Homeದಲಿತ್ ಫೈಲ್ಸ್ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 42 ಆರೋಪಿಗಳಲ್ಲಿ ಐವರನ್ನು ದೋಷಿಗಳು ಹೇಳಿದೆ. ಇತರ 37 ಜನರನ್ನು ಖುಲಾಸೆಗೊಳಿಸಿದ್ದು, ಪ್ರಕರಣದ ಇಬ್ಬರು ಆರೋಪಿಗಳು ವಿಚಾರಣಾ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ.

ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. ತಪ್ಪಿತಸ್ಥರೆಂದು ಸಾಬೀತಾದ ಐದು ಆರೋಪಿಗಳು ರಮೇಶ್ ಜಾದವ್, ರಾಕೇಶ್ ಜೋಶಿ, ಪ್ರಮೋದ್ ಗೋಸ್ವಾಮಿ, ನಾಗ್ಜಿ ದಯಾ ಮತ್ತು ಬಲವಂತ್ ಗೋಸ್ವಾಮಿ.

ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿದಂತೆ 37 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಖುಲಾಸೆಗೊಂಡ ಪೊಲೀಸ್ ಸಿಬ್ಬಂದಿಗಳಲ್ಲಿ ಕಾಂಚನ್‌ಬೆನ್, ಆಗ ಪಿಎಸ್‌ಐ ಪಾಂಡೆ, ಆಗ ಉನಾ ಪಿಎಸ್‌ಒ ಕರ್ಶನ್‌ಭಾಯ್ ಮತ್ತು ನಿರ್ಮಲ್ ಜಲಾ ಸೇರಿದ್ದಾರೆ, ಅವರಲ್ಲಿ ಕೊನೆಯವರು ಈಗ ನಿಧನರಾಗಿದ್ದಾರೆ.

ದೇಶವನ್ನು ತಲ್ಲಣಗೊಳಿಸಿದ್ದ ಊನಾ ಘಟನೆ

ಜುಲೈ 11, 2016ರಂದು ’ಗಿರ್ ಸೋಮನಾಥ’ ಜಿಲ್ಲೆಯ ’ಊನಾ’ದ ಬಳಿಯಲ್ಲಿರುವ ’ಮೋಟ ಸಮಾಧಿಯಾಲ’ ಎಂಬ ಹಳ್ಳಿಯಲ್ಲಿ ಸತ್ತ ದನದ ಚರ್ಮವನ್ನು ತಲತಲಾಂತರದಿಂದ ಸುಲಿಯುವ ದಲಿತ ಕುಟುಂಬದ ಏಳು ಯುವಕರು ಎಂದಿನಂತೆ ತಮ್ಮ ಕಾಯಕ ಮಾಡುತ್ತಿದ್ದರು. ಆ ಸತ್ತ ದನವನ್ನವರು ಬೇಡಿಯಾ ಜಿಲ್ಲೆಯಿಂದ ತಂದಿದ್ದರು. ಆಗ ಅಲ್ಲಿಗೆ ಎರಡು ಕಾರಿನಲ್ಲಿ ಬಂದ ಒಂದಷ್ಟು ಜನ ಕೆಳಗಿಳಿದು ಅವರ ಬಳಿ ಬಂದು ’ನಾವು ಗೋ ರಕ್ಷಕರು’ ಎಂದರು. ’ದನವನ್ನು ಕೊಂದು ಚರ್ಮ ಸುಲಿಯುತ್ತಿದ್ದೀರಿ’ ಎಂದು ದಲಿತರ ಮೇಲೆ ಆರೋಪ ಹೊರಿಸಿದರು. ಆ ದಲಿತ ಯುವಕರು ’ತಾವು ಸತ್ತ ದನದ ಚರ್ಮ ಸುಲಿಯುತ್ತಿರುವುದಾಗಿ’ ಎಷ್ಟೇ ಹೇಳಿದರೂ ಧರ್ಮಾಂಧತೆಯ ಅಮಲಿನಲ್ಲಿದ್ದ ಆ ಗೋ ರಕ್ಷಕರೆಂಬ ಭಯೋತ್ಪಾದಕರು ಏಳು ಜನ ದಲಿತರನ್ನೂ ಕಾರಿಗೆ ಕಟ್ಟಿಹಾಕಿ ದೊಣ್ಣೆ ಹಾಗೂ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛ ಥಳಿಸಿದರು. ಅದಷ್ಟಕ್ಕೆ ಅವರ ವಿಕೃತಿ ಸಮಾಧಾನವಾಗಲಿಲ್ಲ. ಎರಡೂ ಕಾರಿನಲ್ಲಿ ನಾಲ್ವರನ್ನು ತುಂಬಿಕೊಂಡು ಊನಾ ಪಟ್ಟಣಕ್ಕೆ ಬಂದರು. ಅಲ್ಲಿ ಬೃಹತ್ ಸರ್ಕಲ್‌ನಲ್ಲಿ ಬಟ್ಟೆ ಬಿಚ್ಚಿ ಬೆತ್ತಲಾಗಿಸಿ ಮತ್ತೆ ಥಳಿಸಿದರು. ಇದನ್ನು ತಮ್ಮ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಂಡರು. ಪೊಲೀಸರು ಅಲ್ಲಿಗೆ ಬರುವುದನ್ನು ಕಂಡು ಗೋರಕ್ಷಕ ಭಯೋತ್ಪಾದಕರು ನಂತರ ಓಡಿಹೋದರು.

ನಂತರ ಆ ಏಳು ದಲಿತರಿಗೆ ಊನಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಮೇಲೆ ಹೆಚ್ಚಿನ ಚಿಕಿತ್ಸೆಗೆ ರಾಜಕೋಟ್‌ನ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ದಲಿತರನ್ನು ಮಾರಣಾಂತಿಕವಾಗಿ ಥಳಿಸಿದ್ದ ವಿಡಿಯೋ ಇಡೀ ಗುಜರಾತಿನ ದಲಿತರ ನಿದ್ದೆಗೆಡಿಸಿತು. ರಾಜ್ಯಾದ್ಯಂತ ಸರಣಿ ಹೋರಾಟಗಳು ಜರುಗಿದವು. ಜುಲೈ 12ರಂದೇ ಗುಜರಾತಿನ ಅಹಮದಾಬಾದ್‌ನಲ್ಲಿ ಹಲವು ದಲಿತ ನಾಯಕರು ಬೀದಿಗಿಳಿದ ಪರಿಣಾಮ ದಲಿತ ಯುವಕರು ಸಿಟ್ಟಿಗೆದ್ದು ಪ್ರತಿಭಟಿಸಿದರು. ರಾಜ್ಯ ಹೆದ್ದಾರಿಯನ್ನು ತಡೆಹಿಡಿದರು. ಸತ್ತ ಪ್ರಾಣಿಗಳ ಕಳೇಬರಗಳನ್ನು ಸರ್ಕಾರಿ ಕಚೇರಿಗಳ ಮುಂದೆ ಎಸೆದರು. ರಸ್ತೆರಸ್ತೆಯಲ್ಲಿ ಕಳೇಬರಗಳನ್ನು ಬಿಸಾಡಿದರು. ಅಕ್ಷರಶಃ ಗುಜರಾತ್ ಒಂದು ವಾರ ಗಬ್ಬು ನಾರುತ್ತಿತ್ತು. ದಲಿತರು ರೊಚ್ಚಿಗೆದ್ದರೆ ಆಗುವ ಪರಿಣಾಮವನ್ನು ಗುಜರಾತ್ ಕಂಡಿತ್ತು. 12 ದಲಿತ ಯುವಕರು ಆತ್ಮಹತ್ಯೆಗೆ ಪ್ರಯತ್ನಿಸಿದರು. ಅದರಲ್ಲಿ ಒಬ್ಬ ಯುವಕ ಅಸುನೀಗಿದನು. ಇದರ ಪರಿಣಾಮವಾಗಿ ಜುಲೈ 21ರಂದು ರಾಜ್ಯಸಭೆಯಲ್ಲಿ ಈ ಘಟನೆ ಪ್ರತಿಧ್ವನಿಸಿತು.

ದಲಿತ ಯುವಕ ಜಿಗ್ನೇಶ್ ಮೆವಾನಿ ನೇತೃತ್ವದಲ್ಲಿ ಆಗಸ್ಟ್ 15, 2016ರ ಸ್ವಾತಂತ್ರ್ಯ ದಿನಾಚರಣೆಯಂದು ಅಹಮದಾಬಾದ್‌ನಿಂದ ಊನಾದವರೆಗೆ ದಲಿತ ಅಸ್ಮಿತೆ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಯಾತ್ರೆಯಲ್ಲಿ ಸುಮಾರು 20,000 ಹೋರಾಟಗಾರರು ಭಾಗವಹಿಸಿದ್ದರು. ಅತಿ ಪ್ರಮುಖವಾಗಿ ಈ ಯಾತ್ರೆಯಲ್ಲಿ ಭಾಗವಹಿಸಿದ್ದ ದಲಿತರು ’ಇನ್ನು ಮುಂದೆ ಸಾಂಪ್ರದಾಯಿಕ ವೃತ್ತಿಯಾದ ಸತ್ತ ಪ್ರಾಣಿಗಳ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ಮಾಡಲಾರೆವು’ ಎಂಬ ಪ್ರತಿಜ್ಞೆಯನ್ನು ಕೈಗೊಂಡರು. ಆ ಹೋರಾಟದಲ್ಲಿಯೇ ’ದಲಿತರಿಗೆ ಉಳುಮೆ ಮಾಡಲು ಭೂಮಿ ಕೊಡಿ’ ಎಂಬ ಘೋಷವಾಕ್ಯವೂ ಮೊಳಗಿತು. ಬರೋಬ್ಬರಿ ಹತ್ತು ದಿನಗಳು ನಡೆದ ಈ ಯಾತ್ರೆಯಿಂದ ಮನೆಗೆ ಮರಳುತ್ತಿದ್ದಾಗ ದಲಿತರ ಮೇಲೆ ಬಾಂಬ್ ದಾಳಿ ಮಾಡಲಾಯಿತು. 10 ಜನರು ಗಂಭೀರವಾಗಿ ಗಾಯಗೊಂಡರು. ಆಶ್ಚರ್ಯವೆಂದರೆ ಅಲ್ಲಿನ ಬಿಜೆಪಿ ಸರ್ಕಾರ ದಲಿತರ ಮೇಲೆ ಬಾಂಬು ಹಾಕಿದವರನ್ನು ಬಂಧಿಸದೇ, ಅದನ್ನು ಸುಳ್ಳು ಸುದ್ದಿಯೆಂದು ಪ್ರಚಾರಮಾಡಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...