Homeಮುಖಪುಟಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಮೋದಿ ಹುಟ್ಟುಹಬ್ಬವನ್ನು ‘ನಿರುದ್ಯೋಗ, ಜುಮ್ಲಾ ದಿನ’ವನ್ನಾಗಿ ಆಚರಿಸಲು ಸಜ್ಜು

ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಪ್ರಧಾನಿಯವರ ಆಶ್ವಾಸನೆಗಳನ್ನು ನೆನಪಿಸುವ ನಿಟ್ಟಿನಲ್ಲಿ ಅವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ", "ಜುಮ್ಲಾ ದಿನ" ಎಂದು ಆಚರಿಸಲು ಯೂತ್‌ ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

- Advertisement -
- Advertisement -

ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಮೋದಿಯನ್ನು ವಿಶ್ವದ ಮಹಾನ್ ನಾಯಕ ಎಂದು ಬಿಂಬಿಸಲು ಸಂಘ ಪರಿವಾರ ಮಾಮೂಲಿಯಂತೆ ಪ್ರಯತ್ನಿಸಲಿದೆ. ಮುಂದಿನ ವರ್ಷ ಗುಜರಾತ್ ಚುನಾವಣೆ ನಡೆಯಲಿದ್ದು, ಮೋದಿಯ ಜನ್ಮದಿನದಂದು ‘ರಾಮಜಪ’ ಮಾಡುವ ಮೂಲಕ ಹಿಂದೂ ಮತಗಳ ಧ್ರುವೀಕರಣ ಮಾಡಲು ಗುಜರಾತ್‌ ಬಿಜೆಪಿ ಮುಂದಾಗಿದೆ. ಅಲ್ಲದೆ ಇಪ್ಪತ್ತು ದಿನಗಳ ಕಾಲ ‘ಸೇವಾ ಸಮರ್ಪಣಾ ದಿನ’ವನ್ನೂ ಆಚರಿಸಲಾಗುತ್ತಿದೆ.

ಪ್ರಧಾನಿ ಮೋದಿಯವರ ಜನ್ಮದಿನವನ್ನು ಅವರ ಸಾಧನೆಯ ಆಧಾರದಲ್ಲಿ ಆಚರಿಸಬೇಕು. ಅವರು ನೀಡಿದ ಆಶ್ವಾಸನೆಗಳ ಈಡೇರಿಕೆಯ ಆಧಾರದಲ್ಲಿ ನೋಡಬೇಕು. ಮೋದಿ ಜನ್ಮದಿನ ಅವರ ಸಾಧನೆಯ ಪರಮಾರ್ಶೆಗೆ ಮೀಸಲಾಗಬೇಕು. ಬಿಜೆಪಿ ಐಟಿ ಸೆಲ್‌ ಬಿತ್ತರಿಸುವ ಸುಳ್ಳುಗಳೇ ಸಾಧನೆಗಳಲ್ಲ. ಈ ನಿಟ್ಟಿನಲ್ಲಿ ಸರ್ಕಾರವನ್ನು ಪ್ರಶ್ನಿಸಲು ಮೋದಿ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’, ‘ಜುಮ್ಲಾ ದಿನ’ ಎಂದು ಆಚರಿಸಿ, ಸರ್ಕಾರದ ವೈಫಲ್ಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಗತಿಪರ ಸಂಘಟನೆಗಳು ಸಜ್ಜಾಗಿವೆ.

ಮೋದಿಯವರು ಪ್ರಧಾನಿಯಾಗಿ ಮಾಡಿರುವ ಬಹುಮುಖ್ಯ ಎಡವಟ್ಟುಗಳಲ್ಲಿ ಒಂದಾದ ನಿರುದ್ಯೋಗವನ್ನು ಮುಖ್ಯವಾಗಿಟ್ಟುಕೊಂಡು ‘ರಾಷ್ಟ್ರೀಯ ನಿರುದ್ಯೋಗ ದಿನ’ವನ್ನು ಆಚರಿಸಲು ಯೂತ್‌ ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸೇತರ ಸಂಘಟನೆಗಳೂ ಇದಕ್ಕೆ ಕೈಜೋಡಿಸಿವೆ. ‘ಮೋದಿ ಯುವ ಜನ ವಿರೋಧಿಯಾಗಿದ್ದಾರೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

2021ರ ಆಗಸ್ಟ್‌ ತಿಂಗಳಲ್ಲಿ 15 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದು, ಜುಲೈನಲ್ಲಿ ಶೇ. 6.95ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಸ್ಟ್‌ ತಿಂಗಳಲ್ಲಿ ಶೇ. 8.32ಕ್ಕೆ ಏರಿದೆ ಎಂದು ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ) ಇತ್ತೀಚೆಗೆ ಹೇಳಿದೆ.

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಜುಲೈನಲ್ಲಿ 39.938 ಕೋಟಿ ಇದ್ದ ಉದ್ಯೋಗಿಗಳ ಸಂಖ್ಯೆ ಆಗಸ್ಟ್‌ ವೇಳೆಗೆ 39.778 ಕೋಟಿ ಆಗಿದೆ. ಗ್ರಾಮೀಣ ಭಾರತದಲ್ಲಿ 13 ಲಕ್ಷ ಮಂದಿ ಕೆಲಸ ಕಳೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜುಲೈನಲ್ಲಿ ಶೇ. 8.3ರಷ್ಟಿದ್ದ ನಗರ ನಿರುದ್ಯೋಗ ದರ, ಆಗಸ್ಟ್‌ನಲ್ಲಿ ಶೇ. 9.78ಕ್ಕೆ ಏರಿಕೆ ಕಂಡಿದೆ ಎಂದು ಸಿಎಂಐಇ ತಿಳಿಸಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿಯವರು 2014ರ ಲೋಕಸಭಾ ಚುನಾವಣೆ ವೇಳೆ ಹೇಳಿದ್ದರು. ಆದರೆ ಇರುವ ಉದ್ಯೋಗವನ್ನೂ ಕಳೆಯುವಂತಾಯಿತು. ಮುಂದಾಲೋಚನೆ ಇಲ್ಲದ ನೋಟ್‌ ಬ್ಯಾನ್‌ನಿಂದಾಗಿ ಆಗಿರುವ ಆರ್ಥಿಕ ನಷ್ಟವನ್ನು ಇಂದಿಗೂ ಸರಿದೂಗಿಸಲು ಸಾಧ್ಯವಾಗಿಲ್ಲ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಏಕಾಏಕಿ ಲಾಕ್‌ಡೌನ್‌ ಘೋಷಿಸಿ ಗಾಯಕ್ಕೆ ಉಪ್ಪು ಸವರಿದಂತಾಯಿತು. “ಮೋದಿಯವರು ಯುವಜನರ ವಿರೋಧಿಯಾಗಿದ್ದಾರೆ. ಶೇ. 2.4 ಇದ್ದ ನಿರುದ್ಯೋಗ ದರ ಶೇ.10.3ಕ್ಕೆ ಒಂದೇ ವರ್ಷದಲ್ಲಿ ಏರಿಕೆಯಾಗಿದೆ” ಎನ್ನುತ್ತದೆ ಯೂತ್‌ ಕಾಂಗ್ರೆಸ್‌.

ಸೆಪ್ಟೆಂಬರ್‌ 12ರಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ 4,000 ಕಂಪನಿಗಳು ಮುಚ್ಚಲಿವೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು. “ಭಾನುವಾರ ಮತ್ತು ಸೋಮವಾರದ ನಡುವಿನ ವ್ಯತ್ಯಾಸವನ್ನು ಬಿಜೆಪಿ ಸರ್ಕಾರದ ಆಡಳಿತ ಕೊನೆಗೊಳಿಸಿದೆ. ಕೆಲಸವಿಲ್ಲದ ಮೇಲೆ ಭಾನುವಾರ ಆದರೇನು? ಸೋಮವಾರ ಆದರೇನು?” ಎಂದು ರಾಹುಲ್‌ ಗಾಂಧಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ನಿರುದ್ಯೋಗ ಪಿತಾಮಹ ಮೋದಿ: ರಕ್ಷ ರಾಮಯ್ಯ

ರಕ್ಷ ರಾಮಯ್ಯ

2018ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ದರ ಹೊಂದಿದ ಎರಡನೇ ರಾಜ್ಯ ಕರ್ನಾಟಕವಾಗಿತ್ತು. ಆದರೆ ಈಗ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಶೇ.4 ಮಾತ್ರ ಸಾಧನೆ ಮಾಡಿದ್ದು ತೀರಾ ಹಿಂದುಳಿದಿದೆ. ಇನ್ನು ಮೋದಿಯವರನ್ನು ನಿರುದ್ಯೋಗದ ಪಿತಾಮಹ ಎನ್ನಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆ ತೋರಿಸಲು ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಗುವುದು ಎಂದು ಕರ್ನಾಟಕ ಯೂತ್‌ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹೇಳುತ್ತಾರೆ.

ಸೆ.17ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿರುದ್ಯೋಗ ದಿನ, ಜುಮ್ಲಾ ದಿನದ ಕುರಿತು ಅಭಿಯಾನವನ್ನೂ ನಡೆಸಲಾಗುತ್ತಿದೆ.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸರೋವರ ಬೆಂಕಿಕೆರೆ, “ಯಾವುದೇ ದೇಶದ ಪ್ರಧಾನಿಯ ಜನ್ಮದಿನವನ್ನು ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ದುರಾದೃಷ್ಟವಶಾತ್‌ ಪ್ರಧಾನಿಯವರು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲ್ಲ. ಉದ್ಯೋಗ ನಷ್ಟದಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಕಳೆದುಕೊಂಡ ಯುವಕರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿ ಬರುವ ಪ್ರಶ್ನೆಗಳನ್ನು ಮುಚ್ಚಿಹಾಕಲು ಸರ್ಕಾರ ಹಣ ವಿನಿಯೋಗಿಸುತ್ತಿದೆ. ಇದೇ ಹಣವನ್ನು ನಿರುದ್ಯೋಗ ನಿರ್ಮೂಲನೆಗೆ ಬಳಸಬಹುದಲ್ಲ” ಎಂದರು.


  ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...