Homeಮುಖಪುಟಉಜ್ಜಯಿನಿ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಅರೆಬೆತ್ತಲೆಯಾಗಿ ಪತ್ತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಉಜ್ಜಯಿನಿ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಅರೆಬೆತ್ತಲೆಯಾಗಿ ಪತ್ತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

- Advertisement -
- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅತ್ಯಾಚಾರಕ್ಕೊಳಗಾದ 12 ವರ್ಷದ ಬಾಲಕಿ ಅರೆಬೆತ್ತಲೆಯಾಗಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಾಳೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಪ್ರಾಪ್ತ ಬಾಲಕಿಯು ಅರೆಬೆತ್ತಲೆ ಸ್ಥಿತಿಯಲ್ಲಿ ಅಲೆದಾಡುತ್ತಿರುವುದು ಮತ್ತು ಆಕೆ ಸಾರ್ವಜನಿಕರಿಂದ ಸಹಾಯವನ್ನು ಕೇಳುತ್ತಾಳೆ. ನಂತರ ಆಕೆ ದಂಡಿ ಆಶ್ರಮದ ಬಳಿ ಮೂರ್ಛೆ ಹೋಗಿ ಬಿದ್ದಿರುವ ದೃಶ್ಯಗಳು ಸಿಸಿಟಿವಿ ಸೆರೆಯಾಗಿವೆ. ಆನಂತರ ದಾರಿಹೋಕರು ಪೊಲೀಸರಿಗೆ ಕರೆ ಮಾಡಿ ವಿಷಯ೭ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ಚರಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ನಡೆದಿದ್ದು, ಖಾಸಗಿ ಭಾಗಗಳಿಗೆ ಹಾನಿಯಾಗಿದೆ. ಅತಿಯಾದ ರಕ್ತಸ್ರಾವದಿಂದಾಗಿ ಆಕೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಬಹಿರಂಗಪಡಿಸಿದ್ದಾರೆ. ನಂತರ ಆಕೆಯನ್ನು ಇಂದೋರ್‌ಗೆ ಕಳುಹಿಸಲಾಯಿತು.

ಪ್ರಾಥಮಿಕ ತನಿಖೆಯಿಂದ ಆಕೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಮೂಲದವರು ಎಂದು ತಿಳಿದುಬಂದಿದೆ. ಅವಳು ಉಜ್ಜಯಿನಿಗೆ ಹೇಗೆ ಬಂದಳು ಎಂಬುದು ತಿಳಿದುಬಂದಿಲ್ಲ. ಬಾಲಕಿ ಮಾನಸಿಕ ಅಸ್ವಸ್ಥೆ ಎಂದು ವರದಿಯಾಗಿದೆ.

ಅಪರಿಚಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಉಜ್ಜಯಿನಿ ಎಸ್ಪಿ ಸಚಿನ್ ಶರ್ಮಾ ತಿಳಿಸಿದ್ದಾರೆ.

ಸೆಪ್ಟೆಂಬರ್ 6 ರಂದು ಬೈರಾಗರ್‌ನಲ್ಲಿ 13 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರವೆಸಗಿದ್ದರು. ಬೈರಾಗಢ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಅತ್ಯಾಚಾರ ಪ್ರಕರಣವನ್ನು ದಾಖಲಿಸಿ ಬಂಧಿಸಿದ್ದರು.

ಇದನ್ನೂ ಓದಿ: ಉ.ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...