HomeUncategorizedಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

ಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

- Advertisement -
- Advertisement -

ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಅಧ್ಯಾಪಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಯುಜಿಸಿ ಕರಡು ನಿಯಮಗಳ ಕುರಿತು ರಾಜಕೀಯ ಗದ್ದಲದ ನಡುವೆ, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಗುರುವಾರ ವಿವಾದಾತ್ಮಕ ಕರಡು ನಿಯಮದ ಕುರಿತು ಸಾರ್ವಜನಿಕ ಪ್ರತಿಕ್ರಿಯೆಯನ್ನು ಸ್ವೀಕರಿಸುವ ಗಡುವನ್ನು ಫೆಬ್ರವರಿ 28 ರವರೆಗೆ ವಿಸ್ತರಣೆ ಮಾಡುವುದಾಗಿ ಪ್ರಕಟಿಸಿದೆ. ಯುಜಿಸಿ ಕರಡು

ಆರು ಬಿಜೆಪಿಯೇತರ ಆಡಳಿತದ ರಾಜ್ಯಗಳು ಕರಡು ನೇಮಕಾತಿ ಮತ್ತು ಬಡ್ತಿ ಮಾನದಂಡಗಳನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಕರಡು ನಿಯಮಗಳನ್ನು ತೀವ್ರವಾಗಿ ವಿರೋಧಿಸಿದ್ದು, ತಮಿಳುನಾಡು ಆಡಳಿತರೂಢ ಡಿಎಂಕೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯನ್ನು ಆಯೋಜಿಸಿತ್ತು.

ಡಿಎಂಕೆ ವಿದ್ಯಾರ್ಥಿ ವಿಭಾಗದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಒಂದು ಇತಿಹಾಸ, ಒಂದು ಸಂಪ್ರದಾಯ, ಒಂದು ಭಾಷೆ”ಯನ್ನು ದೇಶದ ಮೇಲೆ ಹೇರುವ ತನ್ನ ಕಲ್ಪನೆಯನ್ನು ಸಾಧಿಸಲು ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಮುಂದಿಟ್ಟು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕೆಲವು ರಾಜಕೀಯ ನಾಯಕರು ತಮ್ಮ ಹಳೆಯ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಪ್ರಗತಿಪರ ಶೈಕ್ಷಣಿಕ ಸುಧಾರಣೆಗಳನ್ನು ಕಾಲ್ಪನಿಕ ಬೆದರಿಕೆಗಳಾಗಿ ತಿರುಚುತ್ತಿದ್ದಾರೆ. ಇದು ದುರದೃಷ್ಟಕರ ಮತ್ತು ಕಳವಳಕಾರಿಯಾಗಿದೆ” ಎಂದು ಹೇಳಿದ್ದಾರೆ.

“ಕರಡು ಯುಜಿಸಿ ನಿಯಮಗಳು 2025 ರ ಕುರಿತು ಪ್ರತಿಕ್ರಿಯೆ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲು ಪಾಲುದಾರರು(Stakeholders) ವಿನಂತಿಗಳನ್ನು ಮಾಡಿದ್ದು, ಆದ್ದರಿಂದ ಯುಜಿಸಿ ಈಗ ಕೊನೆಯ ದಿನಾಂಕವನ್ನು ಫೆಬ್ರವರಿ 28, 2025 ರವರೆಗೆ ವಿಸ್ತರಿಸಲು ನಿರ್ಧರಿಸಿದೆ” ಎಂದು ಯುಜಿಸಿ ಕಾರ್ಯದರ್ಶಿ ಪ್ರೊ. ಮನೀಶ್ ಆರ್ ಜೋಶಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕರಡು ನಿಯಮಗಳ ಕುರಿತು ಪಾಲುದಾರರು 28/02/2025 ರವರೆಗೆ ಈ ಕೆಳಗಿನ ಇಮೇಲ್ ವಿಳಾಸಕ್ಕೆ ಪ್ರತಿಕ್ರಿಯೆಯನ್ನು ಸಲ್ಲಿಸಬಹುದು: [email protected].” ಎಂದು ಹೇಳಿದೆ. ಕರಡನ್ನು ಜನವರಿ 6, 2025 ರಂದು ಯುಜಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಯುಜಿಸಿ ಫೆಬ್ರವರಿ 5, 2025 ರವರೆಗೆ ಪಾಲುದಾರರಿಂದ ಪ್ರತಿಕ್ರಿಯೆಯನ್ನು ಕೋರಿದೆ.

ಕೇಂದ್ರ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ಪ್ರತಿಯೊಂದು ರಾಜ್ಯವು ತನ್ನದೇ ಆದ ಸಂಪ್ರದಾಯಗಳು, ಇತಿಹಾಸ ಮತ್ತು ಭಾಷೆಯನ್ನು ಹೊಂದಿದೆ. ಅದಕ್ಕಾಗಿಯೇ ಸಂವಿಧಾನದಲ್ಲಿ ಭಾರತವನ್ನು ‘ರಾಜ್ಯಗಳ ಒಕ್ಕೂಟ’ ಎಂದು ಕರೆಯಲಾಗುತ್ತದೆ ಎಂದು ನಾನು ಹೇಳುತ್ತಲೇ ಇರುತ್ತೇನೆ. ಅಂದರೆ ಈ ಎಲ್ಲಾ ಇತಿಹಾಸಗಳು, ಸಂಪ್ರದಾಯಗಳು ಮತ್ತು ಭಾಷೆಗಳು ಭಾರತವನ್ನು ರಾಜ್ಯಗಳ ಒಕ್ಕೂಟವನ್ನಾಗಿ ಮಾಡಲು ಒಟ್ಟಿಗೆ ಬರುತ್ತವೆ ಮತ್ತು ಆದ್ದರಿಂದ ನಾವು ಅದರ ಬಗ್ಗೆ ಯೋಚಿಸಬೇಕು.” ಎಂದು ಹೇಳಿದ್ದಾರೆ.

“ನಾವು ಎಲ್ಲಾ ಭಾಷೆಗಳು, ಎಲ್ಲಾ ಸಂಸ್ಕೃತಿಗಳು, ಎಲ್ಲಾ ಸಂಪ್ರದಾಯಗಳು, ಎಲ್ಲಾ ಇತಿಹಾಸಗಳನ್ನು ಗೌರವಿಸಬೇಕು ಮತ್ತು ಅವು ಎಲ್ಲಿಂದ ಬರುತ್ತವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಎಂಕೆ ವಿದ್ಯಾರ್ಥಿಗಳ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಹೊಸ ಶಿಕ್ಷಣ ನೀತಿಯ ವಿರುದ್ಧದ ಈ ಪ್ರತಿಭಟನೆಯನ್ನು ಸಮಾಜವಾದಿ ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಹೊಸ ಶಿಕ್ಷಣ ನೀತಿಯು ವಿಶ್ವವಿದ್ಯಾಲಯಗಳನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಪಿತೂರಿಯಾಗಿದೆ.” ಎಂದು ಹೇಳಿದ್ದಾರೆ.

“ನೀತಿಯು ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಸಿದುಕೊಳ್ಳುವ ಮತ್ತು ರಾಜಕಾರಣಿಗಳನ್ನು ಕೈಗಾರಿಕೋದ್ಯಮಿಗಳ ಸೇವಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ನಾವು ಈ ನೀತಿಯನ್ನು ಎಂದಿಗೂ ಬೆಂಬಲಿಸುವುದಿಲ್ಲ. ಅವರು ರಾಜ್ಯ ಸರ್ಕಾರಗಳ ಎಲ್ಲಾ ಅಧಿಕಾರಗಳನ್ನು ವಶಪಡಿಸಿಕೊಳ್ಳಲು ಬಯಸುತ್ತಾರೆ.” ಎಂದು ಹೇಳಿದ್ದಾರೆ.

ಗುರುವಾರ, ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ (ಎಲ್ಲ ವಿರೋಧ ಪಕ್ಷದ ಆಡಳಿತದ ರಾಜ್ಯಗಳು) ರಾಜ್ಯಗಳ ಆರು ಸಚಿವರು ಅಥವಾ ಅವರ ಪ್ರತಿನಿಧಿಗಳು ಯುಜಿಸಿ ಕರಡು ನಿಯಮಗಳ ಕುರಿತು 15 ಅಂಶಗಳ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಕರಡು ನಿಯಮಗಳ ಪ್ರಕಾರ, ಸಾರ್ವಜನಿಕ ಆಡಳಿತ, ಸಾರ್ವಜನಿಕ ನೀತಿ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಉದ್ಯಮ ತಜ್ಞರು ಮತ್ತು ಹಿರಿಯ ವೃತ್ತಿಪರರನ್ನು ಉಪಕುಲಪತಿಗಳನ್ನಾಗಿ ನೇಮಕಮಾಡಬಹುದಾಗಿದೆ. ಕರಡು ಮಾನದಂಡಗಳು ಕುಲಪತಿಗಳು ಅಥವಾ ಸಂದರ್ಶಕರಿಗೆ ಉಪಕುಲಪತಿಗಳನ್ನು ನೇಮಿಸಲು ಮೂರು ಸದಸ್ಯರ ಹುಡುಕಾಟ ಮತ್ತು ಆಯ್ಕೆ ಸಮಿತಿಯನ್ನು ರಚಿಸುವ ಅಧಿಕಾರವನ್ನು ನೀಡಿವೆ.

ಹೊಸ ಮಾರ್ಗಸೂಚಿಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರನ್ನು ನೇಮಿಸಿಕೊಳ್ಳುವ ಮಾನದಂಡಗಳನ್ನು ಸಹ ತಿದ್ದುಪಡಿ ಮಾಡುತ್ತವೆ. ಕನಿಷ್ಠ 55% ಅಂಕಗಳೊಂದಿಗೆ ಮಾಸ್ಟರ್ ಆಫ್ ಎಂಜಿನಿಯರಿಂಗ್ (M.E) ಮತ್ತು ಮಾಸ್ಟರ್ಸ್ ಆಫ್ ಟೆಕ್ನಾಲಜಿ (MTech) ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಹೊಂದಿರುವ ಜನರನ್ನು ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಗೆ ಅರ್ಹತೆ ಪಡೆಯದೆ ನೇರವಾಗಿ ಸಹಾಯಕ ಪ್ರಾಧ್ಯಾಪಕ ಮಟ್ಟಕ್ಕೆ ನೇಮಕ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಇದನ್ನೂಓದಿ:  ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...