Homeಮುಖಪುಟವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

- Advertisement -
- Advertisement -

ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೊರೊನಾ ಲಸಿಕೆ ನೀಡುವ ಲಸಿಕಾ ಅಭಿಯಾನ ಆಂಭಿಸಿರುವುದಕ್ಕೆ ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ಗಳನ್ನು ಅಳವಡಿಸುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ತಾಂತ್ರಿಕ ಸಂಸ್ಥೆಗಳಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಜೂನ್ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಘೋಷಿಸಿದ ಕೊರೊನಾ ಲಸಿಕೆ ಅಭಿಯಾನದ ಪರಿಷ್ಕೃತ ಮಾರ್ಗಸೂಚಿಗಳು ಸೋಮವಾರದಿಂದ (ಜೂನ್  21) ಜಾರಿಗೆ ಬಂದಿವೆ. ಈ ಮಾರ್ಗಸೂಚಿಗಳ ಪ್ರಕಾರ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಉಚಿತ ವ್ಯಾಕ್ಸಿನೇಷನ್ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಲಾಗಿದೆ.

ಈ ಅಭಿಯಾನವನ್ನು ವಿಶ್ವದಲ್ಲೇ ಅತಿ ದೊಡ್ಡ ಲಸಿಕಾ ಅಭಿಯಾನ ಎಂದು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಾಹೀರಾತು ನೀಡುತ್ತಿವೆ. ಲಸಿಕೆ ನೀಡಿದಕ್ಕಾಗಿ ಧನ್ಯವಾದ ಮೋದಿಜಿ ಎಂಬ ಬ್ಯಾನರ್‌ಗಳು  ಇಲ್ಲ ಕಡೆಗಳಲ್ಲಿ ಹಾಕಲಾಗುತ್ತಿದೆ. ಈಗ ಯುಜಿಸಿ ಕೂಡ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಈ ಬ್ಯಾನರ್ ಅಳವಡಿಸಲು ಸೂಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

Image
PC: twitter@UnivofDelhi

ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್, ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳಿಗೆ ಭಾನುವಾರ ಕಳುಹಿಸಿರುವ ವಾಟ್ಸಾಪ್ ಸಂದೇಶದಲ್ಲಿ, ಅಧಿಕಾರಿಗಳು ಧನ್ಯವಾದ ಸೂಚಿಸುವ ಈ ಬ್ಯಾನರ್‌ಗಳನ್ನು ತಮ್ಮ ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿಯೂ ಹಂಚಿಕೊಳ್ಳಲು ತಿಳಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮೂರು ವಿಶ್ವವಿದ್ಯಾಲಯಗಳ ಅಧಿಕಾರಿಗಳು ಸೂಚನೆ ಬಂದಿರುವುದನ್ನು ದೃಢಪಡಿಸಿದ್ದಾರೆ.

“ಭಾರತ ಸರ್ಕಾರವು ಜೂನ್ 21 ರಿಂದ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ಪ್ರಾರಂಭಿಸುತ್ತಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಈ ಹೋರ್ಡಿಂಗ್ ಮತ್ತು ಬ್ಯಾನರ್‌ಗಳನ್ನು ತಮ್ಮ ಸಂಸ್ಥೆಗಳಲ್ಲಿ ಪ್ರದರ್ಶಿಸುವಂತೆ ಕೋರಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಒದಗಿಸಿದಂತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿರುವ ಹೋರ್ಡಿಂಗ್‌ಗಳು ಮತ್ತು ಬ್ಯಾನರ್‌ಗಳ  ಡಿಸೈನ್‌ಗಳನ್ನು ಲಗತ್ತಿಸಲಾಗಿದೆ” ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಅವರು ಸಂದೇಶ ಕಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

ದೆಹಲಿ ವಿಶ್ವವಿದ್ಯಾಲಯ, ಹೈದರಾಬಾದ್ ವಿಶ್ವವಿದ್ಯಾಲಯ, ಭೋಪಾಲ್‌ನ ಎಲ್‌ಎನ್‌ಸಿಟಿ ವಿಶ್ವವಿದ್ಯಾಲಯ, ಬೆನೆಟ್ ವಿಶ್ವವಿದ್ಯಾಲಯ, ಗುರಗಾಂವ್‌ನ ನಾರ್ತ್‌ಕ್ಯಾಪ್ ವಿಶ್ವವಿದ್ಯಾಲಯ ಮುಂತಾದ ಸಂಸ್ಥೆಗಳು ತಮ್ಮ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ “ಧನ್ಯವಾದ ಮೋದಿಜಿ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಬ್ಯಾನರ್‌ಗಳನ್ನು ಹಂಚಿಕೊಂಡಿವೆ.

ಯುಜಿಸಿಯ ಈ ಕ್ರಮವನ್ನು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಮತ್ತು ರಾಜಕಾರಣಿಗಳು ಸೇರಿದಂತೆ ಹಲವರು ಟೀಕಿಸಿದ್ದಾರೆ.

ಸ್ವರಾಜ್  ಇಂಡಿಯಾದ ಅಧ್ಯಕ್ಷ ಮತ್ತು ಯುಜಿಸಿ ಮಾಜಿ ಸದಸ್ಯ ಯೋಗೇಂದ್ರ ಯಾದವ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಯುಜಿಸಿಯ ಮಾಜಿ ಸದಸ್ಯನಾಗಿ ಈ ಕ್ರಮದಿಂದ ನಾನು ಮುಜುಗರಕ್ಕೆ ಒಳಗಾಗಿದ್ದೇನೆ ಎಂದಿದ್ದಾರೆ.

 


ಇದನ್ನೂ ಓದಿ: IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

0
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ದೇಶದ 107...