Homeಮುಖಪುಟಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಹೋರಾಟಗಾರ ಉಮರ್‌ ಖಾಲಿದ್‌ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ. ವಾಪಾಸ್ ಪಡೆದಿರುವ ಕಾರಣ ಈ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಸನ್ನಿವೇಶಗಳ ಬದಲಾವಣೆಯಿಂದಾಗಿ ಅರ್ಜಿಯನ್ನು ವಾಪಸ್‌ ಪಡೆದುಕೊಳ್ಳಲಾಗುತ್ತಿದೆ. ಖಾಲಿದ್ ಅವರು ವಿಚಾರಣಾ ನ್ಯಾಯಾಲಯದಿಂದ ಮತ್ತೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂದು ಖಾಲಿದ್‌ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಹಾಗೂ ಪಂಕಜ್‌ ಮಿತ್ತಲ್‌ ಅವರ ಪೀಠ ಈ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದೆ. ಆದರೆ, ಖಾಲಿದ್‌ ವಿರುದ್ಧ ದಾಖಲಿಸಲಾದ ಯುಎಪಿಎ ಪ್ರಕರಣದ ಸಂವಿಧಾನ ಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಮುಂದುವರಿಸುವುದಾಗಿ ಕಪಿಲ್‌ ಸಿಬಲ್‌ ತಿಳಿಸಿದ್ದಾರೆ.

ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ನಡೆದಿದ್ದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ಸೆಪ್ಟೆಂಬರ್ 2020 ರಿಂದ ಜೈಲಿನಲ್ಲಿದ್ದಾರೆ.

2022 ರ ಅಕ್ಟೋಬರ್‌ನಲ್ಲಿ ಜಾಮೀನು ನಿರಾಕರಿಸಿದ್ದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಖಾಲಿದ್ ಸಲ್ಲಿಸಿದ್ದ ವಿಶೇಷ ರಜಾ ಕಾಲದ ಅರ್ಜಿಯನ್ನು ಸುಪ್ರೀಂ ಪೀಠ ವಿಚಾರಣೆ ನಡೆಸಿತ್ತು. ಖಾಲಿದ್ ಸಂವಿಧಾನದ 32ನೇ ವಿಧಿಯಡಿಯಲ್ಲಿ ಭಯೋತ್ಪಾದನೆ-ವಿರೋಧಿ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಯುಎಪಿಎ ನಿಬಂಧನೆಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಿಂದಿನ ಅರ್ಜಿಗಳೊಂದಿಗೆ ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಯನ್ನು ಟ್ಯಾಗ್ ಮಾಡಿತ್ತು. ಜಾಮೀನು ಅರ್ಜಿಯೊಂದಿಗೆ ಯುಎಪಿಎ ನಿಬಂಧನೆಗಳನ್ನು ಪ್ರಶ್ನಿಸಿರುವ ಅರ್ಜಿಗಳನ್ನುಆಲಿಸಲು ಸುಪ್ರೀಂ ನಿರ್ಧರಿಸಿತ್ತು.

ಇದನ್ನೂ ಓದಿ: ದೆಹಲಿ ಚಲೋ ಮೆರವಣಿಗೆ: ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ ಎಂದ ರೈತ ಮುಖಂಡರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...