Homeಮುಖಪುಟಉಮರ್ ಖಾಲಿದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಾಧೀಶ ಮಿಶ್ರಾ

ಉಮರ್ ಖಾಲಿದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಾಧೀಶ ಮಿಶ್ರಾ

- Advertisement -
- Advertisement -

ಉಮರ್ ಖಾಲಿದ್ ಅವರ ಜಾಮೀನು ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಪಿಕೆ ಮಿಶ್ರಾ ಅವರು ಹಿಂದೆ ಸರಿದಿದ್ದು, ವಿಚಾರಣೆಯನ್ನು ಮುಂದೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಅರ್ಜಿಯ ವಿಚಾರಣೆಯನ್ನು ಮತ್ತೊಂದು ಪೀಠವು ಆಗಸ್ಟ್ 17 ರಂದು ಕೈಗೆತ್ತಿಕೊಳ್ಳಲಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ನಂತರ ಖಾಲಿದ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆಯ ವಿಚಾರವಾಗಿ ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 23ರಿಂದ ಫೆಬ್ರವರಿ 26, 2020ರವರೆಗೆ ನಡೆದ ಹೋರಾಟದಲ್ಲಿ ಕಾಯ್ದೆಯನ್ನು ಬೆಂಬಲಿಸುವವರ ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆ ನಡೆಯಿತು. ಈ ಸಂದರ್ಭದಲ್ಲಿ 53 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ. ಈ ಪ್ರಕರಣದಲ್ಲಿ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ಯುಎಪಿಎ) ಕಾಯಿದೆಯಡಿ ಪ್ರಕರಣ ದಾಖಲಿಸಲಾಯಿತು.

ದೆಹಲಿ ಪೊಲೀಸರು, ಈ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವನ್ನು ದೂಷಿಸುವ ದೊಡ್ಡ ಪಿತೂರಿಯ ಭಾಗವಾಗಿದೆ. ಹಾಗಾಗಿ ಈ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ಪಿತೂರಿ ಆರೋಪಗಳ ಆಧಾರದ ಮೇಲೆ ಖಲೀದ್ ಅವರನ್ನು ಸೆಪ್ಟೆಂಬರ್ 13, 2020 ರಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಆಸ್ತಿ ಹಾನಿ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆತನನ್ನು ಬಂಧಿಸಲಾಯಿತು.

ಇದನ್ನೂ ಓದಿ: UAPA ಪ್ರಕರಣ: ಜು.24ಕ್ಕೆ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read