Homeಕರ್ನಾಟಕಉಡುಪಿಯ ತಾಯಿ-ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ

ಉಡುಪಿಯ ತಾಯಿ-ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ವಿಚಾರಣೆ ಬಹುತೇಕ ಮುಕ್ತಾಯಗೊಂಡಂತಿದೆ. ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಡುಪಿಯ ಸಂತೆಕಟ್ಟೆ ನೇಜಾರು ನೂರ್ ಮೊಹಮ್ಮದ್ ಕುಟುಂಬದ ನಾಲ್ವರ ಬರ್ಬರ ಹತ್ಯೆಗೆ ಸಂಬಂಧಪಟ್ಟಂತೆ ಪೊಲೀಸರ ತನಿಖೆ ನಡೆಯುತ್ತಿದೆ. ಈ ನಡುವೆ ಆರೋಪಿ ಪ್ರವೀಣ್ ಚೌಗುಲೆ ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದು, ಇಂದು ಕೋರ್ಟಿಗೆ ಆರೋಪಿಯನ್ನು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೀಪಾ ಮುಂದೆ ಮಲ್ಪೆ ಪೊಲೀಸರು ಹಾಜರುಗೊಳಿಸಿದರು. ಆರೋಪಿಗೆ ಡಿಸೆಂಬರ್ 5 ರ ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಪ್ರವೀಣ್ ಚೌಗುಲೆಯನ್ನು ಹಿರಿಯಡ್ಕ ಸಬ್ ಜೈಲ್ ಗೆ ರವಾನೆ ಮಾಡಲಾಗಿದೆ.

ನ.15ರಂದು ಆರೋಪಿ ಪ್ರವೀಣ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು. ಈ ವೇಳೆ ಆರೋಪಿಯನ್ನು ನ.28ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು

ಆರೋಪಿ ಪ್ರವೀಣ್‌ನನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ಉಡುಪಿಯಲ್ಲಿ ತಾಯಿ ಮಕ್ಕಳ ಕೊಲೆ ಪ್ರಕರಣ: ಮಹಜರು ವೇಳೆ ಆರೋಪಿ ಮೇಲೆ ದಾಳಿಗೆ ಯತ್ನ; ಲಾಠಿಚಾರ್ಜ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...