Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...