Homeಮುಖಪುಟಕಳೆದ 11 ವರ್ಷಗಳಿಂದ ದೇಶದಲ್ಲಿ 'ಅಘೋಷಿತ ತುರ್ತು ಪರಿಸ್ಥಿತಿ'ಯಿದೆ: ಕಾಂಗ್ರೆಸ್

ಕಳೆದ 11 ವರ್ಷಗಳಿಂದ ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯಿದೆ: ಕಾಂಗ್ರೆಸ್

- Advertisement -
- Advertisement -

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಕೇಂದ್ರ ಸರ್ಕಾರ ‘ಸಂವಿಧಾನ ಹತ್ಯೆ ದಿನ’ ಆಚರಿಸುತ್ತಿದೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, “ದೇಶದಲ್ಲಿ ಕಳೆದ 11 ವರ್ಷಗಳಿಂದ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಭಾರತದ ಪ್ರಜಾಪ್ರಭುತ್ವದ ಮೇಲೆ ಆಡಳಿತವು (ಕೇಂದ್ರ ಸರಕಾರ) ನಿರಂತರ ಮತ್ತು ಅಪಾಯಕಾರಿ ದಾಳಿಯನ್ನು ನಡೆಸುತ್ತಿದೆ” ಎಂದು ಹೇಳಿದೆ.

ಪ್ರಸ್ತುತ ಆಡಳಿತದಲ್ಲಿ ನಾಗರಿಕ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಗುತ್ತಿದೆ ಮತ್ತು ದ್ವೇಷ ಭಾಷಣವು ಅತಿರೇಕವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿಕೆ ನೀಡಿ, “ಸರ್ಕಾರದ ಟೀಕಾಕಾರರನ್ನು ನಿರಂತರವಾಗಿ ರಾಕ್ಷಸೀಕರಿಸಲಾಗುತ್ತಿದೆ. ಅಧಿಕಾರದಲ್ಲಿರುವವರು ದ್ವೇಷ ಮತ್ತು ಧರ್ಮಾಂಧತೆಯನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ. ಪ್ರತಿಭಟನಾ ನಿರತ ರೈತರನ್ನು ‘ಖಲಿಸ್ತಾನಿಗಳು’ ಎಂದು ಬ್ರಾಂಡ್ ಮಾಡಲಾಗಿದೆ. ಜಾತಿ ಜನಗಣತಿಯ ಬೆಂಬಲಿಗರನ್ನು ‘ನಗರ ನಕ್ಸಲರು’ ಎನ್ನಲಾಗಿದೆ ಎಂದಿದ್ದಾರೆ.

“ಮಹಾತ್ಮ ಗಾಂಧಿಯ ಹಂತಕರನ್ನು ವೈಭವೀಕರಿಸುವ ವ್ಯಕ್ತಿಗಳನ್ನು ಕೊಂಡಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳು ಭಯದಲ್ಲಿ ಬದುಕುತ್ತಿವೆ. ದುರ್ಬಲ ವರ್ಗದವರು, ವಿಶೇಷವಾಗಿ ದಲಿತರು ಅಸಮಾನತೆಗೆ  ಗುರಿಯಾಗುತ್ತಿದ್ದಾರೆ. ಆಘಾತಕಾರಿಯಾಗಿ, ದ್ವೇಷದ ಹೇಳಿಕೆಗಳನ್ನು ನೀಡುವ ಸಚಿವರಿಗೆ ಬಡ್ತಿ ನೀಡಲಾಗುತ್ತಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಕಳೆದ ಹನ್ನೊಂದು ವರ್ಷಗಳು ಮತ್ತು ಮೂವತ್ತು ದಿನಗಳಲ್ಲಿ, ಭಾರತೀಯ ಪ್ರಜಾಪ್ರಭುತ್ವದ ಮೇಲಿನ ವ್ಯವಸ್ಥಿತ ಮತ್ತು ಅಪಾಯಕಾರಿ ದಾಳಿಯು ಐದು ಪಟ್ಟು ಹೆಚ್ಚಾಗಿದೆ. ಇದನ್ನು ಅಘೋಷಿತ ತುರ್ತು ಪರಿಸ್ಥಿತಿ@11 ಎಂದು ಉತ್ತಮವಾಗಿ ವಿವರಿಸಬಹುದು” ಎಂದು ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಸಂವಿಧಾನದ ಮೇಲಿನ ದಾಳಿಗಳು, ತೆರಿಗೆ ಭಯೋತ್ಪಾದನೆ, ವ್ಯವಹಾರಗಳು ಮತ್ತು ಸಂಸ್ಥೆಗಳ ಮೇಲಿನ ಬೆದರಿಕೆ, ಮಾಧ್ಯಮಗಳ ಮೇಲಿನ ನಿಯಂತ್ರಣ ಮತ್ತು ತನಿಖಾ ಸಂಸ್ಥೆಗಳ ದುರುಪಯೋಗ” ವನ್ನು ಉಲ್ಲೇಖಿಸಿ “ಅಘೋಷಿತ ತುರ್ತು ಪರಿಸ್ಥಿತಿ” ಜಾರಿಯಲ್ಲಿದೆ ಎಂದು ಜೈರಾಮ್ ರಮೇಶ್ ಹೇಳಿಕೆ ನೀಡಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಬದಲಾಯಿಸಲು ಮತ್ತು ಬಿ.ಆರ್ ಅಂಬೇಡ್ಕರ್ ಅವರ ಪರಂಪರೆಯನ್ನು ದುರ್ಬಲಗೊಳಿಸಲು “400 ಪಾರ್” ಜನಾದೇಶವನ್ನು ಬಯಸಿದ್ದರು. ಆದರೆ, ಅವರ ಬಯಕೆಯನ್ನು ಭಾರತದ ಜನರು ನಿರ್ಣಾಯಕವಾಗಿ ತಿರಸ್ಕರಿಸಿದರು. ಜನರು ಪ್ರಸ್ತುತ ಅಸ್ತಿತ್ವದಲ್ಲಿರುವ ಸಂವಿಧಾನ ಮತ್ತು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ನ್ಯಾಯದ ಮೌಲ್ಯಗಳನ್ನು ರಕ್ಷಿಸಲು ಮತ್ತು ಬಲಪಡಿಸಲು ಮತ ಚಲಾಯಿಸಿದರು” ಎಂದು ಹೇಳಿದ್ದಾರೆ.

ಸಾರ್ವಜನಿಕ ಸಮಸ್ಯೆಗಳನ್ನು ಎತ್ತಿದ್ದಕ್ಕಾಗಿ ಸಂಸದರನ್ನು ಅಮಾನತುಗೊಳಿಸುವ ಮೂಲಕ, ಸಂಸದೀಯ ಸಮಿತಿಗಳನ್ನು ಬೈಪಾಸ್ ಮಾಡುವ ಮೂಲಕ ಮತ್ತು ಚರ್ಚೆಯಿಲ್ಲದೆ ಪ್ರಮುಖ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಮೋದಿ ಸರ್ಕಾರ ಸಂಸತ್ತನ್ನು ದುರ್ಬಲಗೊಳಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳು ಸವೆದು ಹೋಗುತ್ತಿವೆ ಎಂದು ಆರೋಪಿಸಿರುವ ಜೈರಾಮ್ ರಮೇಶ್, “ಸಿಎಜಿ ಅಪ್ರಸ್ತುತವಾಗಿದೆ, ಚುನಾವಣಾ ಆಯೋಗದ ಸಮಗ್ರತೆಗೆ ಧಕ್ಕೆಯಾಗಿದೆ ಮತ್ತು ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಚುನಾವಣಾ ವೇಳಾಪಟ್ಟಿಯನ್ನು ರೂಪಿಸಲಾಗಿದೆ” ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನೇತೃತ್ವದ ರಾಜ್ಯ ಸರ್ಕಾರಗಳನ್ನು ಉರುಳಿಸಲು ಹಣಬಲವನ್ನು ಬಳಸಿಕೊಳ್ಳಲಾಗಿದೆ. ರಾಜ್ಯದ ಮಸೂದೆಗಳನ್ನು ತಡೆಯಲು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹಸ್ತಕ್ಷೇಪ ಮಾಡಲು ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ರಾಜ್ಯಗಳಿಗೆ ನ್ಯಾಯಯುತ ಆದಾಯದ ಪಾಲನ್ನು ನಿರಾಕರಿಸಲು ಸೆಸ್‌ಗಳನ್ನು ಅತಿಯಾಗಿ ಬಳಸಲಾಗಿದೆ ಎಂದು ರಮೇಶ್ ಆರೋಪಿಸಿದ್ದಾರೆ.

ಮಾಧ್ಯಮ ಸಂಸ್ಥೆಗಳು ದೊಡ್ಡ ಮಟ್ಟದ ಒತ್ತಡಕ್ಕೆ ಒಳಗಾಗಿವೆ. ಪ್ರಮುಖ ಪತ್ರಕರ್ತರು ಬಂಧನಗಳು ಮತ್ತು ದಾಳಿಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಮಾಧ್ಯಮಗಳು ಪ್ರಚಾರ ಸಾಧನಗಳಾಗಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯನ್ನು ಪೊಳ್ಳಾಗಿಸಲಾಗಿಸಲಾಗಿದೆ. ಇಡಿ, ಸಿಬಿಐ ಮತ್ತು ಐಟಿ ಇಲಾಖೆಯಂತಹ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಗುರಿಯಾಗಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 8,000 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

“ಬಿಜೆಪಿಗೆ ಸೇರುವವರು ಇಡಿ, ಸಿಬಿಐ ಪ್ರಕರಣಗಳಿಂದ ಮುಕ್ತರು” ಎಂದು ಅವರು ಹೇಳಿದ್ದಾರೆ.

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. What Jairam Ramesh has revealed is 100 percent true
    Since 2014 there is an Undeclared Emergency is attributing
    There is no doubt in Democracy has been destroyed in a systamatic manner

  2. If anyone opened their lips against the wrong doing they will becomes anti Indian, they are going to punish in one or the other way by the Ruling Government
    This is why the Publics voted to the wrong persons
    This is to be changed immediately

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...