HomeಮುಖಪುಟUAPA ನಿಬಂಧನೆಗಳ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಉಮರ್ ಖಾಲಿದ್

UAPA ನಿಬಂಧನೆಗಳ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಉಮರ್ ಖಾಲಿದ್

- Advertisement -
- Advertisement -

ಹೋರಾಟಗಾರ ಉಮರ್ ಖಾಲಿದ್ ಅವರು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಶುಕ್ರವಾರ ಲೈವ್ ಲಾ ವರದಿ ಮಾಡಿದೆ.

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಖಾಲಿದ್ ಸೆಪ್ಟೆಂಬರ್ 2020ರಿಂದ ಬಂಧಿತರಾಗಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 23 ರಿಂದ ಫೆಬ್ರವರಿ 26, 2020 ರವರೆಗೆ, ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಯಾಗಿ 53 ಮಂದಿ ಸತ್ತರು ಮತ್ತು ನೂರಾರು ಜನರು ಗಾಯಗೊಂಡರು ಈ ಪ್ರಕರಣದಲ್ಲಿ ಖಾಲಿದ್ ಬಂಧನವಾಗಿದೆ.

”ಈ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಮಾನಹಾನಿ ಮಾಡುವ ದೊಡ್ಡ ಪಿತೂರಿಯ ಭಾಗವಾಗಿದೆ” ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಶುಕ್ರವಾರ, ವಿಭಾಗೀಯ ಪೀಠವು ಯುಎಪಿಎ ನಿಬಂಧನೆಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಇತರ ಅರ್ಜಿಗಳೊಂದಿಗೆ ಖಾಲಿದ್ ಅವರ ಅರ್ಜಿಯನ್ನು ಟ್ಯಾಗ್ ಮಾಡಿದೆ.

ಸೆಪ್ಟೆಂಬರ್ 13, 2020ರಂದು ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟ ಖಾಲಿದ್ ಅವರು ಹಿಂಸಾಚಾರದಲ್ಲಿ ಯಾವುದೇ ಪಾತ್ರವನ್ನು ಹೊಂದಿಲ್ಲ ಅಥವಾ ಪ್ರಕರಣದ ಇತರ ಆರೋಪಿಗಳೊಂದಿಗೆ ಯಾವುದೇ “ಪಿತೂರಿಯ ಸಂಚು” ಮಾಡಿಲ್ಲ ಎಂದು ವಾದಿಸಿ ಖಾಲಿದ್ ಪರ ವಕೀಲರು ಜಾಮೀನು ಕೋರುತ್ತಿದ್ದಾರೆ.

ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ನಂತರ ಖಾಲಿದ್ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.

ಖಾಲಿದ್ ಪ್ರಕರಣವು ಮೊದಲು ಮೇ 18 ರಂದು ಸುಪ್ರೀಂ ಕೋರ್ಟ್‌ಗೆ ಬಂದಿತು ಮತ್ತು ನಂತರ ಆರು ಬಾರಿ ಮುಂದೂಡಲ್ಪಟ್ಟಿತು. ಪೊಲೀಸರು ಪ್ರತಿ-ಅಫಿಡವಿಟ್ ಸಲ್ಲಿಸಲು ಹೆಚ್ಚಿನ ಸಮಯ ಕೋರಿದರು, ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿಯುತ್ತಾರೆ, ಪ್ರಕರಣವನ್ನು ಪಟ್ಟಿ ಮಾಡಲಾಗಿದೆ. ವಿವಿಧ ದಿನ ಮತ್ತು ಖಾಲಿದ್ ಅವರ ಸಲಹೆಗಾರರ ಅಲಭ್ಯತೆಯಿಂದಾಗಿ ಅರ್ಜಿ ವಿಚಾರಣೆಯನ್ನು ಮೂಂದೂಡಲಾಗಿತ್ತು.

ಇದನ್ನೂ ಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ: 6ನೇ ಬಾರಿ ಮುಂದೂಡಿದ ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...