Homeಮುಖಪುಟ'ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ': ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ...

‘ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ’: ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ ಪಾಲಿಕೆ

- Advertisement -
- Advertisement -

ಇತ್ತೀಚೆಗೆ ನಡೆದ ಕೋಮು ಹಿಂಸಾಚಾರದ ಆರೋಪಿಗಳ ಮನೆಗಳನ್ನು ಅಕ್ರಮ ಎಂದು ಭಾಗಶಃ ಕೆಡವುವ ವೇಳೆ ಸುಪ್ರೀಂ ಕೋರ್ಟ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕೆ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಎಂಸಿ) ಮಂಗಳವಾರ (ಏ.15) ಬಾಂಬೆ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದೆ

ನ್ಯಾಯಮೂರ್ತಿ ನಿತಿನ್ ಸಾಂಬ್ರೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಎನ್‌ಎಂಸಿ ತನ್ನ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಮಗೆ ಅರಿವಿರಲಿಲ್ಲ ಎಂದು ಹೇಳಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಡ್ಡಾಯ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದಿದೆ.

ಇತ್ತೀಚಿನ ಕೋಮು ಹಿಂಸಾಚಾರದ ಪ್ರಮುಖ ಆರೋಪಿ ಫಾಹೀಮ್ ಖಾನ್ ಅವರ ತಾಯಿ ಜೆಹ್ರುನ್ನಿಸಾ ಶಮೀಮ್ ಖಾನ್ ಅವರ ಕಟ್ಟಡಗಳನ್ನು ಕೆಡವಿದಕ್ಕಾಗಿ ಎನ್‌ಎಂಸಿಯ ಕಾರ್ಯನಿರ್ವಾಹಕ ಇಂಜಿನಿಯರ್ (ಕೊಳೆಗೇರಿಗಳು) ಕಮಲೇಶ್ ಚವಾಣ್ ಅವರ ಮೂಲಕ ಸಲ್ಲಿಸಿದ ಅಫಿಡವಿಟ್‌ನಲ್ಲಿ ಎನ್‌ಎಂಸಿ ಹೈಕೋರ್ಟ್‌ಗೆ ಕ್ಷಮೆಯಾಚಿಸಿದೆ.

ಎನ್‌ಎಂಸಿ ಅಥವಾ ಅದರ ಅಧಿಕಾರಿಗಳು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಅಥವಾ ಕೆಳ ನ್ಯಾಯಾಲಯಗಳ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುವುದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ನವೆಂಬರ್ 13, 2014ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ ಎಂದು ಎನ್‌ಎಂಸಿ ಹೇಳಿಕೊಂಡಿದೆ. ನ್ಯಾಯಮೂರ್ತಿ ಬಿ.ಆರ್‌ ಗವಾಯಿ ನೇತೃತ್ವದ ಪೀಠವು, ಆರೋಪಿ ಅಥವಾ ಶಿಕ್ಷೆಗೊಳಗಾದ ವ್ಯಕ್ತಿಗಳೆಂಬ ಕಾರಣಕ್ಕಾಗಿ ಸರ್ಕಾರ ಅವರ ಮನೆಗಳು/ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಬಗ್ಗೆ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಸುತ್ತೋಲೆಗಳನ್ನು ಹೊರಡಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದೆ ಎಂಬ ಅಂಶವನ್ನು ಅಫಿಡವಿಟ್ ಎತ್ತಿ ತೋರಿಸಿದೆ.

ಅಲ್ಲದೆ, ಪೊಲೀಸ್ ಅಧಿಕಾರಿಗಳು ಮಾರ್ಚ್ 21ರ ಗಲಭೆಯ ಆರೋಪಿಗಳ ಆಸ್ತಿಗಳ ಕುರಿತು ಎನ್‌ಎಂಸಿಯಿಂದ ವಿವರಗಳನ್ನು ಕೋರಿದ್ದರು ಮತ್ತು ಆರೋಪಿಗಳ ಆಸ್ತಿಗಳು ಅಕ್ರಮವಾಗಿದ್ದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಕೇಳಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅರ್ಜಿದಾರರು ತಮ್ಮ ಮನೆಯ ಅನುಮೋದಿತ ಯೋಜನೆ ದಾಖಲೆ ನೀಡಲು ವಿಫಲವಾಗಿದ್ದನ್ನು ಕಂಡುಕೊಂಡ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಕಟ್ಟಡ ಕೆಡವುವ ಮುನ್ನ ಅರ್ಜಿದಾರರಿಗೆ ಶೋಕಾಸ್ ನೀಡಿ ಪ್ರತಿಕ್ರಿಯಿಸಲು ಅವರಿಗೆ ಒಂದು ದಿನದ ಗಡುವು ನೀಡಲಾಗಿತ್ತು ಎಂದು ಎನ್‌ಎಂಸಿ ಹೇಳಿಕೊಂಡಿದೆ.

ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...