Homeಮುಖಪುಟಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ಉಮರ್ ಖಾಲಿದ್‌ಗೆ ಅ. 22 ರವರೆಗೆ ನ್ಯಾಯಾಂಗ ಬಂಧನ: ದೆಹಲಿ ಕೋರ್ಟ್

ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ರನ್ನು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿತ್ತು.

- Advertisement -
- Advertisement -

ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರನ್ನು ಅಕ್ಟೋಬರ್ 22 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಬೇಕೆಂದು ದೆಹಲಿ ನ್ಯಾಯಾಲಯ ಆದೇಶಿಸಿದೆ.

ಈ ವರ್ಷದ ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿಯ ಈಶಾನ್ಯ ಭಾಗಗಳಲ್ಲಿ ಸಂಭವಿಸಿದ ಗಲಭೆಗಳಲ್ಲಿ ಉಮರ್ ಖಾಲಿದ್‌ರನ್ನು ಸೆಪ್ಟೆಂಬರ್ 13 ರಂದು ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಈ ಮೊದಲು ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ UAPA ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಖಾಲಿದ್ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡ ನಂತರ ಜುಲೈ 31 ರಂದು ವಿಚಾರಣೆ ನಡೆಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಪೊಲೀಸರು ಆತನನ್ನು ಬಂಧಿಸಿದರು.

ಇದನ್ನೂ ಓದಿ: ಉಮರ್ ಖಾಲಿದ್ ಬಂಧನಕ್ಕೆ ಟ್ವಿಟರ್‌ನಲ್ಲಿ ಖಂಡನೆ: #StandWithUmarKhalid ಟ್ರೆಂಡಿಂಗ್

10 ದಿನಗಳ ಪೊಲೀಸ್ ಕಸ್ಟಡಿ ಇಂದು ಕೊನೆಗೊಂಡ ಕಾರಣ, ಅವರನ್ನು ಕಾರ್ಕಾರ್ಡೂಮಾದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಮಿತಾಬ್ ರಾವತ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಖಾಲಿದ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಕೋರಿದ್ದ ದೆಹಲಿ ಪೊಲೀಸರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಆದೇಶದ ನಂತರ, ಉಮರ್ ಖಾಲಿದ್ ತನ್ನ ಹೆತ್ತವರನ್ನು ಭೇಟಿಯಾಗಲು ಮತ್ತು ಅವರ ಕನ್ನಡಕ ಮತ್ತು ಕೆಲವು ಪುಸ್ತಕಗಳನ್ನು ಜೈಲಿಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ವಿನಂತಿಸಿದ. ಇದಕ್ಕಾಗಿ ಸೂಕ್ತ ಅರ್ಜಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.

ಫೆಬ್ರವರಿ 23 ರಿಂದ 26 ರವರೆಗೆ ನಡೆದ ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿನ ಹಿಂಸಾಚಾರ, ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳ ನಂತರ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾಗಿದ್ದವು.


ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...