ಇತ್ತೀಚೆಗೆ ನಡೆದ ಕೋಮು ಹಿಂಸಾಚಾರದ ಆರೋಪಿಗಳ ಮನೆಗಳನ್ನು ಅಕ್ರಮ ಎಂದು ಭಾಗಶಃ ಕೆಡವುವ ವೇಳೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕೆ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಎಂಸಿ) ಮಂಗಳವಾರ (ಏ.15) ಬಾಂಬೆ ಹೈಕೋರ್ಟ್ ಮುಂದೆ ಬೇಷರತ್ ಕ್ಷಮೆಯಾಚಿಸಿದೆ
ನ್ಯಾಯಮೂರ್ತಿ ನಿತಿನ್ ಸಾಂಬ್ರೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಎನ್‌ಎಂಸಿ ತನ್ನ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಮಗೆ ಅರಿವಿರಲಿಲ್ಲ ಎಂದು ಹೇಳಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಡ್ಡಾಯ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದಿದೆ.
ಇತ್ತೀಚಿನ ಕೋಮು ಹಿಂಸಾಚಾರದ ಪ್ರಮುಖ ಆರೋಪಿ ಫಾಹೀಮ್ ಖಾನ್ ಅವರ ತಾಯಿ ಜೆಹ್ರುನ್ನಿಸಾ ಶಮೀಮ್ ಖಾನ್ ಅವರ ಕಟ್ಟಡಗಳನ್ನು ಕೆಡವಿದಕ್ಕಾಗಿ ಎನ್‌ಎಂಸಿಯ ಕಾರ್ಯನಿರ್ವಾಹಕ ಇಂಜಿನಿಯರ್ (ಕೊಳೆಗೇರಿಗಳು) ಕಮಲೇಶ್ ಚವಾಣ್ ಅವರ ಮೂಲಕ ಸಲ್ಲಿಸಿದ ಅಫಿಡವಿಟ್‌ನಲ್ಲಿ ಎನ್‌ಎಂಸಿ ಹೈಕೋರ್ಟ್‌ಗೆ ಕ್ಷಮೆಯಾಚಿಸಿದೆ.
ಎನ್‌ಎಂಸಿ ಅಥವಾ ಅದರ ಅಧಿಕಾರಿಗಳು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಅಥವಾ ಕೆಳ ನ್ಯಾಯಾಲಯಗಳ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುವುದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.
ನವೆಂಬರ್ 13, 2014ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ ಎಂದು ಎನ್‌ಎಂಸಿ ಹೇಳಿಕೊಂಡಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠವು, ಆರೋಪಿ ಅಥವಾ ಶಿಕ್ಷೆಗೊಳಗಾದ ವ್ಯಕ್ತಿಗಳೆಂಬ ಕಾರಣಕ್ಕಾಗಿ ಸರ್ಕಾರ ಅವರ ಮನೆಗಳು/ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಬಗ್ಗೆ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಸುತ್ತೋಲೆಗಳನ್ನು ಹೊರಡಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದೆ ಎಂಬ ಅಂಶವನ್ನು ಅಫಿಡವಿಟ್ ಎತ್ತಿ ತೋರಿಸಿದೆ.
ಅಲ್ಲದೆ, ಪೊಲೀಸ್ ಅಧಿಕಾರಿಗಳು ಮಾರ್ಚ್ 21ರ ಗಲಭೆಯ ಆರೋಪಿಗಳ ಆಸ್ತಿಗಳ ಕುರಿತು ಎನ್‌ಎಂಸಿಯಿಂದ ವಿವರಗಳನ್ನು ಕೋರಿದ್ದರು ಮತ್ತು ಆರೋಪಿಗಳ ಆಸ್ತಿಗಳು ಅಕ್ರಮವಾಗಿದ್ದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಕೇಳಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.
ಅರ್ಜಿದಾರರು ತಮ್ಮ ಮನೆಯ ಅನುಮೋದಿತ ಯೋಜನೆ ದಾಖಲೆ ನೀಡಲು ವಿಫಲವಾಗಿದ್ದನ್ನು ಕಂಡುಕೊಂಡ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಕಟ್ಟಡ ಕೆಡವುವ ಮುನ್ನ ಅರ್ಜಿದಾರರಿಗೆ ಶೋಕಾಸ್ ನೀಡಿ ಪ್ರತಿಕ್ರಿಯಿಸಲು ಅವರಿಗೆ ಒಂದು ದಿನದ ಗಡುವು ನೀಡಲಾಗಿತ್ತು ಎಂದು ಎನ್‌ಎಂಸಿ ಹೇಳಿಕೊಂಡಿದೆ.
ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್


