Homeಮುಖಪುಟಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದಿದ್ದಾರೆ.

- Advertisement -
- Advertisement -

ಲಡಾಖ್ ಹಾಗೂ ಜಮ್ಮುಕಾಶ್ಮೀರ ಎಲ್ಲಿಯವರೆಗೆ ಕೇಂದ್ರಾಡಳಿತವಾಗಿರುತ್ತದೋ ಅಲ್ಲಿಯವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲ ಘೋಷಿಸಿದ್ದಾರೆ.

2019 ರ ಆಗಸ್ಟ್ 5 ರಂದು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿರುವ ಅವರ ಪಕ್ಷ, ಕೇಂದ್ರ ನಡೆಯನ್ನು ಮುಂದಕ್ಕೂ ವಿರೋಧಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಬರೆದ ಲೇಖನದಲ್ಲಿ ತಿಳಿಸಿದ್ದಾರೆ.

ಆಗಸ್ಟ್‌‌ 5 ಕ್ಕಿಂತಲೂ ಮೊದಲು ಆಗಿನ ಜಮ್ಮುಕಾಶ್ಮಿರದ ರಾಜ್ಯಪಾಲ ಸತ್ಪಾಲ್ ಮಲಿಕ್ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದೆ. ಆದರೆ ಆಗ ಕಾಶ್ಮೀರದ 370 ವಿಧಿಯ ಬಗ್ಗೆ ಚರ್ಚಿಸಿರಲಿಲ್ಲ. ನಂತರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಏಕಾಏಕಿಯಾಗಿ ವಿಶೇಷ ಸ್ಥಾನಮಾನ ರದ್ದತಿ ಮಾಡಲಾಯ್ತು. ಈಗ ಮುಂಬರುವ ವಿಧಾನಸಭಾ ಚುನಾವಣೆಗೆ ಹೆಚ್ಚುವರಿ ಸೈನಿಕರನ್ನು ಶ್ರೀನಗರಕ್ಕೆ ಕಳುಹಿಸಲಾಗುತ್ತಿದೆ ಎಂದು ಒಮರ್‌ ಅಬ್ದುಲ್ಲ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಲೇಖನದಲ್ಲಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದು ಹೇಳುವ ಮೂಲಕ ಗಮನಸೆಳೆದಿದ್ದಾರೆ. ಅವರು ಹೆಸರಿಸಿರುವ ಕೆಲ ಉದಾಹರಣೆಗಳು ಕೆಳಗಿನಂತಿವೆ.

1. ಆರ್ಟಿಕಲ್ 370 ಉಗ್ರಗಾಮಿತ್ವಕ್ಕೆ ಉತ್ತೇಜನ ನೀಡಿತ್ತು ಎಂದು ಹೇಳಲಾಗುತ್ತಿತ್ತು. ಆದರೆ ಅದು ರದ್ದಾದ ಒಂದು ವರ್ಷದ ನಂತರ ಜಮ್ಮುಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆಯಲ್ಲ?

2. ಆರ್ಟಿಕಲ್ 370, ಜನರನ್ನು ಬಡತನದಲ್ಲಿರಿಸಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಒಂದು ವರ್ಷದ ನಂತರವೂ ಇಲ್ಲಿನ ಜನರಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

3. 370 ನೇ ವಿಧಿ ರದ್ದತಿಯಿಂದ ರಾಜ್ಯದಲ್ಲಿ ಹೂಡಿಕೆ ಹೆಚ್ಚಾಗಲಿದೆ ಎನ್ನಲಾಗಿತ್ತು. ಆದರೆ ಭದ್ರತೆ ಮತ್ತು ಮಿಲಿಟರೀಕರಣದಿಂದಾಗಿ ಕಳೆದ ಒಂದು ವರ್ಷದಲ್ಲಿ ಯಾವುದೇ ಹೂಡಿಕೆಯಾಗಿಲ್ಲ.

4. 370 ನೇ ವಿಧಿಯಿಂದಾಗಿ ಜಮ್ಮುಕಾಶ್ಮೀರ ಹಿಂದುಳಿದಿದೆ ಎಂದು ಹೇಳಲಾಗುತ್ತಿತ್ತು. ಆದರೆ ಹಲವಾರು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ರಾಜ್ಯವು ‘ಅಭಿವೃದ್ಧಿ ಹೊಂದಿದ’ ಗುಜರಾತ್ ರಾಜ್ಯಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ.

ಒಮರ್‌ ಅಬ್ದುಲ್ಲಾ ಕೇಂದ್ರಾಡಳಿತ ಪ್ರದೇಶಗಳ ರಚನೆಯನ್ನು ಪ್ರಶ್ನಿಸಿದ್ದಾರೆ. ಒಂದು ರಾಜ್ಯವನ್ನು ಕೇಂದ್ರಾಡಳಿತವನ್ನಾಗಿ ಮಾಡಿದ್ದು ಇದುವೆ ಮೊದಲು ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಮೇಲೆ ತಮ್ಮ ಪಕ್ಷಕ್ಕೆ ನಂಬಿಕೆಯಿದೆ ಎಂದು ಪುನರುಚ್ಚರಿಸಿದ ಅವರು ಸುಪ್ರೀಂ ಕೋರ್ಟ್‌ನಲ್ಲಿ 370 ನೇ ವಿಧಿಯನ್ನು ಹಿಂಪಡೆಯುವುದು ಹಾಗೂ ಅಕ್ರಮವಾಗಿ ಬಂಧನದಲ್ಲಿರುವ ಜಮ್ಮುಕಾಶ್ಮೀರದಲ್ಲಿನ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಲು ಅಹಿಂಸಾತ್ಮಕ ಮಾರ್ಗದ ಹೋರಾಟಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

“ಕೇಂದ್ರ ಸರ್ಕಾರವು ಜಮ್ಮಕಾಶ್ಮೀರಕ್ಕೆ ಮಾಡಿದ ಅನ್ಯಾಯಗಳನ್ನು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷವು ಒಪ್ಪುವುದಿಲ್ಲ” ಎಂದು ಅವರು ತಮ್ಮ ಲೇಖನದಲ್ಲಿ ದೃಡಪಡಿಸಿದಿದ್ದಾರೆ.


ಇದನ್ನೂ ಓದಿ: ಒಮರ್ ಅಬ್ದುಲ್ಲಾ ಬಂಧನದ ವಿರುದ್ದ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಶಾಂತನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...