Homeಕರ್ನಾಟಕಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

"ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಪರಿಹಾರ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ?"

- Advertisement -
- Advertisement -

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರಿಗೆ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ?” ಎಂದು ಕೇಳಿದ್ದಾರೆ.

ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು, ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ. ಪೊಲೀಸರ ತನಿಖಾ ವರದಿಯೂ ಬಂದಿಲ್ಲ. ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದು ಕಟುವಾಗಿ ಟೀಕಿಸಿದ್ದಾರೆ.

ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ? ಎಂದು ಕೇಳಿದ್ದಾರೆ.

ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ ‘ವಿವೇಚನೆ’ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದ್ದಾರೆ.

ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಕೇಳಿದ್ದಾರೆ.


ಇದನ್ನೂ ಓದಿರಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...