Homeಕರ್ನಾಟಕಸನಾತನ ಧರ್ಮದ ಹೇಳಿಕೆ: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಕೇಸ್ ದಾಖಲು

ಸನಾತನ ಧರ್ಮದ ಹೇಳಿಕೆ: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಕೇಸ್ ದಾಖಲು

- Advertisement -
- Advertisement -

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡಿನ ಸಚಿವ ಉದಯ್ ನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು ಈ ಹೇಳಿಕೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಸಿದದ್ದಕ್ಕೆ ಇದೀಗ ಇಬ್ಬರು ನಾಯಕರ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ಎಫ್‌ಐಆರ್ ದಾಖಲಾಗಿದೆ.

”ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಖರ್ಗೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಮಂಗಳವಾರ ಇಲ್ಲಿನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಇಬ್ಬರು  ರಾಜಕಾರಣಿಗಳ ಹೇಳಿಕೆಗಳಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸ್ಟಾಲಿನ್ ಅವರ ಹೇಳಿಕೆಯ ಬಗ್ಗೆ ಮಾಧ್ಯಮ ವರದಿ ಉಲ್ಲೇಖಿಸಿ ದೂರು ನೀಡಿದ್ದಾರೆ.

ಶನಿವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿದ್ದರು. ಅವರ ಈ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ.

ಇದನ್ನೂ ಓದಿ: ಸನಾತನ ಧರ್ಮದ ಕುರಿತ ಉದಯ್ ನಿಧಿ ಹೇಳಿಕೆ: ಎಲ್ಲಾ ಪಕ್ಷಗಳಿಗೆ ಅಭಿಪ್ರಾಯ ಹೇಳುವ ಸ್ವಾತಂತ್ರ್ಯವಿದೆ; ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...