Homeಕರ್ನಾಟಕಉಡುಪಿ: ಉದ್ಘಾಟನೆಯಾದ ಮೂರೇ ದಿನದಲ್ಲಿ ಕೊಚ್ಚಿ ಹೋದ ತೇಲುವ ಸೇತುವೆ; 40% ಕಮಿಷನ್‌‌ ಫಲ ಎಂದ...

ಉಡುಪಿ: ಉದ್ಘಾಟನೆಯಾದ ಮೂರೇ ದಿನದಲ್ಲಿ ಕೊಚ್ಚಿ ಹೋದ ತೇಲುವ ಸೇತುವೆ; 40% ಕಮಿಷನ್‌‌ ಫಲ ಎಂದ ಜನರು!

- Advertisement -
- Advertisement -

ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ನಿರ್ಮಿಸಿದ ರಾಜ್ಯದ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರದಲ್ಲಿ ಕೊಚ್ಚಿಹೋಗಿದೆ. ಸೇತುವೆಯ ಅವಶೇಷಗಳು ಸಮುದ್ರದ ದಡದಲ್ಲಿ ಬಿದ್ದಿದ್ದು, ಅದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಫಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮೊದಲ ತೇಲುವ ಸೇತುವೆ ಮೇ 6ರ ಶುಕ್ರವಾರದಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಅವರು ಸಮ್ಮುಖದಲ್ಲಿ ಉದ್ಘಾಟನೆಗೊಂಡಿತ್ತು. 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವಿರುವ ತೇಲುವ ಸೇತುವೆಯನ್ನು ಸುಮಾರು 80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಸಂಜೆಯವರೆಗೂ ಹಲವಾರು ಪ್ರವಾಸಿಗರು ಸೇತುವೆಯಲ್ಲಿ ನಡೆದಾಡಿದ್ದರು. ಆದರೆ, ಸೋಮವಾರ ಬೆಳಗ್ಗೆ ಪ್ರವಾಸಿಗರು ಸಮುದ್ರ ತೀರಕ್ಕೆ ಬಂದಾಗ ಸೇತುವೆಯ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಸಮುದ್ರದ ಬದಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಇದರ ವಿಡಿಯೊ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಸೇತುವೆಯ ಈ ಅವಸ್ಥೆಗೆ ರಾಜ್ಯ ಬಿಜೆಪಿಯ 40% ಭ್ರಷ್ಟಾಚಾರವೇ ಕಾರಣ ಎಂದು ಹೇಳಿದ್ದಾರೆ.

ಕನ್ನಡ ಪರ ಹೋರಾಟಗಾರ ದಿನೇಶ್‌ ಕುಮಾರ್‌ ಅವರು, “ಭ್ರಷ್ಟ ಸರ್ಕಾರದ 40% ಕಮಿಷನ್ ಸೇತುವೆ ಮೂರೇ ದಿನಗಳಿಗೆ ಮುರಿದು ಸಮುದ್ರದ ಪಾಲಾಯ್ತು” ಎಂದು ಕಿಡಿ ಕಾರಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಕೆ.ಆರ್‌. ಪ್ರಗತ್ ಅವರು, “20% ಕೇಂದ್ರಕ್ಕೆ 20% ರಾಜ್ಯಕ್ಕೆ. ಒಟ್ಟು 40%. ಉಡುಪಿ ಜಿಲ್ಲೆಯ ಪ್ರವಾಸಿ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಮಲ್ಪೆಯ ಕೋಟಿ ವೆಚ್ಚದ ತೇಲು ಸೇತುವೆ, ಬಿಜೆಪಿ ಕಮೀಷನ್ ಆಸೆಗೆ ಮಣ್ಣುಪಾಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

ಇದನ್ನೂ ಓದಿ:  ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ – ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರುತ್ತಿರುವುದೇಕೆ?

ಸಮುದ್ರವು ಪ್ರಕ್ಷುಬ್ಧಗೊಂಡಿದ್ದರಿಂದ ಸೇತುವೆ ಹಾಳಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾಗಿ ಈದಿನ.ಕಾಂ ವರದಿ ಮಾಡಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಲೈಫ್ ಗಾರ್ಡ್‌ಗಳು ಚೆಲ್ಲಾಪಿಲ್ಲಿಯಾಗಿ ಹರಡಿದ್ದ ಸೇತುವೆಯ ಬಾಕ್ಸ್‌ಗಳನ್ನು ಸಂಗ್ರಹಿಸಿ ಸಮುದ್ರದ ಬದಿಯಲ್ಲಿ ಇಡಲಾಗಿದೆ.

“ಸೈಕ್ಲೋನ್ ಮತ್ತು ಭಾರೀ ಗಾಳಿಯಿಂದಾಗಿ ತೇಲುವ ಸೇತುವೆಗೆ ಯಾವುದೇ ಹಾನಿಯಾಗದಂತೆ ನಾವು ಸೇತುವೆಯ ಸಂಪರ್ಕ ಬೀಗ(ಲಾಕ್ ವ್ಯವಸ್ಥೆ)ಗಳನ್ನು ಬೇರ್ಪಡಿಸಿದ್ದೇವೆ. ಇದರಿಂದಾಗಿ ಇಂದು ಬೆಳಗ್ಗೆ ಸೇತುವೆಯ ಕೆಲವು ಬ್ಲಾಕ್‌ಗಳು ಸಮುದ್ರದಲ್ಲಿ ತೇಲುತ್ತಿದ್ದವು. ಕೆಲವರು ವದಂತಿಗಳನ್ನು ಹರಡಿದ್ದಾರೆ. ಯಾವುದೇ ಹಾನಿಯಾಗಿಲ್ಲ. ಕಡಲ ಅಲೆಯ ಪ್ರಭಾವ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸೇತುವೆಯನ್ನು ಮುಚ್ಚಲಾಗಿದೆ” ಎಂದು ಸೇತುವೆಯ ಗುತ್ತಿಗೆದಾರ ಸುದೇಶ್ ಶೆಟ್ಟಿ ಹೇಳಿದ್ದಾಗಿ ಈದಿನ.ಕಾಂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲಾ ಅಂದಂಗಾಯ್ತು….೪೦% ಕ್ಕಿಂತಲೂ ಹೆಚ್ಚು ಕಮಿಷನ್ ಪಡೆದಿರಬೇಕು ಅದಕ್ಕೆ ಮೂರೇ ದಿನದಲ್ಲಿ ಕೊಚ್ಚಿ ಹೋಗಿದೆ‌. ಪಾಪ ಆ ಗುತ್ತಿಗೆದಾರನಾದರೂ ಏನು ಮಾಡಬೇಕು….!!

  2. ಇದು ಸರ್ಕಾರಿ ಕೆಲಸ ಅಲ್ಲ ಜನರ ತೆರಿಗೆ ಹಣನು ಅಲ್ಲ. 3 ಜನ ಉದ್ಯಮಿಗಳು ಸೇರಿ ಶುರು ಮಾಡಿದ್ದು ಇದು. ನೀವು ನಿಮ್ news ಜನ ನೋಡ್ಬೇಕು ಅಂತ ಸುಳ್ ಸುದ್ದಿ ಬರಿಬೇಡಿ.

  3. Commission scheme systems founders should be awarded for these old systems kept alive till date.
    Day one parliamentarian in India systems are well built for politicians welfare..now only percentage ratio has gone up..rest not all but most deals are copy @ paste since decades in this democracy.
    Now old beneficiaries are getting stomach ache bcoz above reasons are missing.
    Big theves are caching small theves.
    Good entertainment for us.

  4. Commission scheme systems founders should be awarded for these old systems kept alive till date.
    Day one parliamentarian in India systems are well built for politicians welfare..now only percentage ratio has gone up..rest not all but most deals are copy @ paste since decades in this democracy.
    Now old beneficiaries are getting stomach ache bcoz above reasons are missing.
    Big theves are caching small theves.
    Good entertainment for us.
    By the way it’s confirmed that it’s built by three industrialists own fund..it’s not tax money.
    Why u don’t go in detail to subject?
    U are in a hurry to find faults and blames against ruling government.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...