ವಿಜಯ್ ಈಗಾಗಲೇ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆಗೆ ಜಂಟಿಯಾಗಿ ಪ್ರತಿರೋಧ ಒಡ್ಡಲು ಸಂಸದರ ಸಭೆ ಆಯೋಜಿಸಿದ್ದಾರೆ. ಆದರೆ, ಕಾವೇರಿ-ಮೇಕೆದಾಟು ವಿವಾದ ಹಾಗೂ ಇತರ ವಿಷಯಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಡಿಎಂಕೆ ಸಂಸದರು ಈ ಸಭೆಯಲ್ಲಿ ಭಾಗವಹಿಸುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...