Homeಕರ್ನಾಟಕಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್

ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್

- Advertisement -
- Advertisement -

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದು ಬಂದಿದೆ.

ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಮಂಗಳೂರು ಏರ್‌ಪೋರ್ಟಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪ್ರಾಥಮಿಕ ಮಾಹಿತಿ ದೊರಕಿದೆ. ಈತನ ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ಪೊಲೀಸರು ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಮನೆಯೊಂದಕ್ಕೆ ನುಗ್ಗಿ ದುಷ್ಕರ್ಮಿಯೋರ್ವ ತಾಯಿ ಹಸೀನಾ ಹಾಗೂ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್ (12) ಬರ್ಬರವಾಗಿ ಇರಿದು ಹತ್ಯೆ ಮಾಡಿದ್ದಾನೆ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಕುರಿತು ತನಿಖೆಗೆ ಪೊಲೀಸರು 7 ತಂಡಗಳನ್ನು ರಚಿಸಲಾಗಿತ್ತು.

ಇದನ್ನು ಓದಿ: ದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...