Homeಮುಖಪುಟಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂನ ಉಲ್ಫಾ ಸಂಘಟನೆ

ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂನ ಉಲ್ಫಾ ಸಂಘಟನೆ

- Advertisement -
- Advertisement -

ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಂ (ಉಲ್ಫಾ) ನಡುವಿನ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ಇಂದು (ಶುಕ್ರವಾರ) ದೆಹಲಿಯಲ್ಲಿ ಸಹಿ ಹಾಕಲಾಗಿದೆ. ಈ ಮೂಲಕ ದಶಕಗಳ ಸಂಘರ್ಷ ಕೊನೆಗೊಳಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.

ಶಾಂತಿ ಒಪ್ಪಂದದ ಮೂಲಕ ಹಿಂಸೆಯಿಂದ ದೂರ ಸರಿಯಲು ಅರಬಿಂದಾ ರಾಜ್‌ಖೋವಾ ನೇತೃತ್ವದ ಉಲ್ಫಾ ಒಪ್ಪಿಕೊಂಡಿದೆ. ಆದರೆ, ಇದೇ ಸಂಘಟನೆಯ ಪರೇಶ್ ಬರುವಾ ನೇತೃತ್ವದ ಕಟ್ಟರ್ ಬಣ ಶಾಂತಿ ಒಪ್ಪಂದಕ್ಕೆ ಒಪ್ಪಿಲ್ಲ ಎಂದು ತಿಳಿದು ಬಂದಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಂ ಅನ್ನು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ 1990ರಲ್ಲಿ ಭಾರತದಲ್ಲಿ ನಿಷೇಧಿಸಲಾಗಿತ್ತು. ಈ ಸಂಘಟನೆ 1979 ರಿಂದ ಸಶಸ್ತ್ರ ಹೋರಾಟದ ಮೂಲಕ ಸ್ಥಳೀಯ ಅಸ್ಸಾಮಿ ಜನರಿಗೆ ಅಸ್ಸಾಂ ಸಾರ್ವಭೌಮ ರಾಷ್ಟ್ರವನ್ನು ರಚಿಸಲು ಒತ್ತಾಯಿಸುತ್ತಿತ್ತು.

ಶಾಂತಿ ಒಪ್ಪಂದವು ಅಕ್ರಮ ವಲಸೆ, ಸ್ಥಳೀಯ ಸಮುದಾಯಗಳಿಗೆ ಭೂಮಿಯ ಹಕ್ಕುಗಳು ಮತ್ತು ಅಸ್ಸಾಂನ ಅಭಿವೃದ್ಧಿಗೆ ಹಣಕಾಸಿನ ಪ್ಯಾಕೇಜ್‌ನಂತಹ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಶಾಂತಿ ಸಂಧಾನದ ಪರವಾಗಿದ್ದ ಉಲ್ಫಾ ಸಂಘಟನೆಯ ಹಲವಾರು ನಾಯಕರು ಉಪಸ್ಥಿತರಿದ್ದರು.

ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ಸಂಬಂಧ 2011ರಿಂದ ಕೇಂದ್ರ ಮತ್ತು ಅಸ್ಸಾಂ ಸರ್ಕಾರಗಳು ಉಲ್ಫಾ ನಾಯಕರ ಜೊತೆ ಮಾತುಕತೆ ನಡೆಸುತ್ತಿತ್ತು. ಈ ಮಾತುಕತೆಯ ಫಲವಾಗಿ ಇಂದು ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಸರ್ಕಾರ ಉಲ್ಫಾಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ” ಎಂದು ತಿಳಿಸಿದ್ದಾರೆ.

ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಾತನಾಡಿ, ಉಲ್ಫಾದ ಶಾಂತಿ ಚರ್ಚೆ ವಿರೋಧಿ ಬಣವನ್ನು ಮುನ್ನಡೆಸುತ್ತಿರುವ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ, ಸಂಘಟನೆಯ ಉಳಿದ ಎಲ್ಲಾ ಸಂಸ್ಥಾಪಕ ಸದಸ್ಯರು ಇಂದು ಶಾಂತಿ ಒಪ್ಪಂದದ ವೇಳೆ ಹಾಜರಿದ್ದರು. 1993ರಲ್ಲಿ ಆಗಿನ ಪ್ರಧಾನಿ ಪಿವಿ ನರಸಿಂಹರಾವ್ ಶಾಂತಿ ಒಪ್ಪಂದದ ಚರ್ಚೆಗೆ ಮುನ್ನುಡಿ ಬರೆದಿದ್ದರು. ಇಂದು ಬಂದಿದ್ದ ಜನರು ಅಂದೂ ಕೂಡ ದೆಹಲಿಗೆ ಬಂದಿದ್ದರು. ಅಂದು ಆರಂಭಿಕ ಚರ್ಚೆ ನಡೆದಿತ್ತು. ಆದರೆ, ತಾರ್ಕಿಕ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಗೂ ಇಂದು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಉಲ್ಫಾವನ್ನು ವಿಸರ್ಜಿಸಲಾಗುವುದು ಎಂದು ಅದರ ನಾಯಕರು ನಮಗೆ ಭರವಸೆ ನೀಡಿದ್ದಾರೆ. ಅವರು ಈಗ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆ ಶಿಬಿರಗಳನ್ನು ತೊರೆದು, ತಮ್ಮ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಲಿದ್ದಾರೆ. ಒಟ್ಟು 726 ಉಲ್ಫಾ ಕಾರ್ಯಕರ್ತರು ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗುಜ್ಜರ್-ಬಕರ್ವಾಲ್- ಸೇನೆ ಸಂಬಂಧವೇನು? ಪೂಂಛ್‌ ಘಟನೆಗೆ ಸರಕಾರ ತ್ವರಿತವಾಗಿ ಸ್ಪಂದಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...