Homeಕರ್ನಾಟಕಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ಅಂಗಡಿ-ಮುಂಗಟ್ಟುಗಳನ್ನು ನೀಡಲಾಗಿಲ್ಲ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ. ಆದರೆ ಇದಕ್ಕೆ ‘ಸಹಬಾಳ್ವೆ ಉಡುಪಿ’ ಸಂಘಟನೆಯು ವಿರೋಧ ವ್ಯಕ್ತಪಡಿಸಿದ್ದು, ಸಮಾಜ ಒಡೆಯುವಂತಹ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ.

ಕಾಪುವಿನ ‘ಹೊಸ ಮಾರಿಗುಡಿ ದೇವಸ್ಥಾನ’ದಲ್ಲಿ ಪ್ರತಿವರ್ಷ ‘ಸುಗ್ಗಿ ಮಾರಿ ಪೂಜೆ’ಯ ಜಾತ್ರೆ ನಡೆಯುತ್ತದೆ. ಇದುವರೆಗೂ ಈ ಜಾತ್ರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಇಡಲು ಯಾವುದೇ ಸಮುದಾಯಕ್ಕೂ ನಿರ್ಬಂಧ ಇರುತ್ತಿರಲಿಲ್ಲ. ಆದರೆ ಈ ಬಾರಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮಾರ್ಚ್ 17ರಂದು ಕರಾವಳಿ ಮುಸ್ಲಿಮರು ತಮ್ಮ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸಿದ್ದರು. ಇದನ್ನು ವಿರೋಧಿಸಿರುವ ಸಂಘಪರಿವಾರ ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಒತ್ತಡ ಹೇರಿದ್ದರಿಂದ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮುಸ್ಲಿಮರಿಗೆ ಅಂಗಡಿ/ಮುಂಗಟ್ಟುಗಳನ್ನು ನೀಡಲಿಲ್ಲ.

ಇದನ್ನೂ ಓದಿ:‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ 

ಮಾರ್ಚ್ 22 ಮತ್ತು 23ರಂದು ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ‘ಸುಗ್ಗಿ ಮಾರಿ ಪೂಜೆ’ಗಾಗಿ ಮಾರ್ಚ್ 18ರಂದು ಹರಾಜು ನಡೆದಿತ್ತು.

“ಇತ್ತೀಚೆಗೆ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯು, ಅಂಗಡಿ-ಮುಂಗಟ್ಟುಗಳ ಹರಾಜಿನಲ್ಲಿ ಹಿಂದೂಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಹೀಗಾಗಿ, ಹೂವು, ತೆಂಗಿನಕಾಯಿ, ಕೋಳಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹಿಂದೂಗಳಿಗೆ ಮಾತ್ರ ಹರಾಜು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೇವಾಲಯದ ಆವರಣದಲ್ಲಿರುವ ತಮ್ಮ ಅಂಗಡಿಗಳನ್ನು ಯಾವುದೇ ಮುಸ್ಲಿಂ ವ್ಯಾಪಾರಿಗಳಿಗೆ ನೀಡಬಾರದು ಎಂದು ಹರಾಜಿನಲ್ಲಿ ಭಾಗವಹಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಮತ್ತು ದೇಶದ ಕಾನೂನನ್ನು ಗೌರವಿಸದ ಕಾರಣ ಸಂಘಪರಿವಾರದ ಸಂಘಟನೆಗಳು ಮುಸಲ್ಮಾನರಿಗೆ ಸ್ಟಾಲ್-ಅಂಗಡಿಗಳನ್ನು ಮಂಜೂರು ಮಾಡದಂತೆ ದೇವಸ್ಥಾನದ ಸಮಿತಿಗೆ ಮನವಿ ಮಾಡಿರುವುದಾಗಿ ರಮೇಶ್ ಹೆಗ್ಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

‘‘ಎರಡು ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಉತ್ಸವಕ್ಕೆ ಭೇಟಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಾರದು. ಹಾಗಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಉಡುಪಿಯ ಕಾಪುವಿನಲ್ಲಿ ಹಳೇ ದೇವಸ್ಥಾನ ಮತ್ತು ಮೂರನೆ ದೇವಸ್ಥಾನ ಎಂಬ ಇನ್ನೂ ಎರಡು ಮಾರಿಗುಡಿ ದೇವಾಲಯಗಳಿವೆ. ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಜಾತ್ರೆಯು ಈ ಎರಡು ಮಾರಿಗುಡಿಗಳನ್ನೂ ಒಳಗೊಂಡಿದೆ. ಆದರೆ ಇನ್ನೆರಡು ಮಾರಿಗುಡಿಗಳು ಪ್ರತ್ಯೇಕ ನಿರ್ವಹಣಾ ಸಮಿತಿಗಳನ್ನು ಹೊಂದಿದ್ದು, ಜಾತ್ರೆಗೆ ಅಂಗಡಿ-ಮುಂಗಟ್ಟುಗಳನ್ನು ಹರಾಜು ಹಾಕುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಹೊಸ ಮಾರಿಗುಡಿ ದೇವಾಲಯವು ಸುಮಾರು 100 ಅಂಗಡಿಗಳನ್ನು ಹರಾಜು ಹಾಕಿದೆ.

ಜಾತ್ರೆಯಲ್ಲಿ ಮುಸ್ಲಿಂ ಸಮುದಯದ ವ್ಯಾಪಾರಿಗಳಿಗೆ ಅಂಗಡಿ ನೀಡದಂತೆ ಮನವಿ ಪತ್ರ ಬಂದಿದ್ದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಅವರಿಗೆ ಪ್ರತಿಕ್ರಿಯಿಸಿದ್ದಾಗಿ ಅವರು ತಿಳಿಸಿದ್ದು, “ಪ್ರಕರಣವನ್ನು ಬಗ್ಗೆ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ವಿವಾದದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಘಟನೆಯ ಸಂಚಾಲಕ ಅಮೃತ ಶೆಣೈ, “ಇದು ಬಹಳ ದುರದೃಷ್ಟಕರವಾದ ಬೆಳವಣಿಗೆಯಾಗಿದ್ದು, ಉಡುಪಿಯ ಸಮಾಜ ಯಾವತ್ತೂ ಇಷ್ಟೊಂದು ಧಾರ್ಮಿಕ ವಿಭಜನೆ ಆಗಿರಲಿಲ್ಲ. ಜಾತಿ-ಮತಗಳ ಭೇದಬಾವ ಇಲ್ಲದೆ ಹಲವಾರು ಉತ್ಸವಗಳು ಇಲ್ಲಿ ನಡೆದುಕೊಂಡು ಬರುತ್ತಿತ್ತು. ದಿವಂಗತ ಹಾಜಿ ಅಬ್ದುಲ್ಲಾ ಅವರು ಉಡುಪಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ್ದು ಇತಿಹಾಸ ಇದೆ” ಎಂದರು.

“ಸಮಾಜ ಒಡೆಯುವ ಕೋಮುವಾದಿ ಶಕ್ತಿಗಳು ಸಮಸ್ತ ಹಿಂದೂ ಸಮಾಜವನ್ನು ಪ್ರತಿನಿಧಿಸುವುದಿಲ್ಲವಾದರೂ, ಈ ರೀತಿ ಒಡೆಯುವ ಭಾವನೆಯನ್ನು ಕೊಟ್ಟು, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ, ಇದನ್ನು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದ ಹೇಗಿತ್ತೊ ಅದೇ ಸಂಪ್ರದಾಯವನ್ನು ಮುಂದುವರೆಸಬೇಕು” ಎಂದು ಅಮೃತ್‌ ಶೆಣೈ ಆಗ್ರಹಿಸಿದ್ದಾರೆ.

“ಈ ಬಗ್ಗೆ ಸಹಬಾಳ್ವೆ ತಂಡದಿಂದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ಸಮಾಜವನ್ನು ವಿಭಜನೆ ಮಾಡುವಂತಹ ವಿಚಾರಗಳಿಗೆ ಸೊಪ್ಪು ಹಾಕಬಾರದು. ಇಂತಹ ಕೆಲಸ ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಯಾಕೆಂದರೆ ಎಲ್ಲಾ ಸಮುದಾಯದಲ್ಲೂ ಒಂದಿಷ್ಟು ಕೆಟ್ಟವರು ಮತ್ತು ಒಳ್ಳೆಯವರು ಇರುತ್ತಾರೆ. ಹಾಗಾಗಿ ಕೆಟ್ಟ ವಿಚಾರಗಳಿಗೆ ಒಂದು ಸಮುದಾಯವನ್ನು ನೇರವಾಗಿ ಉಲ್ಲೇಖ ಮಾಡುವುದು ತಪ್ಪು. ಇದು ಕೇವಲ ಸಮಾಜವನ್ನು ಒಡೆಯಲು ಮಾಡುವಂತಹ ಕೆಲಸ. ಇದಕ್ಕೆಲ್ಲಾ ಸಂವಿಧಾನ ಮೂಲಕ ಅಧಿಕಾರಕ್ಕೆ ಬಂದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಾಯಿ ಮುಚ್ಚಿಕೊಳ್ಳುವಂಹದ್ದು ನಾಚಿಕೆಗೇಡು” ಎಂದು ಅಮೃತ ಶೆಣೈ ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಹಿಂದೆ ಹರಾಜಿನಲ್ಲಿ ಮುಸ್ಲಿಮರು ಕೂಡ ಮಳಿಗೆಗಳನ್ನು ಪಡೆಯುತ್ತಿದ್ದರು.

ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಹಿಜಾಬ್ ಗಾಗಿ ಧರ್ಮಾಂದತೆ ಮೆರೆದ ಸಮುದಾಯಕ್ಕೆ ದೇವಾಲಯಗಳ ಬಳಿ ವ್ಯಾಪಾರ ಮಾಡಲು ಯಾವ ನೈತಿಕತೆ ಇದೆ ,ದೇವಾಲಯ ಹಿಂದೂ ಧರ್ಮದ ಆಧಾರ ಸ್ತಂಭ ಅಲ್ಲಿ ಅನ್ಯರು ಹಿಂಧೂ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೆಲಸಕ್ಕೆ ಹಿಂದೂಗಳ ವಿರೋಧ ಇದೆ.

  2. ಕಾಪು ಮಾರಿಗುಡಿ ಸಮಿತಿಯವರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ , ಇದೆ ರೀತಿ ದೇಶಾದ್ಯಂತ ಚಾಲನೆಗೆ ಬರಲಿ ಬೇಗ .

  3. ಭಾರತ ದೇಶ ಎಲ್ಲರಿಗೂ ಸೇರಿದ್ದು, ದುಡಿಯದೇ ದುಡ್ಡು ಮಾಡುವ ಬೇವರ್ಸಿಗಳದ್ದಲ್ಲ.

  4. ಬಾಳೋಣ, ಸಹಭಾಗಿ ಯಾಗಿ, ಮನುಷ್ಶರಾಗಿ, ದೇಶಕ್ಕಾಗಿ, ಸಮಾಜೋದ್ದಾರಕ್ಕಾಗಿ, ನಮ್ಮದೂ ಒಂದು ಸಣ್ಣ ಶ್ರಮ ವೆಂದು ಮಾನವ ಕುಲಕ್ಕಾಗಿ ಪ್ರೀತಿ ಸನ್ಹಿಹತೆಯಿಂದ, ಪ್ರೀತಿ ಗಳಿಸಲು ಬಾಳೋಣ. ಎಲ್ಲಾ ಧರ್ಮಗಳ ಮೂಲ ತತ್ವವೇ ಇದು.

  5. Since independent all community live unitedly now since about 20-30 years communal violence are creating by politicians its true country divided by communal harmony it should stop

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...