Homeಮುಖಪುಟಮಧ್ಯಪ್ರದೇಶದಲ್ಲಿ ಹೆಚ್ಚಾದ ನಿರುದ್ಯೋಗ: 3 ವರ್ಷಗಳಲ್ಲಿ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ಕೆಲಸ

ಮಧ್ಯಪ್ರದೇಶದಲ್ಲಿ ಹೆಚ್ಚಾದ ನಿರುದ್ಯೋಗ: 3 ವರ್ಷಗಳಲ್ಲಿ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ಕೆಲಸ

- Advertisement -
- Advertisement -

ಮಧ್ಯಪ್ರದೇಶ ಸರ್ಕಾರದ ಉದ್ಯೋಗ ಕಛೇರಿಗಳಲ್ಲಿ ನೋಂದಾಯಿಸಿಕೊಂಡಿರುವ 37.8 ಲಕ್ಷ ವಿದ್ಯಾವಂತರ ಪೈಕಿ ಕಳೆದ ಮೂರು ವರ್ಷಗಳಲ್ಲಿ 21 ಜನ ಮಾತ್ರ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿದ್ದರೆ. 2.51 ಲಕ್ಷ ಜನರು ಖಾಸಗಿ ವಲಯದಿಂದ ಆಫರ್‌ಗಳನ್ನು ಪಡೆದಿದ್ದಾರೆ ಎನ್ನುವ ವಿಚಾರ ಸರ್ಕಾರವೇ ಹೇಳಿಕೊಂಡಿದೆ.

ಮಾರ್ಚ್ 1ರಂದು ಎಂಪಿ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಶಾಸಕ ಮೇವರಾಂ ಜಾತವ್ ಅವರು ಕೇಳಿದ್ದ ಪ್ರಶ್ನೆಗೆ ಮಂಗಳವಾರ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಲಿಖಿತ ಉತ್ತರ ನೀಡಲಾಗಿದ್ದು, ”2021-22ರ ಹಣಕಾಸು ವರ್ಷದಲ್ಲಿ ರಾಜ್ಯ ಸರ್ಕಾರವು ತನ್ನ ಉದ್ಯೋಗ ಕಚೇರಿಗಳಿಗೆ 1,674 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ” ಎಂದು ತಿಳಿಸಲಾಗಿದೆ. ಈ ಲೆಕ್ಕದ ಪ್ರಕಾರ, ಉದ್ಯೋಗ ಕಚೇರಿಗಳ ವೆಚ್ಚವನ್ನು ಲೆಕ್ಕಹಾಕಿದರೆ, ಅದು ಒಬ್ಬ ವ್ಯಕ್ತಿಗೆ 80 ಲಕ್ಷ ರೂ. ವೆಚ್ಚ ಮಾಡಿದಂತಾಗುತ್ತದೆ ಎನ್ನುವ ಆತಂಕಕಾರಿ ಅಂಶ ಹೊರಬಂದಿದೆ.

”ಏಪ್ರಿಲ್ 2020ರಿಂದ ಪ್ರಶ್ನೆಯ ದಿನಾಂಕ (ಜನವರಿ-ಫೆಬ್ರವರಿ 2023)ವರೆಗೆ ಒಟ್ಟು 37,80,679 ವಿದ್ಯಾವಂತರು ಮತ್ತು 1,12,470 ಅವಿದ್ಯಾವಂತರು ಎಂಪಿ ಎಂಪ್ಲಾಯ್‌ಮೆಂಟ್ ಪೋರ್ಟಲ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ” ಎಂದು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವೆ ಯಶೋಧರ ರಾಜೇ ಸಿಂಧಿಯಾ ಅವರು ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

”ಈ ಅವಧಿಯಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ 21 ಜನರಿಗೆ ಉದ್ಯೋಗ ನೀಡಲಾಗಿದ್ದು, 2,51,577 ಮಂದಿ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳಿಂದ ಆಫರ್ ಲೆಟರ್ ಪಡೆದಿದ್ದಾರೆ” ಎಂದು ಅವರು ಹೇಳಿದ್ದಾರೆ.

2021-22ರ ಆರ್ಥಿಕ ವರ್ಷದಲ್ಲಿ ಉದ್ಯೋಗ ಕಚೇರಿಗಳನ್ನು ನಡೆಸಲು 1,674.73 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್‌ ನಿರಂತರ ಆರೋಪಗಳನ್ನು ಮಾಡುತ್ತಿದೆ.

”ರಾಜ್ಯ ಬಿಜೆಪಿ ಸರ್ಕಾರ ಹಣ ಪೋಲು ಮಾಡುತ್ತಿದೆ, ಅವರು ಸಾಲ ಮಾಡಿ ತುಪ್ಪ ಕುಡಿಯುತ್ತಿದ್ದಾರೆ. ಮಧ್ಯಪ್ರದೇಶದಲ್ಲಿ ವ್ಯವಸ್ಥೆ ಕುಸಿದಿದೆ. ಇದು ಸರಕಾರವಲ್ಲ ಸರ್ಕಸ್. ಇಲ್ಲಿ ಕಾನೂನು ಸುವ್ಯವಸ್ಥೆಗೆ ಅರ್ಥವಿಲ್ಲ” ಎಂದು ಕಾಂಗ್ರೆಸ್ ನ ಪಿ.ಸಿ.ಶರ್ಮಾ ಹೇಳಿದ್ದಾರೆ.

ಕಾಂಗ್ರೆಸ್ ಆರೋಪಗಳನ್ನು ತಳ್ಳಿ ಹಾಕಿರುವ ಬಿಜೆಪಿ ಶಾಸಕ ಗೌರಿಶಂಕರ್ ಬಿಸೆನ್ ಅವರು ”ಐದನೇ ಬಾರಿಗೆ ಶಿವರಾಜ್ ಮುಖ್ಯಮಂತ್ರಿಯಾಗಲಿದ್ದಾರೆ… ನಮ್ಮ ಸರಕಾರದ ಭರವಸೆಗಳನ್ನು ಈಡೇರಿಸುವುದರಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಉತ್ತರ ನೀಡಿದ್ದಾರೆ. ನಾವು ಉದ್ಯೋಗ ನೀಡುತ್ತೇವೆ ಎಂದು ಹೇಳುತ್ತಿದ್ದೇವೆ” ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂಜಿನಿಯರ್‌ಗಳು ಮತ್ತು ಡಾಕ್ಟರೇಟ್ ಹೊಂದಿರುವವರು ಸೇರಿದಂತೆ 12 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಸರಿಸುಮಾರು 6,000 ಪಟ್ವಾರಿ (ಭೂ ಕಂದಾಯ ಅಧಿಕಾರಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ವರ್ಷ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಪ್ರಸ್ತುತಪಡಿಸಿದ ನಿರುದ್ಯೋಗ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 1, 2022 ರವರೆಗೆ 25.8 ಲಕ್ಷಕ್ಕೂ ಹೆಚ್ಚು ನೋಂದಾಯಿತ ನಿರುದ್ಯೋಗಿ ಯುವಕರು ಇದ್ದರು. ಈ ಅಂಕಿ ಅಂಶವು 1 ಜನವರಿ 2023 ರಂದು 38,92,949 ಕ್ಕೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...