Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...