Homeಮುಖಪುಟಮೋದಿ ಚಿತ್ರವಿರುವ 'ಸೆಲ್ಫಿ ಪಾಯಿಂಟ್‌' ಸ್ಥಾಪಿಸಲು ವಿವಿಗಳಿಗೆ ಯುಜಿಸಿ ಪತ್ರ

ಮೋದಿ ಚಿತ್ರವಿರುವ ‘ಸೆಲ್ಫಿ ಪಾಯಿಂಟ್‌’ ಸ್ಥಾಪಿಸಲು ವಿವಿಗಳಿಗೆ ಯುಜಿಸಿ ಪತ್ರ

- Advertisement -
- Advertisement -

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) 2024ರ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ದೇಶಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದಿದೆ ಎಂದು ದಿ ವೈರ್‌ ವರದಿ ಮಾಡಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕ ದತ್ತಾಜಿ ದಿದೋಲ್ಕರ್ ಅವರ ಜನ್ಮ ಶತಮಾನೋತ್ಸವ  ಆಚರಿಸಲು ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಒತ್ತಾಯಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಯುಜಿಸಿ ತನ್ನ ಪತ್ರದಲ್ಲಿ ಸೆಲ್ಪಿ ತಾಣಗಳನ್ನು ಸೃಷ್ಟಿಸಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಳ್ಳಲು ಮತ್ತು ಅವುಗಳನ್ನು ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಲವಾರು ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳಿಗೆ ತಮಗೆ ಸಂಬಂಧವಿಲ್ಲದ ವ್ಯಕ್ತಿನಿಷ್ಠೆ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ ಎಂದು ಹೇಳಿದ್ದಾರೆ.

ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಯುಜಿಸಿಯ ನಿರ್ದೇಶನದ ಪ್ರಕಾರ, ಪ್ರತಿ ಸೆಲ್ಫಿ ಪಾಯಿಂಟ್‌ನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು. ಇದು ಶಿಕ್ಷಣದ ಅಂತರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಬಹುಭಾಷಾತೆಯಂತಹ ನಿರ್ದಿಷ್ಟ ವಿಷಯಕ್ಕೆ ಅನುಗುಣವಾಗಿ ರೂಪಿಸಲು ಆಗ್ರಹಿಸಲಾಗಿದೆ.

ಸರ್ಕಾರವು ಪ್ರತಿಯೊಂದು ಸಾಮಾನ್ಯ ಸಾಧನೆಯನ್ನು ಅದ್ಭುತವೆಂದು ಬಿಂಬಿಸುತ್ತಿದೆ ಮತ್ತು ಅದರ ಕ್ರೆಡಿಟ್‌  ಪ್ರಧಾನಿಗೆ ಸಲ್ಲುತ್ತದೆ. ಸರಕಾರ ಅಥವಾ ಯುಜಿಸಿ ಇಂತಹ ಪ್ರಚಾರವನ್ನು ಉತ್ತೇಜಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ಉನ್ನತ ಸಂಸ್ಥೆಯೊಂದರ ಅಧ್ಯಾಪಕರೋರ್ವರು ಹೇಳಿರುವ ಬಗ್ಗೆ ಟೆಲಿಗ್ರಾಫ್ ವರದಿ ಮಾಡಿದೆ.

ಯುಜಿಸಿಯು ಇಂತಹ ಸುತ್ತೋಲೆಗಳನ್ನು ಹೊರಡಿಸುತ್ತಲೇ ಇರುತ್ತದೆ ಮತ್ತು ಅವುಗಳನ್ನು ನಿರ್ಲಕ್ಷಿಸಲು ಕ್ಯಾಂಪಸ್ ಆಡಳಿತಗಳು ಮುಕ್ತವಾಗಿವೆ ಎಂದು ಪ್ರಾಧ್ಯಾಪಕರೋರ್ವರು ಹೇಳಿದ್ದು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಇಂತಹ ಸಲಹೆಗಳನ್ನು ಕಡೆಗಣಿಸಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...