Homeಮುಖಪುಟಸನಾತನ ಧರ್ಮವನ್ನು ಎಚ್‌ಐವಿ, ಕುಷ್ಟರೋಗಕ್ಕೆ  ಹೋಲಿಸಬೇಕು: ಡಿಎಂಕೆ ಸಂಸದ ರಾಜಾ

ಸನಾತನ ಧರ್ಮವನ್ನು ಎಚ್‌ಐವಿ, ಕುಷ್ಟರೋಗಕ್ಕೆ  ಹೋಲಿಸಬೇಕು: ಡಿಎಂಕೆ ಸಂಸದ ರಾಜಾ

- Advertisement -
- Advertisement -

ಸನಾತನ ಧರ್ಮದ  ಕುರಿತು ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ  ಉದಯನಿಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ  ಮತ್ತೋರ್ವ ಡಿಎಂಕೆ ಸಂಸದ ರಾಜಾ, ಉದಯನಿಧಿ ಅವರು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ಕಾಯಿಲೆಗಳಿಗೆ ಮಾತ್ರ ಹೋಲಿಸಿದ್ದಾರೆ ಆದರೆ ಅದನ್ನು ಎಚ್‌ಐವಿ ಮತ್ತು ಕುಷ್ಟರೋಗಕ್ಕೆ ಹೋಲಿಸಬೇಕು ಎಂದು ಹೇಳಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ ಎ. ರಾಜಾ ಅವರು ಅನುಮತಿ ನೀಡಿದರೆ ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ. ಪ್ರಧಾನಿ ಸಭೆ ಕರೆದರೆ ಮತ್ತು ಅವರು ನನಗೆ ಅನುಮತಿ ನೀಡಿದರೆ ಎಲ್ಲಾ ಕ್ಯಾಬಿನೆಟ್ ಮಂತ್ರಿಗಳಿಗೆ ಉತ್ತರಗಳನ್ನು ನೀಡಲು ನಾನು ಸಿದ್ಧನಿದ್ದೇನೆ. ಯಾವುದು ಸನಾತನ ಧರ್ಮ ಎಂದು ನಾನು ಹೇಳುತ್ತೇನೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ  ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮದ ವಿರುದ್ಧ ಉದಯನಿಧಿ ಅವರು ಮಾಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಉದಯನಿಧಿಯವರು ತಮ್ಮ ಭಾಷಣದಲ್ಲಿ ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಕೆ ಮಾಡಿದ್ದು, ಅದನ್ನು ನಿರ್ಮೂಲನೆ ಮಾಡಬೇಕೆಂದು ಹೇಳಿದ್ದರು.

ಹೇಳಿಕೆ ಬೆನ್ನಲ್ಲೇ ಉದಯನಿಧಿ ಕ್ಷಮೆ ಕೇಳುವಂತೆ ಬಲಪಂಥೀಯರು ಆಗ್ರಹಿಸಿದ್ದರು. ಆದರೆ ಉದಯ ನಿಧಿ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಪುನರುಚ್ಚರಿಸಿದ್ದರು.

ಉದಯ್‌ನಿಧಿಗೆ ಬೆಂಬಲಿಸಿ ಕರ್ನಾಟಕದ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಹೇಳಿಕೆಯನ್ನು ನೀಡಿದ್ದರು. ಮಾನವ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗವಿದ್ದಂತೆ ಎಂದು ಹೇಳಿದ್ದರು. ಸಮಾನತೆಯನ್ನು ಉತ್ತೇಜಿಸದ ಅಥವಾ ಮಾನವರಾಗಿ ನಿಮಗೆ ಇರುವ ಘನತೆಯನ್ನು ಖಾತ್ರಿಪಡಿಸದ ಯಾವುದೇ ಧರ್ಮವು ಧರ್ಮವಲ್ಲ. ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ  ಮತ್ತು ನಿಮ್ಮನ್ನು ಮನುಷ್ಯರಂತೆ ನೋಡಿಕೊಳ್ಳದ ಯಾವುದೇ ಧರ್ಮ ಅದು ಕಾಯಿಲೆಯಂತೆ ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಉದಯನಿಧಿ ಸ್ಟಾಲಿನ್‌ ಮತ್ತು ಪ್ರಿಯಾಂಕ್‌ ಖರ್ಗೆ ವಿರುದ್ಧ ದೂರು ದಾಖಲಾಗಿತ್ತು.

ಇದನ್ನು ಓದಿ: ಮಣಿಪುರ ಹಿಂಸಾಚಾರ, ಭ್ರಷ್ಟಾಚಾರ ವಿಚಾರಗಳಿಂದ ಗಮನ ಬೇರೆಡೆಗೆ ಸೆಳೆಯಲು ‘ಸನಾತನ ತಂತ್ರ’ ಬಳಕೆ: ಬಿಜೆಪಿ ವಿರುದ್ಧ ಸ್ಟಾಲಿನ್ ಕಿಡಿ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...