ಮಾಧ್ಯಮ ಮಾನ್ಯತಾ ಪಮಾಣಪತ್ರಗಳನ್ನು ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೌಲಭ್ಯವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ತಂದು ತಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಮಾನ್ಯತೆ ಇಲ್ಲದ
ಈ ಬಗ್ಗೆ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು,”ಉಚಿತ ಬಸ್‌ಪಾಸ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದು ತಿಳಿಸಿದ್ದಾರೆ. ಮಾನ್ಯತೆ ಇಲ್ಲದ
ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಮಾಧ್ಯಮ ಮಾನ್ಯತಾ ಪತ್ರ ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ನಮ್ಮ ಸರ್ಕಾರವು ನುಡಿದಂತೆ ನಡೆದಿದೆ.
ಉಚಿತ ಬಸ್‌ಪಾಸ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ… pic.twitter.com/0MlmZjbkm2
— Siddaramaiah (@siddaramaiah) January 29, 2025
“ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ” ಎಂದು ಅವರು ಹೇಳಿದ್ದಾರೆ.
“ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದು. ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಬಸ್ ಪಾಸ್‌ಗಳನ್ನು ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.
“ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು” ಎಂದು ಅವರು ಹೇಳಿದ್ದಾರೆ.
ಇದನ್ನೂಓದಿ: ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ


