Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

- Advertisement -
- Advertisement -

ಪ್ಯಾಲೆಸ್ತೀನ್ ಸಮಸ್ಯೆಯನ್ನು ಶಾಂತಿಯುತ ಮಾರ್ಗಗಳ ಮೂಲಕ ಪರಿಹರಿಸುವುದು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಮುನ್ನಡೆಸುವ ‘ನ್ಯೂಯಾರ್ಕ್ ಘೋಷಣೆ’ಯನ್ನು ಬೆಂಬಲಿಸುವ ನಿರ್ಣಯವನ್ನು ಭಾರತ ಶುಕ್ರವಾರ (ಸೆ.12) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಬಲಿಸಿದೆ.

ಫ್ರಾನ್ಸ್ ಮಂಡಿಸಿದ ನಿರ್ಣಯದ ಪರವಾಗಿ 142 ಮತಗಳು, ವಿರುದ್ದ 10 ಮತಗಳು ಬಿದ್ದಿವೆ. 12 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ. ಹೆಚ್ಚು ಮತಗಳು ಪರ ಬಿದ್ದಿರುವುದರಿಂದ ನಿರ್ಣಯ ಅಂಗೀಕಾರಗೊಂಡಿದೆ. ಅಮೆರಿಕ, ಇಸ್ರೇಲ್, ಅರ್ಜೆಂಟೀನಾ ಮತ್ತು ಹಂಗೇರಿ ನಿರ್ಣಯ ವಿರೋಧಿಸಿದ ರಾಷ್ಟ್ರಗಳಲ್ಲಿ ಸೇರಿವೆ.

‘ಪ್ಯಾಲೆಸ್ತೀನ್‌ ಸಮಸ್ಯೆಗಳ ಶಾಂತಿಯುತ ಇತ್ಯರ್ಥ ಮತ್ತು ದ್ವಿರಾಷ್ಟ್ರ ಪರಿಹಾರದ ಅನುಷ್ಠಾನದ ಕುರಿತು ನ್ಯೂಯಾರ್ಕ್ ಘೋಷಣೆಯ ಅನುಮೋದನೆ’ ಎಂಬ ಔಪಚಾರಿಕ ಶೀರ್ಷಿಕೆಯ ನಿರ್ಣಯವನ್ನು ಜುಲೈನಲ್ಲಿ ಫ್ರಾನ್ಸ್ ಮತ್ತು ಸೌದಿ ಅರೇಬಿಯಾ ಸಹ-ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುನ್ನೆಲೆಗೆ ತರಲಾಗಿತ್ತು.

ನಿರ್ಣಯದ ಪ್ರಕಾರ, ಗಾಝಾದಲ್ಲಿನ ಯುದ್ಧವನ್ನು ಕೊನೆಗೊಳಿಸಲು, ದ್ವಿರಾಷ್ಟ್ರ ಪರಿಹಾರದ ಪರಿಣಾಮಕಾರಿ ಅನುಷ್ಠಾನದ ಆಧಾರದ ಮೇಲೆ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನ್ಯಾಯಯುತ, ಶಾಂತಿಯುತ ಮತ್ತು ಶಾಶ್ವತ ಇತ್ಯರ್ಥವನ್ನು ಸಾಧಿಸಲು ಮತ್ತು ಪ್ಯಾಲೆಸ್ತೀನಿಯರು, ಇಸ್ರೇಲಿಗಳು ಹಾಗೂ ಆ ಪ್ರದೇಶದ ಎಲ್ಲಾ ಜನರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಮೂಹಿಕ ಕ್ರಮ ಕೈಗೊಳ್ಳಲು ರಾಷ್ಟ್ರಗಳು ಒಪ್ಪಿಕೊಂಡಿವೆ.

ಸಾರ್ವಭೌಮ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ಸೇರಿದಂತೆ ದ್ವಿರಾಷ್ಟ್ರ ಪರಿಹಾರಕ್ಕೆ ಸ್ಪಷ್ಟವಾದ ಸಾರ್ವಜನಿಕ ಬದ್ಧತೆಯನ್ನು ಹೊರಡಿಸಲು ನಿರ್ಣಯದ ಮೂಲಕ ಇಸ್ರೇಲ್‌ಗೆ ರಾಷ್ಟ್ರಗಳು ಒತ್ತಾಯಿಸಿವೆ.

ಪ್ಯಾಲೆಸ್ತೀನಿಯರ ವಿರುದ್ಧದ ಹಿಂಸಾಚಾರ ಮತ್ತು ಪ್ರಚೋದನೆಯನ್ನು ತಕ್ಷಣವೇ ಕೊನೆಗೊಳಿಸಬೇಕು. ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿನ ಎಲ್ಲಾ ವಸಾಹತು, ಭೂಕಬಳಿಕೆ ಮತ್ತು ಸ್ವಾಧೀನ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಯಾವುದೇ ಸ್ವಾಧೀನ ಯೋಜನೆ ಅಥವಾ ವಸಾಹತು ನೀತಿಯನ್ನು ಸಾರ್ವಜನಿಕವಾಗಿ ತ್ಯಜಿಸಬೇಕು ಮತ್ತು ವಸಾಹತುಗಾರರ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ನಿರ್ಣಯ ಇಸ್ರೇಲ್‌ಗೆ ಅಗ್ರಹಿಸಿದೆ.

ನಿರ್ಣಯವು ‘ಪ್ಯಾಲೆಸ್ತೀನ್ ಜನರ ಸ್ವ-ನಿರ್ಣಯದ ಹಕ್ಕಿಗೆ ಬೆಂಬಲ’ವನ್ನು ಪುನರುಚ್ಚರಿಸಿದೆ. ಇತ್ತೀಚಿನ ಬೆಳವಣಿಗೆಗಳು ಮತ್ತೊಮ್ಮೆ, ಎಂದಿಗಿಂತಲೂ ಹೆಚ್ಚಾಗಿ, ಭಯಾನಕ ಮಾನವ ಸಾವುನೋವು ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಿರಂತರತೆಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಪರಿಣಾಮಗಳನ್ನು ಎತ್ತಿ ತೋರಿಸಿವೆ ಎಂದು ನಿರ್ಣಯ ಹೇಳಿದೆ.

ದ್ವಿರಾಷ್ಟ್ರ ಪರಿಹಾರ ಮತ್ತು ಬಲವಾದ ಅಂತಾರಾಷ್ಟ್ರೀಯ ಖಾತರಿಗಳ ಕಡೆಗೆ ನಿರ್ಣಾಯಕ ಕ್ರಮಗಳ ಕೊರತೆಯಿಂದ ಸಂಘರ್ಷವು ಹೆಚ್ಚಾಗುತ್ತದೆ ಮತ್ತು ಪ್ರಾದೇಶಿಕ ಶಾಂತಿ ಅಸ್ಪಷ್ಟವಾಗಿ ಉಳಿಯುತ್ತದೆ.
ಗಾಝಾ ಪ್ಯಾಲೆಸ್ತೀನ್ ರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಅದನ್ನು ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಲ್ಪಡಬೇಕು. ಯಾವುದೇ ಆಕ್ರಮಣ, ಮುತ್ತಿಗೆ, ಪ್ರಾದೇಶಿಕ ಕಡಿತ ಅಥವಾ ಬಲವಂತದ ಸ್ಥಳಾಂತರ ಇರಬಾರದು ಎಂದು ನಿರ್ಣಯ ಹೇಳಿದೆ.

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...