Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...