Homeಮುಖಪುಟಉಡುಪಿ: ಮನೆಗೆ ನುಗ್ಗಿ ನಾಲ್ವರ ಬರ್ಬರ ಹತ್ಯೆ

ಉಡುಪಿ: ಮನೆಗೆ ನುಗ್ಗಿ ನಾಲ್ವರ ಬರ್ಬರ ಹತ್ಯೆ

- Advertisement -
- Advertisement -

ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕರಾವಳಿ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದ್ದು, ಘಟನೆ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ.

ಕೊಲೆಯಾದವರನ್ನು ತಾಯಿ ಹಸೀನಾ, ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಇದಲ್ಲದೆ ಚೂರಿ ಇರಿತದಿಂದ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ. ಶಂಕಿತ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.

ಈಗಾಗಲೇ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಡಿವೈಎಸ್ಪಿ ದಿನಕರ ಅವರು ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಕೊಲೆ ಕೃತ್ಯವು ಕಳ್ಳತನದ ಉದ್ದೇಶದಿಂದ ನಡೆದಂತೆ ಕಾಣುತ್ತಿಲ್ಲ. ಮನೆಯಿಂದ ಚಿನ್ನಾಭರಣ ಕಳವಾಗಿಲ್ಲ ಎಂದು ತಿಳಿಸಿದ್ದಾರೆ.

ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್, ಅಯ್ನಾಝ್ ಮತ್ತು ಅಸೀಮ್ ಎಂಬವರನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ. ಹಸೀನಾರ ಅತ್ತೆ ಕೂಡಾ ದುಷ್ಕರ್ಮಿಯಿಂದ ಇರಿತಕ್ಕೊಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...