Homeಅಂತರಾಷ್ಟ್ರೀಯರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

- Advertisement -
- Advertisement -

ಉಭಯ ದೇಶಗಳ ಸಂಘರ್ಷದಲ್ಲಿ ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಪ್ರಜೆಯನ್ನು ಸೆರೆಹಿಡಿದಿರುವುದಾಗಿ ಉಕ್ರೇನ್ ಮಂಗಳವಾರ (ಅ.7) ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಉಕ್ರೇನ್‌ ಸಶಸ್ತ್ರ ಪಡೆಗಳ 63ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಗುಜರಾತ್‌ನ ಮೋರ್ಬಿ ನಿವಾಸಿ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಅವರು ಮಾತನಾಡುವ ವಿಡಿಯೋ ಬಿಡುಗಡೆ ಮಾಡಿದೆ.

ಹುಸೇನ್ ಅವರು ರಷ್ಯಾದ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಹೋಗಿದ್ದರು ಎಂದು ವರದಿಗಳು ಹೇಳಿವೆ.

ಉಕ್ರೇನ್ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ರಷ್ಯನ್ ಭಾಷೆಯಲ್ಲಿ ಮಾತನಾಡಿರುವ ಹುಸೇನ್, “ನಾನು ಅಧ್ಯಯನ ನಿಮಿತ್ತ ರಷ್ಯಾಗೆ ಹೋಗಿದ್ದೆ. ಅಲ್ಲಿ ಮಾದಕ ವಸ್ತು ಸಂಬಂಧಿತ ಆರೋಪದಲ್ಲಿ ನನ್ನನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ನನಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅದರಿಂದ ತಪ್ಪಿಸಿಕೊಳ್ಳಲು ಬಯಸಿದರೆ ರಷ್ಯಾ ಸೇನೆ ಪರ ಹೋರಾಡುವ ಒಪ್ಪಂದಕ್ಕೆ ಸಹಿ ಹಾಕಲು ನನಗೆ ಹೇಳಲಾಯಿತು. ನನಗೆ ಜೈಲ್ಲಿನಲ್ಲಿ ಇರಲು ಇಷ್ಟ ಇರಲಿಲ್ಲ. ಆದ್ದರಿಂದ ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ” ಎಂದು ಹೇಳಿದ್ದಾರೆ.

“16 ದಿನಗಳ ತರಬೇತಿಯ ನಂತರ ಅಕ್ಟೋಬರ್ 1ರಂದು ಮೊದಲ ಬಾರಿಗೆ ನನ್ನನ್ನು ಸೇನೆ ಜೊತೆ ಹೋರಾಡಲು ಕಳುಹಿಸಿದರು. ಮೂರು ದಿನಗಳ ಕಾಲ ನಾನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದೆ. ನನ್ನ ಕಮಾಂಡರ್ ಜೊತೆಗಿನ ವಾಗ್ವಾದದ ನಂತರ ಉಕ್ರೇನ್ ಸೇನೆಗೆ ಶರಣಾದೆ” ಎಂದು ಹುಸೇನ್ ತಿಳಿಸಿದ್ದಾರೆ.

“ನಾನು ರಷ್ಯಾ ಸೇನೆ ಪರ ಹೋರಾಡಲು ಬಂದಿದ್ದ ವೇಳೆ ಎರಡರಿಂದ ಮೂರು ಕಿಲೋ ಮೀಟರ್ ದೂರದಲ್ಲಿ ಉಕ್ರೇನ್ ಸೇನೆಯ ಜಾಗವನ್ನು ಕಂಡೆ. ತಕ್ಷಣ ನಾನು ರೈಫಲ್ ಕೆಳಗಿಟ್ಟು ನಾನು ಹೋರಾಡಲು ಬಯಸುವುದಿಲ್ಲ ಎಂದು ಹೇಳಿದೆ. ನನಗೆ ಸಹಾಯ ಬೇಕು. ನಾನು ರಷ್ಯಾಕ್ಕೆ ಹಿಂತಿರುಗಲು ಬಯಸುವುದಿಲ್ಲಎಂದೆ” ಎಂದು ಹುಸೇನ್ ವಿಡಿಯೋದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಷ್ಯಾ ಸೇನೆಗೆ ಇತ್ತೀಚೆಗೆ ನೇಮಕ ಮಾಡಿಕೊಂಡಿರುವ 27 ಭಾರತೀಯ ಪ್ರಜೆಗಳನ್ನು ತಕ್ಷಣ ಬಿಡುಗಡೆ ಮಾಡಿ ತಾಯ್ನಾಡಿಗೆ ಕಳುಹಿಸುವಂತೆ ಒತ್ತಾಯಿಸಿದ್ದಾಗಿ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರ ಹೇಳಿಕೊಂಡಿತ್ತು. ಇದಾಗಿ ಕೆಲ ದಿನಗಳಲ್ಲಿ ವಿದ್ಯಾರ್ಥಿಯ ಶರಣಾಗತಿ ಸುದ್ದಿ ಬಂದಿದೆ.

ಯುವಜನರನ್ನು ಉದ್ಯೋಗದ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಿ, ಅಲ್ಲಿ ಶಸ್ತ್ರಾಸ್ತ ಕೊಟ್ಟು ಯುದ್ದ ಭೂಮಿಗೆ ಕಳುಹಿಸುವ ಜಾಲದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕನಿಷ್ಠ 15 ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲಿ ಅವರನ್ನು ರಷ್ಯಾ ಮಿಲಿಟರಿಯೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ವಿದ್ಯಾರ್ಥಿ ಉಕ್ರೇನ್ ಸೇನೆಗೆ ವಿದ್ಯಾರ್ಥಿ ಶರಣಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಣಧೀರ್ ಜೈಸ್ವಾಲ್, “ಆಮಿಷಗಳಿಗೆ ಬಲಿಯಾಗಿ ರಷ್ಯಾದ ಸೇನೆಗೆ ಸೇರುವುದು ಅಪಾಯಕಾರಿ” ಎಂದಿದ್ದಾರೆ.

ರಷ್ಯಾದ ಸಶಸ್ತ್ರ ಪಡೆಗಳಲ್ಲಿ 127 ಭಾರತೀಯ ನಾಗರಿಕರಿದ್ದರು. ಅವರಲ್ಲಿ 98 ಜನರನ್ನು ಮಿಲಿಟರಿಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಉಭಯ ರಾಷ್ಟ್ರಗಳ ಸರ್ಕಾರಗಳ ನಡುವಿನ ಮಾತುಕತೆಯ ಪರಿಣಾಮವಾಗಿ ಅವರು ಭಾರತಕ್ಕೆ ಮರಳಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಜುಲೈನಲ್ಲಿ ರಾಜ್ಯಸಭೆಗೆ ತಿಳಿಸಿತ್ತು.

ನವದೆಹಲಿಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರಕಾರ, ರಷ್ಯಾದ ರಕ್ಷಣಾ ಸಚಿವಾಲಯವು 2024 ರ ಏಪ್ರಿಲ್‌ನಿಂದ ಭಾರತೀಯರನ್ನು ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ. ಆದರೆ, ಸೈನಿಕ ಸೇವೆಗೆ ಸಂಬಂಧಿಸಿದ ಕಾಂಟ್ರಾಕ್ಟ್‌ಗಳು ಹಲವಾರು ಭಾರತೀಯರ ಬಿಡುಗಡೆಯನ್ನು ವಿಳಂಬಗೊಳಿಸಿವೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ತನ್ನ ಆಕ್ರಮಣವನ್ನು ಪ್ರಾರಂಭಿಸಿದ್ದು, ಈಗಲೂ ನಡೆಯುತ್ತಿದೆ. ಇದು ಎರಡನೇ ಮಹಾಯುದ್ಧದ ನಂತರ ಯುರೋಪ್‌ನಲ್ಲಿ ನಡೆಯುತ್ತಿರುವ ಅತ್ಯಂತ ಮಾರಕ ಸಂಘರ್ಷವಾಗಿದೆ.

ಮೇರಿ ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್, ಶಿಮೊನ್ ಸಕಾಗುಚಿ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...