Homeಮುಖಪುಟಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ: ವರದಿ

- Advertisement -
- Advertisement -

ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಎರಡು ವರ್ಷಗಳಲ್ಲೇ ಗರಿಷ್ಠ 10.09%ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಡೇಟಾ ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಕ್ಟೋಬರ್‌ನಲ್ಲಿ ನಿರುದ್ಯೋಗದ ದರವು 7.09% ರಷ್ಟಿತ್ತು. ಹೊಸ ಅಂಕಿಅಂಶವು ಸೆಪ್ಟೆಂಬರ್‌ಗೆ ಹೋಲಿಕೆ ಮಾಡಿದರೆ ನಿರುದ್ಯೋಗದಲ್ಲಿ ಸುಮಾರು ಮೂರು ಶೇಕಡಾವಾರು ಹೆಚ್ಚಳವನ್ನು ಸೂಚಿಸುತ್ತದೆ. ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗವು 6.2% ರಿಂದ 10.82%ಕ್ಕೆ ಏರಿಕೆಯಾಗಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-2023ರ ನಿರುದ್ಯೋಗ ದರವು 3.2% ರಷ್ಟಿದೆ. ಆದರೆ ಆರ್ಥಿಕ ತಜ್ಞರು ಉತ್ತಮ ಮೌಲ್ಯಮಾಪನಕ್ಕಾಗಿ CMIE ಡೇಟಾವನ್ನು ಅವಲಂಬಿಸಿದ್ದಾರೆ. ಏಕೆಂದರೆ ಅದರ ಅಂಕಿಅಂಶಗಳು ಮಾಸಿಕ ಸಮೀಕ್ಷೆಗಳನ್ನು ಆಧರಿಸಿರುತ್ತವೆ. ಇದು ಸರ್ಕಾರಿ ದತ್ತಾಂಶಕ್ಕೆ ವಿರುದ್ಧವಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ಈ ವರ್ಷ ಭಾರತದ ಆರ್ಥಿಕತೆಯು 6% ದಿಂದ 6.5%ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ಜನಸಂಖ್ಯೆಯು ಹೆಚ್ಚುತ್ತಿದೆ ಮತ್ತು ಏಪ್ರಿಲ್‌ನಲ್ಲಿ ಭಾರತವು ಚೀನಾವನ್ನು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದ ಸ್ಥಾನದಿಂದ ಹಿಂದಿಕ್ಕಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಬೆಳವಣಿಗೆಯ ಹೊರತಾಗಿಯೂ, ಕಳೆದ ಐದು ವರ್ಷಗಳಿಂದ ಭಾರತದ ಉದ್ಯೋಗಿಗಳ ಸಂಖ್ಯೆಯು  ನಿಶ್ಚಲವಾಗಿದೆ ಎಂದು CMIE ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ಸುಮಾರು 10 ಮಿಲಿಯನ್ ಭಾರತೀಯರು ಕೆಲಸ ಹುಡುಕುವ ಭರವಸೆಯಲ್ಲಿ ಉದ್ಯೋಗದ ಮಾರುಕಟ್ಟೆಗೆ  ಪ್ರವೇಶಿಸಿದ್ದಾರೆ ಎಂದು ಬ್ಲೂಮ್‌ಬರ್ಗ್ CMIE ಡೇಟಾವನ್ನು ಉಲ್ಲೇಖಿಸಿದೆ.

ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟಿ ನಡೆಸಿದ ಸಮೀಕ್ಷೆಯ ಪ್ರಕಾರ, ಈ ವರ್ಷದ ಆರಂಭದಲ್ಲಿ 15 ರಿಂದ 34 ವರ್ಷ ವಯಸ್ಸಿನ 36% ಭಾರತೀಯರು ನಿರುದ್ಯೋಗ ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದು ಭಾವಿಸಿದ್ದಾರೆ. 2016ರಲ್ಲಿ ನಡೆಸಿದ ಸಮೀಕ್ಷೆಗೆ ಹೋಲಿಸಿದರೆ, ನಿರುದ್ಯೋಗವನ್ನು ಅತಿದೊಡ್ಡ ಸಮಸ್ಯೆ ಎಂದು ಹೇಳುವ ಭಾರತೀಯರ ಪ್ರಮಾಣವು 18 ಶೇಕಡಾ ಹೆಚ್ಚಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 40% ದಷ್ಟು ವಿದ್ಯಾವಂತರು ಅಂದರೆ ಪದವೀಧರರು ಮತ್ತು ಅದಕ್ಕಿಂತ ಮೇಲ್ಪಟ್ಟವರು  ನಿರುದ್ಯೋಗವನ್ನು ದೊಡ್ಡ ಸವಾಲು ಎಂದು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...