Homeಮುಖಪುಟಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು livelaw.in ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಉಮರ್ ಖಾಲಿದ್ ಮತ್ತು ಮತ್ತೊಬ್ಬ ಸಹ-ಆರೋಪಿ ಶಾರ್ಜೀಲ್ ಇಮಾಮ್ ಅವರ ವಿರುದ್ಧದ ಪುರಾವೆಗಳು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರ ಅಡಿಯಲ್ಲಿ ಮೇಲ್ನೋಟಕ್ಕೆ ಅವರ ವಿರುದ್ಧ ಪ್ರಕರಣವನ್ನು ದೃಢಪಡಿಸುತ್ತವೆ ಎಂದು ಹೇಳಿ ಜಾಮೀನು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ರಾಸಿಕ್ಯೂಷನ್ ಸಲ್ಲಿಸಿದ ದಾಖಲೆಗಳು ಮೇಲ್ನೋಟಕ್ಕೆ ಅವರು “ಕೇವಲ ಬಿಡಿಬಿಡಿಯಾದ ಅಥವಾ ಸ್ಥಳೀಯ ಘಟನೆಗಳಿಗಿಂತ ಹೆಚ್ಚಾಗಿ, ಯೋಜನೆಯ ಹಂತದಿಂದ ಹಿಡಿದು ಸಜ್ಜುಗೊಳಿಸುವಿಕೆ ಮತ್ತು ಕಾರ್ಯತಂತ್ರ ರೂಪಿಸುವವರೆಗೆ ಕೇಂದ್ರಬಿಂದುವಾಗಿ ಪ್ರಮುಖ ಪಾತ್ರ” ವಹಿಸಿರುವುದನ್ನು ಸೂಚಿಸುತ್ತವೆ ಎಂದು ಪೀಠವು ಹೇಳಿತ್ತು.

ಅದೇ ಸಮಯದಲ್ಲಿ, ನ್ಯಾಯಾಲಯವು ಇದೇ ಪ್ರಕರಣದ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ನ್ಯಾಯಾಲಯವು ಖಾಲಿದ್ ಮತ್ತು ಇಮಾಮ್ ಅವರ ಮೇಲೆ ನಿರ್ಬಂಧವನ್ನೂ ವಿಧಿಸಿದ್ದು, ಸಂರಕ್ಷಿತ ಸಾಕ್ಷಿಗಳ ವಿಚಾರಣೆಯ ನಂತರ ಅಥವಾ ಜನವರಿ 5ರಿಂದ ಒಂದು ವರ್ಷದ ನಂತರವಷ್ಟೇ ಅವರು ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದಿತ್ತು.

ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಅವರು ಉಮರ್ ಖಾಲಿದ್ ಪರವಾಗಿ ಮರು ಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದರು. ಈ ಪ್ರಕರಣವು ಈಗಾಗಲೇ ಬುಧವಾರದಂದು ವಿಚಾರಣೆಗೆ ಪಟ್ಟಿ ಮಾಡಲ್ಪಟ್ಟಿದೆ ಎಂದು ತಿಳಿಸಿದ ಅವರು, ಇದನ್ನು “ಮುಕ್ತ ನ್ಯಾಯಾಲಯದಲ್ಲಿ” ವಿಚಾರಣೆ ನಡೆಸಬೇಕೆಂದು ವಿನಂತಿಸಿದರು. ಸಾಮಾನ್ಯವಾಗಿ ಇಂತಹ ಅರ್ಜಿಗಳನ್ನು ನ್ಯಾಯಾಧೀಶರು ತಮ್ಮ ಚೇಂಬರ್‌ಗಳಲ್ಲಿ ಪರಿಶೀಲಿಸುತ್ತಾರೆ, ಆದರೆ ಈ ಪ್ರಕರಣದ ಮಹತ್ವದ ಹಿನ್ನೆಲೆಯಲ್ಲಿ ಮುಕ್ತವಾಗಿ ವಾದಗಳನ್ನು ಆಲಿಸಬೇಕು ಎಂಬುದು ಖಾಲಿದ್ ಅವರ ಪರ ವಕೀಲರ ಆಗ್ರಹವಾಗಿದೆ ಎಂದು livelaw.in ವರದಿ ವಿವರಿಸಿದೆ.

 




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...