Homeಕರ್ನಾಟಕಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ‘ಪತ್ರ’ ಮುಖೇನ ಕ್ಷಮೆ ಕೇಳಿದ್ದ ವಿಇಎಸ್‌ ಶಾಲೆ, ಪ್ರೆಸ್‌ಮೀಟ್‌ನಲ್ಲಿ ಯೂಟರ್ನ್!

ಸಂವಿಧಾನ ಸಂರಕ್ಷಣಾ ಸಮಿತಿಗೆ ಪತ್ರ ಬರೆದು ತಪ್ಪೊಪ್ಪಿಕೊಂಡಿದ್ದ ವಿಇಎಸ್ ಶಾಲೆಯು, ಪತ್ರಿಕಾಗೋಷ್ಠಿಯಲ್ಲಿ ಬೇರೆಯ ಆರೋಪಗಳನ್ನು ಮಾಡಿದೆ.

- Advertisement -
- Advertisement -

ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ ವಿವಾದ ಸೃಷ್ಟಿಸಿದ್ದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಇಎಸ್ ಮಾಡೆಲ್ ಕಾನ್ವೆಂಟ್‌ ಶಾಲೆಯು ತಪ್ಪೊಪ್ಪಿಕೊಂಡು ‘ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ’ಗೆ ಪತ್ರ ಬರೆದಿತ್ತು. ಆದರೆ ಇಂದು (ಸೋಮವಾರ) ರಾಮನಗರದಲ್ಲಿ ಶಾಲೆಯ ಆಡಳಿತ ಮಂಡಳಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಷಯಾಂತರ ಮಾಡಲು ಯತ್ನಿಸಲಾಯಿತು ಎಂದು ಆಕ್ರೋಶ ವ್ಯಕ್ತವಾಗಿದೆ.

“ವಿಇಎಸ್‌ ಶಾಲೆಯಲ್ಲಿ ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿ, ವಿವಾದ ಸೃಷ್ಟಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ ದೂರು ನೀಡಿತ್ತು. ಬಳಿಕ ಶಾಲಾ ಮಂಡಳಿ ತಪ್ಪೊಪ್ಪಿಕೊಂಡು, ಸಂವಿಧಾನ ರಕ್ಷಣಾ ಸಮಿತಿಗೆ ಪತ್ರವನ್ನೂ ಬರೆದಿತ್ತು. ಆರು ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಆರು ಅಂಶಗಳು

1. ನಮ್ಮ ಶಾಲೆಯಲ್ಲಿ ಜ.24ರಂದು ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಚರ್ಚಾಸ್ಪರ್ಧೆಗೆ ‘72 years of Bharathiya Samvidana/Indian Constitution has it reached expiry date’ ಎಂಬ ವಿಷಯವನ್ನು ನೀಡಲಾಗಿತ್ತು. ಇದರಿಂದ ಸಾರ್ವಜನಿಕರಿಂದ, ತಮ್ಮ ಸಮಿತಿಯಿಂದ ಆಕ್ಷೇಪಣೆ ಬಂದ ಮೇಲೆ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಈ ತಪ್ಪಿಗಾಗಿ ನಮ್ಮ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವು ತಮ್ಮ ಸಮಿತಿಗೆ, ಕರ್ನಾಟಕದ ಜನತೆಗೆ ಬೇಷರತ್‌ ಕ್ಷಮೆ ಕೇಳುತ್ತದೆ.

2. ನಮ್ಮ ತಪ್ಪಿನ ಅರಿವಿನ ಕುರಿತು ಪತ್ರಿಕಾ ವರದಿಯನ್ನು ಸಹ ಬಿಡುಗಡೆಗೊಳಿಸುತ್ತೇವೆ.

3. ಸಂವಿಧಾನಕ್ಕೆ ಅಪಚಾರವೆಸಗುವ ಇಂಥ ವಿಷಯವನ್ನು ಚರ್ಚೆಗೆ ನೀಡಿದ್ದ ನಮ್ಮ ಶಾಲಾ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ.

4. ನಮ್ಮ ಶಾಲೆಯು ಭಾರತದ ಸಂವಿಧಾನವನ್ನು ಸಂಪೂರ್ಣ ಗೌರವಿಸುತ್ತದೆ. ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವಂತಹ ಕಾರ್ಯವನ್ನು ಮಾಡುತ್ತದೆ ಎಂಬುದನ್ನು ಈ ಮೂಲಕ ಸೃಷ್ಟೀಕರಿಸುತ್ತಾ ಇದಕ್ಕೆ ಪುರಕವಾಗಿ ಇದೇ ಫೆಬ್ರವರಿ ತಿಂಗಳಲ್ಲಿ ಒಂದು ದಿನ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಅರಿವು ಕಾರ್ಯಕ್ರಮವನ್ನು ಏರ್ಪಡಿಸುತ್ತೇವೆ. ತಮ್ಮ ಸಮಿತಿಯವರ ಸಲಹೆಯಂತೆ ಸಂವಿಧಾನ ತಜ್ಞರನ್ನು ಅತಿಥಿಗಳಾಗಿ ಆ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ. ಅವರ ಮೂಲಕ ಸಂವಿಧಾನ ಅರಿವು ಮೂಡಿಸುತ್ತೇವೆ.

5. ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಆದೇಶದಂತೆ ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಇಂಗ್ಲಿಷ್‌ನಲ್ಲಿ ಮತ್ತು ಕನ್ನಡದಲ್ಲಿ ಉಚ್ಛಕಂಠದಿಂದ ಓದುತ್ತೇವೆ. ಈ ಮೂಲಕ ಸಂವಿಧಾನಕ್ಕೆ ಗೌರವ ಸಮರ್ಪಿಸುತ್ತೇವೆ.

6. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಪ್ರಜ್ಞಾಪೂರ್ವಕವಾಗಿ ಸಂವಿಧಾನಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅವಮಾನ ಎಸಗುವಂತಹ ಕಾರ್ಯಕ್ರಮವು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಈ ಮೂಲಕ ತಿಳಿಸುತ್ತೇವೆ. ಮೇಲಿನ ಈ ಎಲ್ಲಾ ಮಾತುಗಳಿಗೂ ನಮ್ಮ ಶಾಲೆಯ ಆಡಳಿತ ಮಂಡಳಿಯು ಬದ್ಧವಾಗಿರುತ್ತದೆ.

ಪತ್ರದಲ್ಲಿ ಹೇಳಿದಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಶಾಲಾ ಮಂಡಳಿ, ಕ್ಷಮಾಪಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕ್ಷಮಾಪಣಾ ಪತ್ರದ ಬಗ್ಗೆಯೂ ಹೇಳಲಿಲ್ಲ ಎಂದು ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

“ರಾಮನಗರದಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಬಹಿರಂಗವಾಗಿ ಕ್ಷಮೆಯಾಚಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ ಪತ್ರಿಕಾಗೋಷ್ಠಿ ನಡೆಸಿದ ಸಂಸ್ಥೆಯ ಅಧ್ಯಕ್ಷರಾದ ಅರ್ಜುನ್‌, ಕಾನೂನು ಸಲಹೆಗಾರರಾದ ಶಿವಮ್ಮ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಅದಕ್ಕೆ ಹೊರತಾಗಿ ಶಾಲೆಯ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು” ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಪ್ರತಿನಿಧಿ ರಾಣಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಸಂಸ್ಥೆಯ ವಿರುದ್ಧ ಎರಡು ವರ್ಷಗಳಿಂದ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ವಿಷಯಾಂತರ ಮಾಡಿದ್ದಾರೆ. ‘ಸಂವಿಧಾನಕ್ಕೆ 72 ವರ್ಷಗಳು’ ಎಂದು ವಿಷಯ ಕೊಡಲಾಗಿತ್ತೇ ಹೊರತು, ‘ಸಂವಿಧಾನದ ಅವಧಿ ಮುಗಿದಿದೆ’ ಎಂದು ಕೊಡಲಾಗಿರಲಿಲ್ಲ. ಆದರೆ ವಿಷಯವನ್ನು ತಿರುಚಿ ಸಂಸ್ಥೆಯ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ದೂರಿದ್ದಾರೆ. ಆ ಮೂಲಕ ಪ್ರಕರಣವನ್ನು ತಿರುಚಲಾಗಿದೆ. ಸಂವಿಧಾನ ರಕ್ಷಣಾ ಐಕ್ಯತಾ ಸಮಿತಿಗೆ, ಅಧಿಕಾರಿಗಳಿಗೆ ಸಂಸ್ಥೆಯ ಲೆಟರ್‌ ಹೆಡ್‌ನಲ್ಲಿ ಲಿಖಿತವಾಗಿ ನೀಡಲಾಗಿರುವ ವಿಷಯವನ್ನು ವಿಇಎಸ್‌ ಸಂಸ್ಥೆ ಮರೆಮಾಚಿದ್ದಾರೆ. ಮಾಧ್ಯಮಗಳಿಗೆ ಸುಳ್ಳು ಹೇಳಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿದ್ದ ಪತ್ರಕರ್ತರು ಈ ಕುರಿತು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಬದಲಾದ ನಿಲುವನ್ನು ಸ್ಥಳದಲ್ಲೇ ಖಂಡಿಸಿದ್ದೇವೆ” ಎಂದು ರಾಣಿಯವರು ಮಾಹಿತಿ ನೀಡಿದರು.

(ಶಾಲೆಯ ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಗಿದೆ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.)


ಇದನ್ನೂ ಓದಿರಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಷ್ಟಕ್ಕೆ ಸಿಲುಕಿದಾಗ ಮನುವಾದಿಗಳು ಸಾಮಾನ್ಯವಾಗಿ ಏನು ಮಾಡುತ್ತಾರೋ ಇಲ್ಲೂಸಹ ಅದನ್ನೇ ಮಾಡಿದ್ದಾರೆ. ಈ ಪತ್ರಿಕಾ ಗೋಷ್ಠಿಯಲ್ಲಿ ಮನುವಾದಿಗಳನ್ನು ಸಮರ್ತಿಸಿಕೊಂಡಿರುವುದು, ಸ್ವತಃ ದಲಿತರೂ, ಅಂಬೇಡ್ಕರ್ ಅಬಿಮಾನಿಗಳೂ ಮತ್ತು ಸಮರ್ಥ ವಕೀಲರು ಆದ ನ್ಯಾಯವಾದಿ ಶಿವಮ್ಮ! ಇಲ್ಲಿಯೇ ಮನುವಾದಿಗಳ ಕುತಂತ್ರ ಮತ್ತು ಅಹಿಂದ ವರ್ಗದವರ ದುರಂತ ಅಡಗಿರುವುದು.

  2. ಲೆ ಮನುವಾದಿ ಕೋಮುವಾದಿಗಳ… ಅಂಬೇಡ್ಕರ್ ಅನ್ನುವ ಮಹಾನ್ ಚೇತನ ಎಂದೆಂದೂ ಗತಿಸಿ ಹೋಗದಂತಹ ಸೂರ್ಯ… ಅವರ ಹೆಸರಿಗೆ ಮತ್ತು ಅವರ ಗೌರವಕ್ಕೆ ಒಂದು ಸಣ್ಣ ಕಪ್ಪು ಚುಕ್ಕೆಯನ್ನು ನಿಮ್ಮಿಂದ ಇಡಲು ಸಾಧ್ಯವಿಲ್ಲ…. ಅವರಂತೆ ನೀವೆಂದೂ ಆಗಲು ಅಸಾಧ್ಯದ ಮಾತು… ಕೊನೆಪಕ್ಷ ಅವರ ಆದರ್ಶಗಳನ್ನದರು ಜೀವನದಲ್ಲಿ ಅಳವಡಿಸಿ ಕೊಳ್ಳಿ…ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...