Homeಮುಖಪುಟಉಮರ್ ಖಾಲಿದ್ ಜಾಮೀನು ಅರ್ಜಿ: 6ನೇ ಬಾರಿ ಮುಂದೂಡಿದ ಸುಪ್ರೀಂ ಕೋರ್ಟ್

ಉಮರ್ ಖಾಲಿದ್ ಜಾಮೀನು ಅರ್ಜಿ: 6ನೇ ಬಾರಿ ಮುಂದೂಡಿದ ಸುಪ್ರೀಂ ಕೋರ್ಟ್

- Advertisement -
- Advertisement -

2020ರ ಈಶಾನ್ಯ ದೆಹಲಿ ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಜೆಎನ್‌ ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 4 ವಾರಗಳ ಕಾಲ ಮುಂದೂಡಿದೆ.

ಈ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಮಾನಹಾನಿ ಮಾಡುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಉಮರ್ ಖಾಲಿದ್ ಅವರು ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ಇಲ್ಲ ಮತ್ತು ಪ್ರಕರಣದ ಇತರ ಆರೋಪಿಗಳೊಂದಿಗೆ ಯಾವುದೇ “ಪಿತೂರಿಯ ಸಂಚು” ಮಾಡಿಲ್ಲ ಎಂದು ಜಾಮೀನು ಕೋರಿದ್ದಾರೆ.

ಮಂಗಳವಾರದ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಪ್ರಕರಣ ಸಂಬಂಧ ವಿಸ್ಕೃತ ವಿಚಾರಣೆಯ ಅಗತ್ಯ ಇದೆ. ಸಾಕ್ಷ್ಯಚಿತ್ರ ಸಾಕ್ಷ್ಯವನ್ನು ಪರಿಶೀಲಿಸಬೇಕಾಗಿದೆ ಮತ್ತು ಪ್ರಕರಣವನ್ನು ನಾಲ್ಕು ವಾರಗಳವರೆಗೆ ಮುಂದೂಡುವುದಾಗಿ ಹೇಳಿದರು.

”ಈ ಪ್ರಕರಣದಲ್ಲಿ ನಾವು ಪ್ರತಿಯೊಂದು ದಾಖಲೆಗಳನ್ನು ಪರಿಶೀಲನೆ ನಡೆಸಬೇಕಿದೆ. ಪ್ರಕರಣ ಸಂಬಂಧ ನಿಮ್ಮ ಬಳಿ ಇರುವ ದಾಖಲೆಯನ್ನು ಸಲ್ಲಿಸಿ” ಎಂದು ಖಾಲಿದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಪೀಠ ಸೂಚಿಸಿತು.

ಭಯೋತ್ಪಾದನೆ, ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹಿಸುವುದು ಮತ್ತು ಪಿತೂರಿ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯ ಕೆಲವು ನಿಬಂಧನೆಗಳನ್ನು ಪ್ರಕರಣದಲ್ಲಿ ಅನ್ವಯಿಸಲಾಗುವುದಿಲ್ಲ ಎಂದು ಸಿಬಲ್ ವಾದಿಸಿದರು.

ಈ ಮೊದಲು ಮೇ 18ರಂದು ಖಾಲಿದ್ ಅವರ ಪ್ರಕರಣವು ಸುಪ್ರೀಂ ಕೋರ್ಟ್‌ ಮುಂದೆ ಬಂದಿತ್ತು. ಆನಂತರ ಪೊಲೀಸರು ಪ್ರತಿ-ಅಫಿಡವಿಟ್ ಸಲ್ಲಿಸಲು ಹೆಚ್ಚಿನ ಸಮಯ ಕೇಳಿದರು, ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿದರು ಹೀಗೆ ನಾನಾಕಾರಣಗಳಿಂದ ಈ ಪ್ರಕರಣ ಐದು ಬಾರಿ ಮುಂದೂಡಲಾಗಿದೆ.

ನಾಗರಿಕರ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನ್ಯಾಯಾಲಯಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ ಪುನರಾವರ್ತಿತ ಮುಂದೂಡಿಕೆಗಳು ಸಂಭವಿಸುತ್ತಿವೆ.

2022ರ ಅಕ್ಟೋಬರ್ 18ರಂದು ದೆಹಲಿ ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಖಾಲಿದ್ ಅವರಿಗೆ ಉಳಿದ ಆರೋಪಿಗಳ ಜತೆ ಸಂಬಂಧ ಇತ್ತು. ಹೀಗಾಗಿ ಅವರ ಮೇಲಿನ ಆರೋಪ ಮೇಲ್ನೋಟಕ್ಕೆ ನಿಜವೆಂದು ತೋರುತ್ತದೆ. ಆರೋಪಿಯ ಕೃತ್ಯಗಳು ಪ್ರಾಥಮಿಕವಾಗಿ ಯುಪಿಎ ಕಾಯ್ದೆಯಡಿ ಭಯೋತ್ಪಾದಕ ಕೃತ್ಯ ಎಂದು ಅರ್ಹತೆ ಪಡೆದಿದೆ ಎಂದು ಕೋರ್ಟ್‌ ಹೇಳಿತ್ತು.

53 ಮಂದಿಯ ಸಾವು ಹಾಗೂ 700 ಮಂದಿ ಗಾಯಗೊಳ್ಳಲು ಕಾರಣವಾದ ಈ ಘಟನೆಯ ಹಿಂದೆ ಮಾಸ್ಟರ್ ಮೈಂಡ್‌ಗಳಾಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಖಾಲಿದ್, ಶಾರ್ಜಿಲ್ ಇಮಾಮ್ ಸಹಿತ ಹಲವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಇದನ್ನೂ ಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಾಧೀಶ ಮಿಶ್ರಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಗ್ನಿಪಥ ಯೋಜನೆ ಬಗ್ಗೆ ಮಾತನಾಡದಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

0
ಅಗ್ನಿಪಥ ಯೋಜನೆಯನ್ನು ರಾಜಕೀಯಗೊಳಿಸದಂತೆ ಚುನಾವಣಾ ಆಯೋಗವು ತನ್ನ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು, ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪ್ರತಿಪಾದಿಸಿದರು. ಚುನಾವಣಾ...