Homeಮುಖಪುಟಲಾಕ್‌ಡೌನ್‌ನಿಂದ ಕುಟುಂಬ ನಿರ್ವಹಣೆ ಕಷ್ಟ : ಪತ್ರ ಬರೆದಿಟ್ಟು ಯುಪಿ ವ್ಯಕ್ತಿ ಆತ್ಮಹತ್ಯೆ

ಲಾಕ್‌ಡೌನ್‌ನಿಂದ ಕುಟುಂಬ ನಿರ್ವಹಣೆ ಕಷ್ಟ : ಪತ್ರ ಬರೆದಿಟ್ಟು ಯುಪಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಲಾಕ್‌ಡೌನ್‌ ವಿಸ್ತರಣೆಯಿಂದಾಗಿ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಪತ್ರ ಬರೆದಿಟ್ಟು, ಪೂರ್ವ ಉತ್ತರ ಪ್ರದೇಶದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ಭಾನು ಪ್ರಕಾಶ್ ಗುಪ್ತಾ ಎಂಬುವವರ ಮೃತದೇಹವು ಲಖಿಂಪುರ ಖೇರಿ ಜಿಲ್ಲೆಯ ರೈಲು ಹಳಿಗಳಲ್ಲಿ ಪತ್ತೆಯಾಗಿದ್ದು, ಅದೇ ಸ್ಥಳದಲ್ಲಿ ಆತ ಬರೆದಿಟ್ಟಿದ್ದ ಆತ್ಮಹತ್ಯೆ ಪತ್ರ ಸಹ ಪತ್ತೆಯಾಗಿದೆ. ಭಾನು ಪ್ರಕಾಶ್‌ ಗುಪ್ತಾ ಈ ಮೊದಲು ಹತ್ತಿರದ ಶಹಜಹಾನ್ಪುರ ಜಿಲ್ಲೆಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಆತನಿಗೆ ಹೆಂಡತಿ, ನಾಲ್ಕು ಮಕ್ಕಳು ಮತ್ತು ಅನಾರೋಗ್ಯಪೀಡಿತ ತಾಯಿ ಇದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್‌ 24ರ ಲಾಕ್‌ಡೌನ್‌ ಹೇರಲ್ಪಟ್ಟಿದ್ದರಿಂದ ಈ ವ್ಯಕ್ತಿ ನಿರುದ್ಯೋಗಿಯಾಗಿದ್ದು, ಕಳೆದ ಕೆಲವು ದಿನಗಳಲ್ಲಿ ಆತನ ಬಳಿಯಿದ್ದ ನಗದು ಖಾಲಿಯಾಗಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಎದುರಾಗಿತ್ತು ಎಂದು ವರದಿಯಾಗಿದೆ.

ಆತ ಬರೆದ ಆತ್ಮಹತ್ಯೆ ಪತ್ರದಲ್ಲಿ, ತನ್ನ ಮನೆಗೆ ಗೋಧಿ ಮತ್ತು ಅಕ್ಕಿ ಕೊಟ್ಟಿದ್ದಕ್ಕೆ ಸರ್ಕಾರಿ ಪಡಿತರ ಅಂಗಡಿಗೆ ಧನ್ಯವಾದಗಳು. ಆದರೆ ಅದು ಸಾಕಾಗುವುದಿಲ್ಲ, ಸಕ್ಕರೆ, ಉಪ್ಪು ಮತ್ತು ಹಾಲಿನಂತಹ ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ತನ್ನ ಬಳಿ ಹಣವಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ತನ್ನ ವಯಸ್ಸಾದ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಣವಿಲ್ಲದೆ ಅವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ ಮತ್ತು ಜಿಲ್ಲಾಡಳಿತವು ಅವರಿಗೆ ಸಹಾಯ ಮಾಡಲಿಲ್ಲ ಎಂದು ದೂರಿದ್ದಾರೆ.

ಆತಮ ಆತ್ಮಹತ್ಯೆಯ ವಿಷಯ ತಿಳಿದ ನಂತರ ಕುಟುಂಬಕ್ಕೆ ನೆರವು ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಭರವಸೆ ನೀಡಿದೆ.

“ನಾವು ಪ್ರಾಥಮಿಕ ವಿಚಾರಣೆ ನಡೆಸಿದ್ದೇವೆ. ಅವನಿಗೆ ಪಡಿತರ ಚೀಟಿ ಇದೆ ಮತ್ತು ಅವನ ಕೋಟಾದ ಪ್ರಕಾರ ಈ ತಿಂಗಳು ಧಾನ್ಯವನ್ನು ವಿತರಿಸಲಾಗಿದೆ. ಹಾಗಾಗಿ ಅವನಿಗೆ ಧಾನ್ಯದ ಕೊರತೆಯಿಲ್ಲ. ಆತ್ಮಹತ್ಯೆ ಪತ್ರ ಸಿಕ್ಕಿದ್ದು,  ಆತ್ಮಹತ್ಯೆಗೆ ನಿಖರ ಕಾರಣಗಳನ್ನು ನಾವು ತನಿಖೆ ಮಾಡುತ್ತೇವೆ” ಎಂದು ಲಖಿಂಪುರ ಖೇರಿಯ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಯೇ ಸರ್ಕಾರವು ಇಂದು ತಮ್ಮ ಎರಡನೇ ಅವಧಿಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದನ್ನು ಉಲ್ಲೇಖಿಸಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಉತ್ತರ ಪ್ರದೇಶದ ಆಡಳಿತ ಪಕ್ಷ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

“ದುರದೃಷ್ಟಕರ ಘಟನೆಯೊಂದರಲ್ಲಿ ಯುಪಿಯ ಭಾನು ಗುಪ್ತಾ ರೈಲಿನ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕೆಲಸ ಹೋಯಿತು. ಅವರು ತಮ್ಮ ತಾಯಿಗೆ ಚಿಕಿತ್ಸೆ ನೀಡಬೇಕಾಗಿತ್ತು. ಅವರಿಗೆ ಸರ್ಕಾರದಿಂದ ಕೇವಲ ಪಡಿತರ ದೊರಕಿತು. ಆದರೆ ಜೀವನ ನಿರ್ವಹಣೆಗೆ ಬೇಕಾದ ಉಳಿದ ವಸ್ತುಗಳು ಸಿಗಲಿಲ್ಲ. ಆದರೆ ಇದರ ಗೊಡವೆ ಇಲ್ಲದೇ ಒಂದು ವರ್ಷ ಆಚರಿಸುತ್ತಿರುವ ನಿಮಗೆ ಈ ಪತ್ರವು ತಲುಪದಿರಬಹುದು. ದಯವಿಟ್ಟು ಇದನ್ನು ಓದಿ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು.. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...