Homeಮುಖಪುಟವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ  ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ  ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಜೊತೆಗೆ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು ಇಬ್ಬರು ಆರೋಪಿಗಳನ್ನು ಕೂಡ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಹಾಗೂ ಉದ್ಯಮಿಗೆ  ಚೈತ್ರಾ ಕುಂದಾಪುರ ಹಾಗೂ ಸಹಚರರು ವಂಚನೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯಿಂದ ಮೂರು ಹಂತದಲ್ಲಿ ಸುಮಾರು 7 ಕೋಟಿ ರೂಪಾಯಿಗಳನ್ನು ಟೀಂ ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...