HomeಮುಖಪುಟSIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಅತಿ ಹೆಚ್ಚು ಪರಿಣಾಮ ಬೀರಿದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ವಿಶ್ವಸಂಸ್ಥೆಯ ಮೂವರು ವಿಶೇಷ ವರದಿಗಾರರು ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಮೆ 1, 2026ರಂದು ಬರೆದಿರುವ ಪತ್ರದಲ್ಲಿ, ಅಲ್ಪಸಂಖ್ಯಾತರ ವಿಷಯಗಳ ಕುರಿತಾದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು, ಅಭಿಪ್ರಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಉತ್ತೇಜನ ಮತ್ತು ರಕ್ಷಣೆ ಕುರಿತಾದ ವಿಶೇಷ ವರದಿಗಾರರು ಹಾಗೂ ಧರ್ಮ/ನಂಬಿಕೆಯ ಸ್ವಾತಂತ್ರ್ಯದ ಕುರಿತಾದ ವಿಶೇಷ ವರದಿಗಾರರು, ಮತದಾರರ ಪಟ್ಟಿ ಪರಿಷ್ಕರಣೆಯು ಜನಾಂಗೀಯ, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಮೇಲೆ, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಮೇಲೆ ಅತ್ಯಂತ ಪ್ರತಿಕೂಲ ಪರಿಣಾಮ ಬೀರಿದೆ ಎಂಬುದನ್ನು ಸೂಚಿಸುವ ಮಾಹಿತಿ ತಮಗೆ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ಪತ್ರಕ್ಕೆ ಅಲ್ಪಸಂಖ್ಯಾತರ ವಿಷಯಗಳ ಕುರಿತಾದ ವಿಶ್ವಸಂಸ್ಥೆಯ ವಿಶೇಷ ವರದಿಗಾರ ನಿಕೋಲಸ್ ಲೆವ್ರಾಟ್, ಅಭಿಪ್ರಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಉತ್ತೇಜನ ಮತ್ತು ರಕ್ಷಣೆ ಕುರಿತಾದ ವಿಶೇಷ ವರದಿಗಾರ್ತಿ ಐರಿನ್ ಖಾನ್ ಹಾಗೂ ಧರ್ಮ ಅಥವಾ ನಂಬಿಕೆಯ ಸ್ವಾತಂತ್ರ್ಯದ ಕುರಿತಾದ ವಿಶೇಷ ವರದಿಗಾರ್ತಿ ನಾಝಿಲಾ ಘನೇಯಾ ಅವರು ಸಹಿ ಹಾಕಿದ್ದಾರೆ.

ವ್ಯಾಪಕ ಪ್ರಮಾಣದ ಹೆಸರುಗಳ ಅಳಿಸುವಿಕೆಯ ಕುರಿತು ಮಾತನಾಡುತ್ತಾ, ಆ ಪತ್ರದಲ್ಲಿ ಸೂಕ್ತವಾದ ಗುರುತಿನ ಚೀಟಿಗಳನ್ನು ಒದಗಿಸಿದ್ದಾಗ್ಯೂ ಕೂಡ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಎಂದು ತಿಳಿಸಲಾಗಿದೆ.

“ಎಸ್‌ಐಆರ್ ಪ್ರಕ್ರಿಯೆಯಿಂದ ಮುಸ್ಲಿಂ ಮತದಾರರು ಅತಿ ಹೆಚ್ಚು ಪ್ರಮಾಣದಲ್ಲಿ ತೊಂದರೆಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ನಂದಿಗ್ರಾಮ್ ಎಂಬ ಒಂದು ಕ್ಷೇತ್ರದಲ್ಲಿ, ಮುಸ್ಲಿಮರು ಆ ಕ್ಷೇತ್ರದ ಒಟ್ಟು ಮತದಾರರಲ್ಲಿ ಕೇವಲ ಶೇಕಡಾ 25 ರಷ್ಟು ಮಾತ್ರ ಇದ್ದಾಗ್ಯೂ, ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ ಮತದಾರರಲ್ಲಿ ಶೇಕಡಾ 95 ರಷ್ಟು ಮುಸ್ಲಿಮರಾಗಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, “ಎಸ್‌ಐಆರ್ ಪ್ರಕ್ರಿಯೆಯಿಂದ ಮುಸ್ಲಿಂ ಮತದಾರರ ಮೇಲೆ ಅಸಮಾನವಾದ ಪರಿಣಾಮ ಬೀರಿದೆ ಎಂದು ವರದಿಯಾಗಿದೆ” ಎಂದು ಹೇಳಲಾಗಿದೆ.

ಮತದಾರರ ದತ್ತಾಂಶದಲ್ಲಿನ (ಡೇಟಾ) ‘ಅಕ್ರಮಗಳನ್ನು’ ಗುರುತಿಸಲು ಪರಿಷ್ಕರಣಾ ಪ್ರಕ್ರಿಯೆಯ ಸಮಯದಲ್ಲಿ ಕೃತಕ ಬುದ್ಧಿಮತ್ತೆಯನ್ನು (ಎಐ) ಬಳಸಲಾಗಿದೆ ಎಂದು ವರದಿಯಾಗಿರುವುದರ ಬಗ್ಗೆಯೂ ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಇದು “ಪಾರದರ್ಶಕತೆ, ದೋಷಗಳು ಮತ್ತು ಸಂಭಾವ್ಯ ಪಕ್ಷಪಾತದ ಕುರಿತು ಕಳವಳವನ್ನು ಮೂಡಿಸಿದೆ” ಎಂದು ತಿಳಿಸಲಾಗಿದೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ವ್ಯವಸ್ಥೆಗಳ ಬಳಕೆಯು ಕಾನೂನುಬದ್ಧ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಪಾಯವನ್ನು ಹೊಂದಿದೆ, ಪ್ರಜಾಪ್ರಭುತ್ವದ ನ್ಯಾಯಸಮ್ಮತತೆಯನ್ನು ಕುಂದಿಸುತ್ತದೆ ಮತ್ತು ಇಂತಹ ಅತ್ಯಂತ ನಿರ್ಣಾಯಕ ಸಂದರ್ಭದಲ್ಲಿ ಸ್ವಯಂಚಾಲಿತ ನಿರ್ಧಾರ ತೆಗೆದುಕೊಳ್ಳುವಿಕೆಯ ವಿಶ್ವಾಸಾರ್ಹತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪರಿಷ್ಕರಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಸರ್ಕಾರದ ಹಿರಿಯ ನಾಯಕರು ನೀಡಿದ್ದಾರೆ ಎನ್ನಲಾದ ಹೇಳಿಕೆಗಳ ಬಗ್ಗೆಯೂ ವಿಶ್ವಸಂಸ್ಥೆಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಪ್ರಕ್ರಿಯೆಯನ್ನು “ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು” ಗುರಿಯಾಗಿಸಿಕೊಂಡು ಮಾಡಲಾಗುತ್ತಿದೆ ಎಂದು ಬಿಂಬಿಸುವ ರಾಜಕೀಯ ಭಾಷಣಗಳು, ಭಾರತೀಯ ಮುಸ್ಲಿಂ ನಾಗರಿಕರನ್ನು ವಿದೇಶಿ ಪ್ರಜೆಗಳೊಂದಿಗೆ ಸೇರಿಸುವ ಅಪಾಯವನ್ನು ಹೊಂದಿವೆ ಮತ್ತು ಇದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನಡಿಯಲ್ಲಿ ತಾರತಮ್ಯದ ಭಾಷಣಕ್ಕೆ ಸಮನಾಗುತ್ತದೆ ಎಂದು ಹೇಳಿದ್ದಾರೆ.

ಈ ಅಧಿಕೃತ ಪತ್ರ ಮತ್ತು ಇದಕ್ಕೆ ಭಾರತ ಸರ್ಕಾರ ನೀಡುವ ಯಾವುದೇ ಪ್ರತಿಕ್ರಿಯೆಯನ್ನು 60 ದಿನಗಳ ನಂತರ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು, ಅಥವಾ ಒಂದು ವೇಳೆ ಸರ್ಕಾರವು ಅದಕ್ಕಿಂತ ಮುಂಚಿತವಾಗಿಯೇ ಉತ್ತರಿಸಿದರೆ ತಕ್ಷಣವೇ ಬಹಿರಂಗಪಡಿಸಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಮತದಾರರ ಪಟ್ಟಿಗಳಿಂದ ಜನಾಂಗೀಯ, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರನ್ನು ಕೈಬಿಡುವಲ್ಲಿ ಭಾರತೀಯ ಚುನಾವಣಾ ಆಯೋಗದ (ಇಸಿಐ) ಪಾತ್ರ ಹಾಗೂ ಎನ್‌ಆರ್‌ಸಿ ಕುರಿತು ಕಳವಳ ವ್ಯಕ್ತಪಡಿಸಿ ವಿಶ್ವಸಂಸ್ಥೆಯ ವರದಿಗಾರರು ಈ ಹಿಂದೆ 2018ರಲ್ಲೂ ಪತ್ರ ಬರೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...