Homeಮುಖಪುಟಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಗೃಹಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುಕೆ ಪೊಲೀಸರಿಗೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುನೈಟೆಡ್ ಕಿಂಗ್‌ಡಂ (ಯುಕೆ) ಪೊಲೀಸರಿಗೆ ಅರ್ಜಿ ಸಲ್ಲಿಸಿದೆ ಎಂದು ಅಸೋಸಿಯೇಟ್‌ ಪ್ರೆಸ್‌‌ ವರದಿ ಮಾಡಿದೆ. (ದಿ ಕ್ವಿಂಟ್‌ ವರದಿ)

ಕಾಶ್ಮೀರದಲ್ಲಿ ಯುದ್ಧ ಅಪರಾಧಗಳಿಗೆ ಸಂಬಂಧಿಸಿದಂತೆ ಆರೋಪಗಳನ್ನು ಮಾಡಲಾಗಿದ್ದು, ಜನವರಿ 20ರಂದು ದೂರು ನೀಡಲಾಗಿದೆ.

“ಕಾರ್ಯಕರ್ತರು, ಪತ್ರಕರ್ತರು, ನಾಗರಿಕರ ಚಿತ್ರಹಿಂಸೆ, ಅಪಹರಣ ಮತ್ತು ಹತ್ಯೆಗೆ ಭಾರತೀಯ ಸೇನೆಯು ಹೇಗೆ ಕಾರಣವಾಗಿವೆ ಎಂಬುದನ್ನು ಉಲ್ಲೇಖಿಸುವ ಪುರಾವೆಗಳನ್ನು ಕಾನೂನು ಸಂಸ್ಥೆ ಸ್ಟೋಕ್ ವೈಟ್ ಸಲ್ಲಿಸಿದೆ” ಎಂದು ಎಪಿ ವರದಿ ಹೇಳಿದೆ.

ವರದಿಯು 2020-21ರ ಅವಧಿಯಲ್ಲಿ ತೆಗೆದುಕೊಂಡ 2,000ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಆಧರಿಸಿದೆ ಎಂದು  ಕಾನೂನು ಸಂಸ್ಥೆಯು ಹೇಳಿಕೊಂಡಿದೆ. ಯುದ್ಧ ಅಪರಾಧಗಳು ಮತ್ತು ಚಿತ್ರಹಿಂಸೆಯಲ್ಲಿ ನೇರವಾಗಿ ಎಂಟು ಹಿರಿಯ ಭಾರತೀಯ ಮಿಲಿಟರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

“ಭಾರತದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ವಿರುದ್ಧ ಯುದ್ಧ ಅಪರಾಧಗಳು ಮತ್ತು ಇತರ ಹಿಂಸಾಚಾರಗಳನ್ನು ನಡೆಸುತ್ತಿದ್ದಾರೆ ಎಂದು ನಂಬಲು ಬಲವಾದ ಕಾರಣವಿದೆ” ಎಂದು ಕಾನೂನು ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ.

ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಪ್ರತಿಕ್ರಿಯೆ ಇಲ್ಲ

ಈ ಕುರಿತು ಯಾವುದೇ ಮಾಹಿತಿ ಬಂದಿಲ್ಲದಿರುವುದಾಗಿ ತಿಳಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರತಿಕ್ರಿಯಿಸಲು ನಿರಾಕರಿಸಿದೆ. ಗೃಹ ಸಚಿವರು ಕೂಡ ವರದಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎಪಿ ವರದಿ ಮಾಡಿದೆ.

ಕಾನೂನು ಸಂಸ್ಥೆಯು “ಸಾರ್ವತ್ರಿಕ ನ್ಯಾಯವ್ಯಾಪ್ತಿ” ತತ್ವದ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದೆ ಎಂದು ವರದಿ ಹೇಳುತ್ತದೆ. ಜಗತ್ತಿನಲ್ಲಿ ಎಲ್ಲಿಯಾದರೂ ಮಾಡಿದ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲು ದೇಶಗಳಿಗೆ ಅಧಿಕಾರವನ್ನು ಸಾರ್ವತ್ರಿಕ ನ್ಯಾಯವ್ಯಾಪ್ತಿ ತತ್ವವು ನೀಡುತ್ತದೆ. ಜಿನೀವಾ ಕನ್ವೆನ್ಶನ್ಸ್ ಆಕ್ಟ್ 1957ರ ಅಡಿಯಲ್ಲಿ ಯುಕೆಯು ಯುದ್ಧ ಅಪರಾಧಗಳ ಸಾರ್ವತ್ರಿಕ ನ್ಯಾಯವ್ಯಾಪ್ತಿಯನ್ನು ಹೊಂದಿದೆ.

“ತಮ್ಮ ಕರ್ತವ್ಯವನ್ನು ಪಾಲಿಸುವಂತೆ ನಾವು ಯುಕೆ ಸರ್ಕಾರವನ್ನು ಕೇಳುತ್ತಿದ್ದೇವೆ. ನಾವು ಅವರಿಗೆ ಒದಗಿಸಿದ ಪುರಾವೆಗಳ ಆಧಾರದ ಮೇಲೆ ತನಿಖೆ ನಡೆಸಿ ಬಂಧಿಸಲು ಕೇಳುತ್ತೇವೆ” ಎಂದು ಟೋಕ್ ವೈಟ್‌ನ ಅಂತರರಾಷ್ಟ್ರೀಯ ಕಾನೂನಿನ ನಿರ್ದೇಶಕ ಹಕನ್ ಕ್ಯಾಮುಜ್ ಹೇಳಿರುವುದಾಗಿ ಎಪಿ ವರದಿ ಉಲ್ಲೇಖಿಸಿದೆ.


ಇದನ್ನೂ ಓದಿರಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...