HomeಅಂಕಣಗಳುKarnataka against SIRSIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

- Advertisement -
- Advertisement -

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಶಿರಿಯಾರ ಗ್ರಾಮದ ಎತ್ತಿನಟ್ಟಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ ಆಗಿ ಕಾರ್ಯನಿರ್ವಹಿಸುತ್ತಿರುವ ಅಮೀತಾ (50) ಎಂಬುವರು ನೀಡಿದ ದೂರಿನ ಆಧಾರದ ಮೇಲೆ, ಶಿರಿಯಾರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಎಂಬಾತನ ವಿರುದ್ಧ ಕೋಟ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಘಟನೆಯ ಹಿನ್ನೆಲೆ:

ಜುಲೈ 27ರಂದು ಬೆಳಿಗ್ಗೆ ಸುಮಾರು 11:30ರ ವೇಳೆಗೆ ಬಿಎಲ್‌ಒ ಅಮೀತಾ ಅವರು ಶಿರಿಯಾರ ಗ್ರಾಮ ಆಡಳಿತಾಧಿಕಾರಿಗಳ (VA) ಕಚೇರಿಯಲ್ಲಿ ಅಧಿಕೃತವಾಗಿ ಎಸ್‌ಐಆರ್ (SIR) ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಮಯದಲ್ಲಿ ಕಚೇರಿಗೆ ಬಂದ ಸುಧೀಂದ್ರ ಶೆಟ್ಟಿ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ತೆಗೆದುಹಾಕಲು ಸಿದ್ಧಪಡಿಸಿದ ದಾಖಲೆಗಳನ್ನು ತನಗೆ ತೋರಿಸುವಂತೆ ದಬ್ಬಾಳಿಕೆ ನಡೆಸಿದ್ದಾನೆ.

ಸ್ಥಳೀಯ ನಿವಾಸಿಯೊಬ್ಬರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಯಾಕೆ ಪಟ್ಟಿ ಮಾಡುತ್ತಿದ್ದೀರಿ ಹಾಗೂ ಪಟ್ಟಿ ಮಾಡಲು ನಿಮಗ್ಯಾರು ಅಧಿಕಾರ ಕೊಟ್ಟಿದ್ದು ಎಂದು ಪ್ರಶ್ನಿಸಿ, ಮಹಿಳಾ ಬಿಎಲ್‌ಒ ಅವರ ಬಳಿಯಿದ್ದ ಸರ್ಕಾರಿ ಪುಸ್ತಕಗಳನ್ನು ಬಲವಂತವಾಗಿ ಎಳೆದೊಯ್ದಿದ್ದಾನೆ. ಅಲ್ಲದೆ, ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲೆ ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅಮೀತಾ ಅವರು ನೀಡಿದ ದೂರಿನ ಮೇರೆಗೆ ಕೋಟ ಪೊಲೀಸ್ ಠಾಣೆಯಲ್ಲಿ ಸುಧೀಂದ್ರ ಶೆಟ್ಟಿ ವಿರುದ್ಧ ಅಪರಾಧ ಕ್ರಮಾಂಕ 123/2026 ರಂತೆ ಪ್ರಕರಣ ದಾಖಲಾಗಿದೆ. ಹೊಸ ಭಾರತೀಯ ನ್ಯಾಯ ಸಂಹಿತೆಯ (BNS) ಗಂಭೀರ ಕಲಂಗಳಾದ 132 (ಸರ್ಕಾರಿ ನೌಕರನ ಮೇಲೆ ಹಲ್ಲೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸುವುದು), 74 (ಮಹಿಳೆಯ ಘನತೆಗೆ ಕುಂದು ತರುವ ಉದ್ದೇಶದಿಂದ ಶಕ್ತಿಪ್ರಯೋಗ ಅಥವಾ ದೌರ್ಜನ್ಯ), 352 (ಶಾಂತಿ ಭಂಗ ಉಂಟುಮಾಡುವ ಉದ್ದೇಶಪೂರ್ವಕ ನಿಂದನೆ) ಹಾಗೂ 351(2) (ಕ್ರಿಮಿನಲ್ ಬೆದರಿಕೆ ಮತ್ತು ಕೊಲೆ ಬೆದರಿಕೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬ್ರಹ್ಮಾವರ ತಾಲೂಕಿನ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕ್ಷೇತ್ರ ಮಟ್ಟದಲ್ಲಿ ಜೀವದ ಹದನವಿಲ್ಲದೆ ಕೆಲಸ ಮಾಡುವ ಮಹಿಳಾ ಬಿಎಲ್‌ಒಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಸ್ಥಳೀಯ ರಾಜಕಾರಣಿಗಳು ನಡೆಸುವ ಇಂತಹ ದೌರ್ಜನ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...