Homeಕರ್ನಾಟಕಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ...

ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆ ಮತ್ತು ನವ ಉದಾರವಾದಿ ನೀತಿಗಳ ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ-ಮಾರ್ಕ್ಸ್‌ವಾದಿ (ಸಿಪಿಐ-ಎಂ) ಪಾಲಿಟ್‌ ಬ್ಯೂರೋ ಸದಸ್ಯ ಪ್ರಕಾಶ್‌ ಕಾರಟ್‌ ಸೋಮವಾರ ಹೇಳಿದ್ದಾರೆ. ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನವರಿ 2 ರಿಂದ 4ರವರೆಗೆ ನಡೆಯುತ್ತಿರುವ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

“ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕೋಟ್ಯಾಂತರ ಜನ ಬಾಧಿತರಾಗಿದ್ದು ಲಕ್ಷಾಂತರ ಜನ ಅಸುನೀಗಿದ್ದಾರೆ. ಅತ್ಯಂತ ಮುಂದುವರೆದ ದೇಶಗಳಲ್ಲೂ ದಿನಂಪ್ರತಿ ಸಾವಿರಾರು ಜನ ಬಲಿಯಾಗುತ್ತಿದ್ದಾರೆ. ಇದು ಸಾರ್ವಜನಿಕ ವ್ಯವಸ್ಥೆಯನ್ನು ಬಲಪಡಿಸದೆ ಖಾಸಗೀಕರಣ ಮಾಡಿದ್ದರ ಪರಿಣಾಮ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

“ಇದಕ್ಕೆ ವಿರುದ್ಧವಾಗಿ ಸಮಾಜವಾದಿ ಕ್ಯೂಬಾದಲ್ಲಿ ಸಾಂಕ್ರಾಮಿಕವನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಿದ್ದಲ್ಲದೆ, ಆರು ರೀತಿಯ ಲಸಿಕೆಗಳನ್ನು ಬಳಸಲಾಗುತ್ತಿದೆ. ಇದು ಸ್ಪಷ್ಟವಾಗಿ ಬಂಡವಾಳಶಾಹಿ ಮತ್ತು ಸಮಾಜವಾದಿ ವ್ಯವಸ್ಥೆಯ ನಡುವಿನ ಪ್ರಧಾನ ವೈರುಧ್ಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಡದೇಶಗಳು ಹಾಗೂ ಮುಂದುವರೆದ ದೇಶಗಳ ನಡುವಿನ ವೈರುಧ್ಯ ತೀವ್ರಗೊಳ್ಳುತ್ತಿರುವುದು ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಎದ್ದುಕಾಣುತ್ತಿದೆ. ಇಂದಿಗೂ ಆಫ್ರಿಕನ್‌ ದೇಶಗಳಲ್ಲಿ 70% ದಷ್ಟು ಜನರಿಗೆ ಲಸಿಕೆ ಲಭ್ಯವಾಗಿಲ್ಲ ಎಂಬ ವರದಿಗಳಿವೆ. ಲಸಿಕೆಯ ಪೇಟೆಂಟ್‌ ಪಡೆದಿರುವ ಕಾರ್ಪೋರೇಟ್‌ ಕಂಪನಿಗಳು ತಮ್ಮ ಲಾಭಕೋರತನದಿಂದ ದುಬಾರಿ ದರಗಳನ್ನು ನಿಗದಿ ಮಾಡಿ ಬಹುಸಂಖ್ಯಾತ ಜನ ಲಸಿಕೆಯಿಂದ ವಂಚಿತರಾಗುವಂತೆ ಮಾಡಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಹಿಂದುತ್ವ ಪ್ರತಿಪಾದನೆಯ ಅಜೆಂಡಾಗಳನ್ನು ಕೋವಿಡ್‌ ಸಾಂಕ್ರಾಮಿಕದಲ್ಲೂ ಮುಂದುವರೆಸಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ನಡೆಯಿಂದಾಗಿ ದೇಶದ ಆರ್ಥಿಕ ಸ್ಥಿತಿಗತಿ ಪಾತಾಳಕ್ಕೆ ಕುಸಿದಿದೆ. ಭಾರೀ ಪ್ರಮಾಣದ ನಿರುದ್ಯೋಗ ತಲೆದೂರಿದೆ. ಮಧ್ಯಮ ವರ್ಗದ ಜನ ಬಡತನ ರೇಖೆಗೆ ತಳ್ಳಲ್ಪಟ್ಟಿದ್ದಾರೆ. ಅಮೇರಿಕ ಪ್ರೇರಿತ ಉದಾರವಾದಿ ನೀತಿಗಳ ಫಲವಾಗಿ ಇವು ನಡೆಯುತ್ತಿವೆ. ಇದರ ಬೆನ್ನಲ್ಲೇ ಚಿಲಿ ಸೇರಿದಂತೆ ಲ್ಯಾಟಿನ್‌ ಅಮೇರಿಕ ದೇಶಗಳಲ್ಲಿ ರೈತರು ಕಾರ್ಮಿಕರು ವಿದ್ಯಾರ್ಥಿ, ಯುವಜನರ ಪ್ರಬಲ ಪ್ರತಿಭಟನೆಗಳು ನವ-ಉದಾರವಾದಿ ನೀತಿಗಳ ವಿರುದ್ಧ ಎದ್ದುಬರುತ್ತಿವೆ. ಪರಿಣಾಮ ಎಡಪಂಥೀಯ ಸರ್ಕಾರಗಳು ಅಸ್ತಿತ್ವಕ್ಕೆ ಬರುತ್ತಿರುವುದು ಬಂಡವಾಳಶಾಹಿ ವ್ಯವಸ್ಥೆಗೆ ಸಮಾಜವಾದಿ ವ್ಯವಸ್ಥೆಯೇ ಪರ್ಯಾಯ ಎಂಬುದರ ಸಂಕೇತವಾಗಿದೆ. ಬಲಪಂಥೀಯ ಸರ್ಕಾರಗಳ ವಿರುದ್ಧ ಜಗತ್ತಿನಾದ್ಯಂತ ಬೆಳೆದುಬರುತ್ತಿರುವ ಜನರ ಪ್ರತಿರೋಧ ಇತಿಹಾಸ ಚಕ್ರ ತಿರುಗುತ್ತಿರುವುದರ ಸ್ಪಷ್ಟ ಸಂದೇಶವಾಗಿದೆ” ಎಂದು ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ದೇಶ ಮತ್ತು ಏಷ್ಯಾದ ಅನೇಕ ದೇಶಗಳು ಅಮೇರಿಕಾದ ಸಾಮ್ರಾಜ್ಯಶಾಹಿ ಜೊತೆಗೆ ಮೈತ್ರಿಗೆ ಮುಂದಾಗಿವೆ. ಜಗತ್ತಿನ ಎರಡನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಚೀನಾಗೆ ಪೈಪೋಟಿ ನೀಡಲು ಹಾಗೂ ಅದರ ಆರ್ಥಿಕ ಶಕ್ತಿಯನ್ನು ದುರ್ಬಲಗೊಳಿಸಲು ಇಂತಹ ಮೈತ್ರಿ ಏರ್ಪಡುತ್ತಿದೆ. ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಹೇರುತ್ತಿದೆ. ಸಾರ್ವಜನಿಕ ರಂಗವನ್ನು ಸಂಪೂರ್ಣವಾಗಿ ನಾಶಪಡಿಸಿ, ಅವೆಲ್ಲವನ್ನು ಕಾರ್ಪೋರೇಟ್‌ ತೆಕ್ಕೆಗೆ ಸೇರಿಸುವ ಪ್ರಯತ್ನ ನಡೆದಿದೆ. ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ ಮೂಲಕ ಇಂತವುಗಳನ್ನು ಮುಂದುವರೆಸಲಾಗುತ್ತಿದೆ. ಇದು ಹಿಂದುತ್ವ ಮತ್ತು ಕಾರ್ಪೋರೇಟ್‌ ಶಕ್ತಿಗಳು ಪರಸ್ಪರ ಅನುಕೂಲತೆಗಳಿಗೆ ತಮ್ಮ ಅಜೆಂಡಾಗಳನ್ನು ಜಾರಿ ಮಾಡಲು ಇಂತಹ ಅಪವಿತ್ರ ಮೈತ್ರಿ ಏರ್ಪಟ್ಟಿದೆ ಎಂಬುದು ಸ್ಪಷ್ಟ” ಎಂದು ಅವರು ಹೇಳಿದ್ದಾರೆ.

“ದೇಶದಲ್ಲಿ ಆರಂಭಗೊಂಡ ರೈತ-ಕಾರ್ಮಿಕರ ಜಂಟಿ ಹೋರಾಟಗಳು ನವ-ಉದಾರವಾದಿ ನೀತಿಗಳನ್ನು ಸಮರೋಪಾದಿಯಲ್ಲಿ ಜಾರಿ ಮಾಡುವ ಮೋದಿ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿ ನಿಂತಿವೆ. ಜನತೆಯ ಪ್ರಬಲ ಹೋರಾಟಗಳೇ ನವ-ಉದಾರವಾದಿ ನೀತಿಗಳ ವಿರುದ್ಧದ ಅಸ್ತ್ರಗಳಾಗಿವೆ. ಹಿಂದುತ್ವ ಕಾರ್ಪೋರೇಟ್‌ ಯಜಮಾನಿಕೆಗೆ ಪರ್ಯಾಯವನ್ನು ರೂಪಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ದೇಶದ ಅವಕಾಶವಾದಿ ಪಕ್ಷಗಳು ಇದಕ್ಕೆ ಪರ್ಯಾಯವಲ್ಲ. ಅದರಲ್ಲಿರುವ ರಾಜಿ ಮನೋಭಾವ ಇದಕ್ಕೆ ಅಡ್ಡಿಯಾಗಿದೆ. ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಮಾತ್ರವೇ ಪರ್ಯಾಯವನ್ನು ರೂಪಿಸಲು ಸಾಧ್ಯ. ಇತಿಹಾಸದುದ್ದಕ್ಕೂ ಜನವಿರೋಧಿ ನೀತಿಗಳಿಗೆ ಪರ್ಯಾಯ ಶಕ್ತಿಯಾಗಿ ಹೋರಾಟದಲ್ಲಿರುವ ಸಿಪಿಐ(ಎಂ) ಪಕ್ಷವನ್ನು ಬಲಪಡಿಸದೆ, ಪರ್ಯಾಯ ರೂಪಿಸಲು ಸಾಧ್ಯವಿಲ್ಲ. ಈ ಬಗ್ಗೆ ಸಿಪಿಐ(ಎಂ)ನ ಅಖಿಲ ಭಾರತ ಸಮ್ಮೇಳನದಲ್ಲಿ ಗಂಭೀರವಾಗಿ ಚರ್ಚೆ ನಡೆಸಲಿದ್ದೇವೆ” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

“ಮೋದಿ ಸರ್ಕಾರದ ನವಭಾರತ ನಿರ್ಮಾಣದ ಮಾತುಗಳು ಕೃತಿಯಲ್ಲಿ ಕಾಣುತ್ತಿಲ್ಲ. ಹಿಂದುತ್ವವಾದಿ ಅಜೆಂಡಾಗಳನ್ನು ಜಾರಿಮಾಡುವ ಅದರ ಪ್ರಯತ್ನದಿಂದಾಗಿ ನವಭಾರತದ ಬದಲು ದೇಶ ಹಿಮ್ಮುಖ ಚಲನೆಯನ್ನು ಕಾಣುತ್ತಿದೆ. ಕಾಶ್ಮೀರದಲ್ಲಿ ಕಲಂ 370 ತೆಗೆದದ್ದು ಇದಕ್ಕೊಂದು ಉದಾಹರಣೆ. ರಾಮಮಂದಿರ ಅಡಿಗಲ್ಲು ಹಾಕುವ ಜೊತೆಯಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗಿರುವುದು ಧರ್ಮದ ಆಧಾರದಲ್ಲಿ ಪೌರತ್ವ ನೀಡುವ ನೀತಿಯು ಸಂವಿಧಾನ ವಿರೋಧಿ ನಡೆಯಾಗಿದೆ. ಸಾಂವಿಧಾನಿಕ ಸಂಸ್ಥೆಗಳಲ್ಲಿ ಹಿಂದುತ್ವ ಅಜೆಂಡಾವನ್ನು ಹೇರುತ್ತಾ ಆ ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ. ಹೊಸ ಸಂಸತ್‌ ಭವನ ನಿರ್ಮಾಣ ಮಾಡುತ್ತಿರುವಾಗಲೇ ಈಗಿರುವ ಸಂಸತ್‌ ಭವನವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಮುಂದಾಗಿದೆ. ಇದರ ಅರ್ಥ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವನ್ನು ಮ್ಯೂಸಿಯಂನಲ್ಲಿ ಬಂಧಿಸಲು ಹೊಂಚು ಹಾಕಲಾಗಿದೆ. ಈಗಾಗಲೇ ಸಂಸತ್‌ ಅನ್ನು ಅಮಾನತ್ತಿನಲ್ಲಿಟ್ಟು ಏಕಪಕ್ಷೀಯವಾಗಿ ನೀತಿಗಳನ್ನು ತರುತ್ತಿರುವುದು ಇದರ ಸ್ಪಷ್ಟ ಸಂದೇಶವಾಗಿದೆ” ಎಂದು ಪ್ರಕಾಶ್‌‌ ಕಾರಟ್ ಹೇಳಿದ್ದಾರೆ.

ಇದನ್ನೂ ಓದಿ:ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

“ಕರ್ನಾಟಕ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವ ಮೂಲಕ ಕ್ರಿಶ್ಚಿಯನ್ನರ ಮೇಲೆ ಧಾಳಿ ಮಾಡಲು ಮುಂದಾಗಿದೆ. ಮುಸ್ಲಿಮರು ಕ್ರಿಶ್ಚಿಯನ್ನರು ಮತ್ತು ಕಮ್ಯೂನಿಸ್ಟರು ದೇಶದ ಆಂತರಿಕ ಶತ್ರುಗಳು ಎಂಬ ಗೋಳ್ವಾಲ್ಕರ್‌ ಧೋರಣೆಯನ್ನು ಜಾರಿ ಮಾಡಲು ಪ್ರಯತ್ನ ನಡೆದಿದೆ. ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಕರ್ನಾಟಕ ಸರ್ಕಾರದ ನೀತಿಯು ದೇವಸ್ಥಾನಗಳ ಭಾಗವಾಗಿರುವ ಅಪಾರ ಪ್ರಮಾಣದ ಭೂಮಿ-ಆಸ್ತಿಯನ್ನು ಲಪಟಾಯಿಸಲು ಅನುಕೂಲವಾಗುವಂತೆ ನೀತಿಗಳಲ್ಲಿ ಮಾರ್ಪಾಡು ಮಾಡಲಾಗುತ್ತಿದೆ. ಜೊತೆಗೆ ದೇವಸ್ಥಾನಗಳನ್ನು ಆರ್‌ಎಸ್‌ಎಸ್‌ ಹಿಡಿತಕ್ಕೆ ವಹಿಸುವ ಪ್ರಯತ್ನದ ಭಾಗವಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಬಿಜೆಪಿ ನೇತೃತ್ವದ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಮಾನೀಕೆಯ ವಿರುದ್ಧ ಹೋರಾಟಗಳನ್ನು ರೂಪಿಸಲು ರಾಜ್ಯ ಸಮ್ಮೇಳನ ಹಾಗೂ ಏಪ್ರಿಲ್‌ನಲ್ಲಿ ಕಣ್ಣೂರಿನಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದಲ್ಲಿ ತೀರ್ಮಾನಿಸಲಾಗುವುದು” ಎಂದು ಪ್ರಕಾಶ್‌‌ ಕಾರಟ್ ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿತ್ಯಾನಂದಸ್ವಾಮಿ ವಹಿಸಿದ್ದರು. ವೇದಿಕೆಯಲ್ಲಿ ಪೊಲಿಟ್ ಬ್ಯೂರೋ ಸದಸ್ಯರಾದ ಎಂ.ಎ ಬೇಬಿ, ಬಿ.ವಿ. ರಾಘವಲು, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ,  ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಜಿ.ನಾಗರಾಜ, ರಾಜ್ಯ ಮುಖಂಡರಾದ ಎಸ್. ವರಲಕ್ಷ್ಮಿ, ಕೆ.ಶಂಕರ್, ಜೆ.ಬಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಸುಂದರಂ, ಕೆ.ಎನ್ ಉಮೇಶ್, ವಿಜೆಕೆ ನಾಯರ್, ಜಿ.ಎನ್. ನಾಗರಾಜ್, ವಸಂತ ಆಚಾರಿ, ಗಂಗಾವತಿ ತಾಲ್ಲೂಕ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಸೇರಿದಂತೆ ಅನೇಕರಿದ್ದರು.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...