Homeಕರ್ನಾಟಕಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

- Advertisement -
- Advertisement -

ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.20) ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ.

ಲೀಲಾ ಮತ್ತು ಪಾರ್ವತಿ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸಿದ ಕಾರಣ ಮಲ್ಪೆ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಸುರೇಶ್ ಮತ್ತು ಕಾನ್‌ಸ್ಟೇಬಲ್ ನಾಗರಾಜ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ಮಾಹಿತಿ ನೀಡಿದ್ದಾರೆ.

ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗುರುವಾರ ಸೂಚಿಸಿದೆ. ಕೃತ್ಯಕ್ಕೆ ಕಾರಣರದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಮೀನು ಕದ್ದ ಆರೋಪದ ಮೇಲೆ ವಿಜಯನಗರ ಜಿಲ್ಲೆ ಮೂಲದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದ ವಿಡಿಯೋ ಮಾರ್ಚ್ 18ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಸಂಬಂಧ ಹಲ್ಲೆಗೊಳಗಾದ ಮಹಿಳೆ ಕಡೆಯವರು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 74, 115, 351,352, ಮತ್ತು ದಲಿತ ದೌರ್ಜನ್ಯ (ತಡೆ) ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಕ್ಷ್ಮಿಬಾಯಿ, ಸುಂದರ್, ಶಿಲ್ಪಾ ಮತ್ತು ಇನ್ನೊಬ್ಬರನ್ನು ಮಾರ್ಚ್ 19ರಂದು ಬಂಧಿಸಿದ್ದರು.

“ವಿಡಿಯೋ ಪರಿಶೀಲಿಸಿ, ಪ್ರಕರಣದಲ್ಲಿ ಇನ್ನು ಯಾರದ್ದಾದರು ಪಾತ್ರ ಇದ್ದರೆ ಆದಷ್ಟು ಬೇಗ ಅವರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಉಡುಪಿ ಎಸ್ಪಿ ಡಾ.ಕೆ ಅರುಣ್ ಹೇಳಿದ್ದರು.

ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಾರ್ಚ್ 19ರಂದು ಬಂಧಿತರಾದ ಆರೋಪಿಗಳನ್ನು ಅದೇ ದಿನ ರಾತ್ರಿ ಪೊಲೀಸರು ನ್ಯಾಯಾಧೀಶರ ಮನೆ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಏಪ್ರಿಲ್‌ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಗುರುವಾರ ಬಂಧಿತರಾದವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 22ರಂದು ಪ್ರತಿಭಟನೆ

“ದಲಿತ ಮಹಿಳೆ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿಲ್ಲ. ಅದು ಕ್ಷಣಿಕ ಸಿಟ್ಟಿನಿಂದ ಆಗಿದ್ದು. ರಾಜಿ ಮೂಲಕ ವಿವಾದ ಇತ್ಯರ್ಥಪಡಿಸಿಕೊಂಡಿದ್ದರೂ, ಪ್ರಕರಣ ದಾಖಲಿಸಿ ಬಡ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಮಾರ್ಚ್ 22ರಂದು ಸ್ವಇಚ್ಚೆಯಿಂದ ಮೀನುಗಾರಿಗೆ ಸ್ಥಗಿತಗೊಳಿಸಿ ಬಂದರಿನಲ್ಲಿ ಎಲ್ಲಾ ಮೀನುಗಾರರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘ ತಿಳಿಸಿದೆ ಎಂದು ವರದಿಗಳು ಹೇಳಿವೆ.

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...