Homeಮುಖಪುಟಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

- Advertisement -
- Advertisement -

ಮಂಗಳವಾರವಷ್ಟೇ (ಜೂನ್ 18) ನಡೆದಿದ್ದ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)ರದ್ದುಪಡಿಸಿ, ಸಿಬಿಐ ತನಿಖೆಗೆ ವಹಿಸಲಾಗಿದೆ.

ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿಗಳು ಲಭಿಸಿರುವ ಕಾರಣ ಎನ್‌ಟಿಎ ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಶಿಕ್ಷಣ ಸಚಿವಾಲಯ ಬುಧವಾರ ಆದೇಶಿಸಿದೆ.

ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಇದರ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿರುವ ಅಕ್ರಮಗಳು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವ ನಡುವೆ, ಎನ್‌ಟಿಎ ನಡೆಸಿದ ನೆಟ್ ಪರೀಕ್ಷೆಯನ್ನೂ ರದ್ದುಗೊಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಒಂದಂಶವೂ ತಪ್ಪು ನಡೆಯಬಾರದು ಎಂದು ಎನ್‌ಟಿಎ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿತ್ತು. ಈ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ.

ನೆಟ್ ಪರೀಕ್ಷೆಯಲ್ಲಿ ಈ ಬಾರಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಪೆನ್‌ ಮತ್ತು ಪೇಪರ್ ಬಳಕೆಯ ಒಎಂಆರ್‌ ವಿಧಾನದಲ್ಲಿ ಒಂದೇ ದಿನದಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ದೇಶದಾದ್ಯಂತ 11 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪಾರಧಗಳ ಸಮನ್ವಯ ಕೇಂದ್ರದ (ಐ4ಸಿ) ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಮಾಹಿತಿ ನೀಡಿರುವ ಹಿನ್ನೆಲೆ ಪರೀಕ್ಷೆ ರದ್ದುಪಡಿಲಾಗಿದೆ ಎಂದು ತಿಳಿದು ಬಂದಿದೆ.

ವಿಶ್ವ ವಿದ್ಯಾನಿಯಲಗಳು ಮತ್ತು ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಜೂನಿಯರ್ ರಿಸರ್ಚ್‌ ಫೆಲೋಶಿಫ್‌ಗೆ (ಜೆಆರ್‌ಎಫ್‌) ಹಾಗೂ ಪಿಹೆಚ್‌ಡಿ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ನೆಟ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ : ನೀಟ್ ಮರು ಮೌಲ್ಯಮಾಪನಕ್ಕೆ ಮುಂದಾದ ಎನ್‌ಟಿಎ; ಅಂಕ ಕಳೆದುಕೊಳ್ಳುವ 6 ಟಾಪರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...