Homeಸಿನಿಮಾಕ್ರೀಡೆ19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿ 5ನೇ ಬಾರಿ ಕಪ್ ಗೆದ್ದ ಭಾರತ

19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿ 5ನೇ ಬಾರಿ ಕಪ್ ಗೆದ್ದ ಭಾರತ

- Advertisement -
- Advertisement -

ಆಂಟಿಗುವದ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಎದುರು 4 ವಿಕೆಟ್‌ಗಳ ಜಯ ಗಳಿಸುವದರೊಂದಿಗೆ ಭಾರತವು 5ನೇ ಬಾರಿ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡವು 190 ರನ್‌ಗಳ ಗುರಿ ನೀಡಿತು. ಭಾರತ ತಂಡವು 47.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಶೈಕ್ ರಶೀದ್ 84 ಎಸೆತಗಳಲ್ಲಿ 50 ರನ್ ಗಳಿಸಿದರೆ, ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅದರಲ್ಲಿಯೂ ಕೊನೆಯ ಎಸೆತದಲ್ಲಿ ಸಿಕ್ಸರ್ ಭಾರಿಸುವ ಮೂಲಕ ಭಾರತ ತಂಡ 195 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇಂಗ್ಲೆಂಡ್ ತಂಡದ ಜೋಶ್ಹು ಬೋಯ್ಡೆನ್, ಜೇಮ್ಸ್ ಸೇಲ್ಸ್ ಮತ್ತು ಥಾಮಸ್ ಅಸ್ಪಿನ್ವಾಲ್ ತಲಾ ಎರಡು ವಿಕೆಟ್ ಪಡೆದರು.

ಅದಕ್ಕು ಮುನ್ನ ಬೌಲ್ ಮಾಡಿದ ಭಾರತ ತಂಡ ಇಂಗ್ಲೆಂಡ್‌ ಆಟಗಾರರ ಬೆವರಿಳಿಸಿತು. ರಾಜ್ ಬಾವಾ 31 ರನ್ ನೀಡಿ ಐದು ವಿಕೆಟ್ ಕಬಳಿಸಿದರೆ, ರವಿಕುಮಾರ್ 4 ವಿಕೆಟ್ ಪಡೆದು ಮಿಂಚಿದರು. ಒಂದು ಹಂತದಲ್ಲಿ ಇಂಗ್ಲೆಂಡ್ ತಂಡ 45 ರನ್‌ಗಳಿಗೆ 5 ವಿಕೆಟ್ ಕಳೆದುಕಂಡು ಸಂಕಷ್ಟದಲ್ಲಿತ್ತು. ಇನ್ನು ಮುಂದುವರಿದು 91 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡು ಆಲೌಟ್ ಹೊಸ್ತಿಲಲ್ಲಿತ್ತು. ಆದರೆ ಆ ಸಮಯದಲ್ಲಿ ಬಂಡೆಯಂತೆ ನಿಂತು ಆಟವಾಡಿದ ಜೇಮ್ಸ್ ರಿವ್ 116 ಎಸೆತಗಳಲ್ಲಿ 95 ರನ್ ಗಳಿಸಿ ತಂಡ ಪೈಪೋಟಿಯುತ ಮೊತ್ತ ತಲುಪಲು ಸಹಕರಿಸಿದರು. ಬೌಲಿಂಗ್‌ನಲ್ಲಿ ಮಿಂಚಿದ್ದ ಭಾರತದ ರಾಜ್ ಬಾವಾ ಬ್ಯಾಟಿಂಗ್‌ನಲ್ಲಿಯೂ ಸಹ 35 ರನ್‌ಗಳ ಕಾಣಿಕೆ ನೀಡಿದರು. ಹಾಗಾಗಿ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

ಈ ಫೈನಲ್ ಪಂದ್ಯದಲ್ಲಿ ಗೆಲುವಿನೊಂದಿಗೆ ಭಾರತ 5 ಬಾರಿ ಪ್ರಶಸ್ತಿ ಪಡೆದ ದಾಖಲೆ ಮಾಡಿತು. ಈ ಮೊದಲು 2000, 2008, 2012, 2018ರಲ್ಲಿ ಭಾರತದ ತಂಡ 19 ವರ್ಷದೊಳಗಿನವರ ವಿಶ್ವಕಪ್ ಮುಡಿಗೇರಿಸಿಕೊಂಡಿತ್ತು. ಭಾರತ ತಂಡದ ಗೆಲುವಿಗೆ ಶ್ಲಾಘನೆ ವ್ಯಕ್ತಪಡಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ 40 ಲಕ್ಷ ರೂಗಳ ಬಹುಮಾನ ಸಹ ಘೋಷಿಸಿದ್ದಾರೆ.


ಇದನ್ನೂ ಓದಿ: ಶ್ರೀಮಂತಿಕೆಯಲ್ಲಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿದ ಗೌತಮ್ ಅದಾನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...