HomeUncategorizedಮಾನ್ಯತೆ ಇಲ್ಲದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ - ಸಿಎಂ ಸಿದ್ದರಾಮಯ್ಯ

ಮಾನ್ಯತೆ ಇಲ್ಲದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಾಧ್ಯಮ ಮಾನ್ಯತಾ ಪಮಾಣಪತ್ರಗಳನ್ನು ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ತಂದು ತಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಮಾನ್ಯತೆ ಇಲ್ಲದ

ಈ ಬಗ್ಗೆ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದು,”ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದು ತಿಳಿಸಿದ್ದಾರೆ. ಮಾನ್ಯತೆ ಇಲ್ಲದ

ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

 

“ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ” ಎಂದು ಅವರು ಹೇಳಿದ್ದಾರೆ.

“ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದು. ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಬಸ್ ಪಾಸ್‌ಗಳನ್ನು ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

“ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...