Homeಮುಖಪುಟವಿಶ್ವಸಂಸ್ಥೆಯ ಕಚೇರಿಗಳಲ್ಲಿ ಧ್ವಜ ಅರ್ಧಕ್ಕೆ ಇಳಿಸಿ ಮೌನಾಚರಣೆ

ವಿಶ್ವಸಂಸ್ಥೆಯ ಕಚೇರಿಗಳಲ್ಲಿ ಧ್ವಜ ಅರ್ಧಕ್ಕೆ ಇಳಿಸಿ ಮೌನಾಚರಣೆ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಸಂದರ್ಭದಲ್ಲಿ ಗಾಝಾದಲ್ಲಿ ಹತರಾದ ಸಹೋದ್ಯೋಗಿಗಳ ಸ್ಮರಣಾರ್ಥ  ವಿಶ್ವಸಂಸ್ಥೆಯ ಸಿಬ್ಬಂದಿಗಳು 1 ನಿಮಿಷ ಮೌನಾಚರಣೆ ಮಾಡಿದ್ದು, ಏಷ್ಯದಾದ್ಯಂತ ವಿಶ್ವಸಂಸ್ಥೆಯ ಕಾಂಪೌಂಡ್‌ಗಳಲ್ಲಿ ಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ.

ವಿಶ್ವಸಂಸ್ಥೆಯ ನೀಲಿ ಮತ್ತು ಬಿಳಿ ಬಣ್ಣದ ಧ್ವಜವನ್ನು ಬ್ಯಾಂಕಾಕ್, ಟೋಕಿಯೊ ಮತ್ತು ಬೀಜಿಂಗ್‌ನಲ್ಲಿರುವ ಕಚೇರಿಗಳಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 9:30ಕ್ಕೆ ಅರ್ಧಕ್ಕೆ ಇಳಿಸಲಾಗಿದೆ.

ಪ್ಯಾಲೆಸ್ತೀನ್‌ ನಾಗರಿಕರಿಗೆ ಪರಿಹಾರ ಕಲ್ಪಿಸುತ್ತಿರುವ ವಿಶ್ವಸಂಸ್ಥೆಯ ಏಜೆನ್ಸಿ ಯುಎನ್‌ಆರ್‌ಡಬ್ಲ್ಯುಎ, ಗಾಝಾದಲ್ಲಿ ಯುದ್ಧ ಸಮಯದಲ್ಲಿ ವಿಶ್ವಸಂಸ್ಥೆಯ 100ಕ್ಕೂ ಹೆಚ್ಚು ಸಿಬ್ಬಂದಿಗಳು ಹತರಾಗಿದ್ದಾರೆ ಎಂದು ಹೇಳಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್ ರಾಕೆಟ್‌ ದಾಳಿ ನಡೆಸಿದ ನಂತರ ಇಸ್ರೇಲ್ ಯುದ್ಧ ಘೋಷಿಸಿದೆ. ಯುದ್ಧ 1 ತಿಂಗಳು ಕಳೆದಿದ್ದು, ಗಾಝಾ ಪಟ್ಟಿ ಮೇಲಿನ ಇಸ್ರೇಲ್‌ ಬಾಂಬ್ ದಾಳಿ ಮುಂದುವರಿದಿದೆ.
ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,200 ಜನರು ಮೃತಪಟ್ಟಿದ್ದಾರೆ. 240 ಜನರನ್ನು ಒತ್ತೆಯಾಳುಗಳಾಗಿ ಇಡಲಾಗಿದೆ.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಮೃತರ ಸಂಖ್ಯೆ 11,078ಕ್ಕೆ ತಲುಪಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು  ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶಗಳಲ್ಲಿ ಇಸ್ರೇಲ್‌ನ ವಸಾಹತು ಚಟುವಟಿಕೆ ಖಂಡಿಸಿ ವಿಶ್ವಸಂಸ್ಥೆಯು, ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿದೆ. ಗುರುವಾರ ಮಂಡನೆಯಾದ ಈ ನಿರ್ಣಯದ ಪರ ಭಾರತ ಸೇರಿದಂತೆ 145 ರಾಷ್ಟ್ರಗಳು ಮತ ಚಲಾಯಿಸಿವೆ. ಇದರ ವಿರುದ್ಧ 7 ದೇಶಗಳು ಮತ ಚಲಾಯಿಸಿವೆ. 18 ದೇಶಗಳು ದೂರ ಉಳಿದಿವೆ.

ಪೂರ್ವ ಜೆರುಸಲೇಂ ಹಾಗೂ ಸಿರಿಯಾದ ಗೋಲನ್ ಸೇರಿದಂತೆ ಪ್ಯಾಲೆಸ್ಟೀನ್‌ನ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್ ವಸಾಹತು ಚಟುವಟಿಕೆ ಶೀರ್ಷಿಕೆಯಡಿ ಕರಡು ನಿರ್ಣಯ ಸಿದ್ಧಪಡಿಸಲಾಗಿತ್ತು. ವಿಶ್ವಸಂಸ್ಥೆಯ ವಿಶೇಷ ರಾಜಕೀಯ ಹಾಗೂ ವಸಾಹತು ವಿಮೋಚನಾ ಸಮಿತಿಯು ಇದಕ್ಕೆ ಅನುಮೋದನೆ ನೀಡಿತ್ತು.

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಶನಿವಾರ ನಡೆದ ಶೃಂಗಸಭೆಯಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾ ನಾಯಕರು ಗಾಝಾ ಪಟ್ಟಿಯಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದು, ಮಾನವೀಯ ನೆರವಿಗೆ ಆಗ್ರಹಿಸಿದ್ದರು. ಜೊತೆಗೆ ಯುದ್ಧ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ್ದರು.

ಇದನ್ನು ಓದಿ: ಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...