Homeಮುಖಪುಟಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

- Advertisement -
- Advertisement -

2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್ ಅವರನ್ನು ಗುರುವಾರ ಕೈಕೋಳದಲ್ಲಿ ದೆಹಲಿ ನ್ಯಾಯಾಲಯಕ್ಕೆ ಕರೆತರಲಾಗಿದೆ. ಈ ರೀತಿ ಮಾಡದಂತೆ ನ್ಯಾಯಾಲಯ ಆದೇಶ ನೀಡಿದ್ದರೂ, ಆದೇಶ ಧಿಕ್ಕರಿಸಿ ಪೊಲೀಸರು ಇಂತಹ ಕೃತ್ಯವೆಸಗಿದ್ದಾರೆ.

ಇದರಿಂದ ನ್ಯಾಯಾಲಯವು ಮಹಾನಿರ್ದೇಶಕರಿಗೆ (ಜೈಲುಗಳು) ನೋಟಿಸ್ ಜಾರಿ ಮಾಡಿದ್ದು, ಜೈಲು ಅಧಿಕಾರಿಗಳು ಕೈಕೋಳ ಹಾಕುವಂತೆ ಆದೇಶ ಹೊರಡಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಅಮಿತಾಭ್ ರಾವತ್ “ದೆಹಲಿಯ ಪೊಲೀಸ್ ಆಯುಕ್ತರ ಗಮನಕ್ಕೆ ಈ ವಿಷಯ ತರಲು ಸೂಕ್ತವೆಂದು ಭಾವಿಸುತ್ತೇನೆ. ಆರೋಪಿ ಉಮರ್ ಖಾಲಿದ್‌ ಅವರನ್ನು ಇಂದು ಕೈಕೋಳದಲ್ಲಿ ಕರೆತರಲಾಗಿದೆ. ಇದು ಯಾವ ಆಧಾರದ ಮೇಲೆ, ಆದೇಶದ ಮೇಲೆ ಎಂಬುದನ್ನು ಜವಾಬ್ದಾರಿಯುತ ಹಿರಿಯ ಅಧಿಕಾರಿಯ ಮೂಲಕ ತನಿಖೆಯ ನಂತರ ವರದಿಯನ್ನು ಸಲ್ಲಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ದೆಹಲಿ ಕಾರಾಗೃಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು,“ಅವರು ನಿಜವಾಗಿಯೂ ಕೈಕೋಳ ಹಾಕಿದ್ದರೆ ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ಕಾರಣ ತಿಳಿಯಲು ಸತ್ಯಶೋಧನೆ ನಡೆಸಲಾಗುವುದು. ಹಿರಿಯ ಅಧಿಕಾರಿಯೊಬ್ಬರು ಕೈಕೋಳಕ್ಕೆ ಆದೇಶ ನೀಡಿದ್ದಾರೆಯೇ ಅಥವಾ ಹಿಂದಿನ ನ್ಯಾಯಾಲಯದ ಆದೇಶದ ಷರತ್ತುಗಳನ್ನು ಪರಿಶೀಲಿಸುತ್ತೇವೆ” ಎಂದಿದ್ದಾರೆ.

“ಅವರನ್ನು ಏಕೆ ಕೈಕೋಳದಲ್ಲಿ ಕರೆತರಲಾಗಿದೆ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವಿಶೇಷ ಘಟಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಖಾಲಿದ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕ ಮತ್ತು ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಗಳು ನೋಟಿಸ್ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

’ನ್ಯಾಯಾಲಯದಿಂದ ಯಾವುದೇ ಆದೇಶವಿಲ್ಲದಿದ್ದರೂ ಮತ್ತು ಎರಡು ಪ್ರತ್ಯೇಕ ನ್ಯಾಯಾಲಯಗಳು ನೀಡಿದ ಎರಡು ವ್ಯತಿರಿಕ್ತ ಆದೇಶಗಳ ಹೊರತಾಗಿಯೂ ಪೊಲೀಸರು ಅವರನ್ನು ಕೈಕೋಳದಲ್ಲಿ ಹಾಜರುಪಡಿಸಿದ್ದಾರೆ’ ಎಂದು ಉಮರ್ ಪರ ಹಿರಿಯ ವಕೀಲ ತ್ರಿದೀಪ್ ಪೈಸ್  ತಿಳಿಸಿದ ನಂತರ ಎಎಸ್‌ಜೆ ರಾವತ್ ಸಂಜೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಇದು ಆರೋಪಿಯ ಹಕ್ಕುಗಳ ಉಲ್ಲಂಘನೆಯಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ತಪ್ಪುಗಳನ್ನು ಕಂಡುಹಿಡಿಯಲು ತನಿಖೆ ನಡೆಸಬೇಕು ಎಂದು ಹಿರಿಯ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಉಮರ್ ಖಾಲಿದ್ ಮತ್ತು ಇತರ ಹಲವರ ವಿರುದ್ಧ ಕಠಿಣವಾದ ಭಯೋತ್ಪಾದನಾ ವಿರೋಧಿ ಕಾನೂನಾದ ‘ಯುಎಪಿಎ’ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅವರನ್ನು ದೆಹಲಿ ಗಲಭೆಯ ‘ಮಾಸ್ಟರ್‌ಮೈಂಡ್‌ಗಳು’ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.


ಇದನ್ನೂ ಓದಿ: ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್ ಲಾಯರ್ ಜಗದೀಶ್ ರ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ನಿಮ್ಮ ಅನಿಸಿಕೆಗಳು ಅವರ ಹೋರಾಟದ ಬಗ್ಗೆ ತಿಳಿಸಿ ಕಾರ್ಯಂಗ ನ್ಯಾಯಾಂಗ ಕೆಲಸಮಾಡುತ್ತಿಲ್ಲ ಅನಿಸುತ್ತಿದೆ ಸರ್ಕಾರ ಇದ್ದು ಇಲ್ಲದಂತಿದೆ ನಿಮ್ಮ ಹೋರಾಟ ಹೋರಾಟ ಗಾರರು ಜೊತೆಯಲಿ

  2. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೂ ದಿಕ್ಕರಿಸಿ ಉಮರ್ ಕಾಲೀದ್ ಅವರಿಗೆ ಕೈಕೋಳ ತೊಡಿಸಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...