Homeಮುಖಪುಟ"ಸಂಸತ್ತಿನ ನನ್ನ ಕೊಠಡಿಗೆ ಟಾಟಾ ಪ್ರಾಜೆಕ್ಟ್‌ ಅಧಿಕಾರಿಗಳಿಂದ ಅನಧಿಕೃತ ಪ್ರವೇಶ" - ಮಲ್ಲಿಕಾರ್ಜುನ ಖರ್ಗೆ ಗಂಭೀರ...

“ಸಂಸತ್ತಿನ ನನ್ನ ಕೊಠಡಿಗೆ ಟಾಟಾ ಪ್ರಾಜೆಕ್ಟ್‌ ಅಧಿಕಾರಿಗಳಿಂದ ಅನಧಿಕೃತ ಪ್ರವೇಶ” – ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ

- Advertisement -
- Advertisement -

ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯುಡಿ), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮತ್ತು ಟಾಟಾ ಪ್ರಾಜೆಕ್ಟ್‌ಗಳ ಅಧಿಕಾರಿಗಳು ತಮಗೆ ಮಾಹಿತಿ ನೀಡದೆ ಸಂಸತ್ತಿನ ತಮ್ಮ ಕೊಠಡಿಗೆ ಪ್ರವೇಶಿಸಿದ್ದಾರೆ ಎಂಬ ಗಂಭೀರ ಆರೋಪದೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸೆಪ್ಟೆಂಬರ್ 28, 2024 ರಂದು, ಸಂಸತ್ ಭವನದಲ್ಲಿ ನನ್ನ ಚೇಂಬರ್ ಕೊಠಡಿ ಸಂಖ್ಯೆ G-19 ಅನ್ನು CPWD, CISF ಮತ್ತು ಟಾಟಾ ಪ್ರಾಜೆಕ್ಟ್‌ ಅಧಿಕಾರಿಗಳು ನನಗೆ ಅಥವಾ ನನ್ನ ಕಚೇರಿಗೆ ಯಾವುದೇ ಪೂರ್ವ ಸೂಚನೆಯಿಲ್ಲದೆ ಪ್ರವೇಶಿಸಿದ್ದಾರೆ ಎಂದು ತಿಳಿದು ನನಗೆ ತುಂಬಾ ಆಘಾತವಾಗಿದೆ” ಎಂದು ಪತ್ರದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಅಗಿರುವ ಖರ್ಗೆ ಹೇಳಿದ್ದಾರೆ.

ಇದು ನಿಯಮಗಳ ಸ್ಪಷ್ಟ ಉಲ್ಲಂಘನೆ ಎಂದಿರುವ ಮಲ್ಲಿಕಾರ್ಜುನ ಖರ್ಗೆ, ತಮ್ಮ ದೂರಿಗೆ ಸೂಕ್ತ ಮಹತ್ವ ನೀಡಬೇಕು ಎಂದು ಆಗ್ರಹಿಸಿದ್ದಾರೆ. “ಇದೊಂದು ಅಸಾಧಾರಣ ಬೆಳವಣಿಗೆ. ಸಂಸತ್ತಿನ ಸದಸ್ಯನಾಗಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕನಾಗಿ ನನ್ನ ಸವಲತ್ತುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಇಂತಹ ಅಗೌರವ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ: ‘ಬ್ರಾಹ್ಮಣರಾಗಿದ್ದರೂ ಸಾವರ್ಕರ್ ಮಾಂಸ ಸೇವಿಸಿದ್ದರು..’ ಹೇಳಿಕೆ; ದಿನೇಶ್ ಗುಂಡೂರಾವ್ ವಿರುದ್ಧ ದೂರು ಕೊಟ್ಟ ಬಜರಂಗದಳ ಕಾರ್ಯಕರ್ತ

“ಯಾರ ಅಧಿಕಾರ ಮತ್ತು ಸೂಚನೆಗಳ ಅಡಿಯಲ್ಲಿ ಅವರು ಅನುಮತಿಯಿಲ್ಲದೆ ನನ್ನ ಕೋಣೆಗೆ ಪ್ರವೇಶಿಸಿದ್ದಾರೆ ಎಂಬುದನ್ನು ನಾನು ತಿಳಿದುಕೊಳ್ಳಲು ಒತ್ತಾಯಿಸುತ್ತೇನೆ. ಇದನ್ನು ಗಂಭೀರವಾಗಿ ಪರಿಗಣಿಸಬಹುದು. ಪ್ರತಿಪಕ್ಷದ ನಾಯಕನ ಘನತೆಗೆ ಧಕ್ಕೆ ತರುವ ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಕ್ರಮಕೈಗೊಳ್ಳಲಾಗುವುದು ಎಂಬ ನಂಬಿಕೆ ಇದೆ” ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದಾರೆ.

ಈ ನಡುವೆ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇಸ್ರೇಲ್‌ನಲ್ಲಿ ಭಾರತೀಯ ಕಾರ್ಮಿಕರ ನೇಮಕಾತಿಗೆ ಸರ್ಕಾರವು ಅನುಕೂಲ ಮಾಡಿಕೊಟ್ಟಿದೆ ಎಂದು ಕಾಂಗ್ರೆಸ್ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು “ಸರ್ಕಾರದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಸುಮಾರು 15,000 ಭಾರತೀಯ ಉದ್ಯೋಗಿಗಳನ್ನು ಇಸ್ರೇಲ್‌ಗೆ ಕಳುಹಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಮೊದಲು, ಅನೇಕ ಭಾರತೀಯ ಯುವಕರು ರಷ್ಯಾ-ಉಕ್ರೇನ್ ಯುದ್ಧದ ವೇಳೆ ತೆರಳಿ ಏಜೆಂಟ್‌ಗಳಿಂದ ವಂಚನೆಗೊಳಗಾಗಿದ್ದರು. ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು ಮೋದಿ ಸರ್ಕಾರದ ಯುವ ವಿರೋಧಿ ನೀತಿಗಳಿಂದ ಪ್ರೇರಿತವಾದ ನಿರುದ್ಯೋಗದ ಬಗ್ಗೆ ಹೇಳುತ್ತದೆ” ಎಂದು ಖರ್ಗೆ ಪೋಸ್ಟ್ ಮಾಡಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...