Homeಮುಖಪುಟನೈತಿಕ ಸಮಿತಿ ಸಭೆಯಲ್ಲಿ ಅನೈತಿಕ, ವೈಯಕ್ತಿಕ ಪ್ರಶ್ನೆ ಕೇಳಿದರು: ಮಹುವಾ ಮೊಯಿತ್ರಾ

ನೈತಿಕ ಸಮಿತಿ ಸಭೆಯಲ್ಲಿ ಅನೈತಿಕ, ವೈಯಕ್ತಿಕ ಪ್ರಶ್ನೆ ಕೇಳಿದರು: ಮಹುವಾ ಮೊಯಿತ್ರಾ

- Advertisement -
- Advertisement -

ಸಮಿತಿಯ ಮುಖ್ಯಸ್ಥರು ತಮ್ಮ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಲೋಕಸಭೆಯ ನೈತಿಕ ಸಮಿತಿ ಸಭೆಯಿಂದ ಗುರುವಾರ ಹೊರಬಂದಿದ್ದಾರೆ.

ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಆರೋಪವನ್ನು ಸದನ ಸಮಿತಿಯು ತನಿಖೆ ನಡೆಸುತ್ತಿದೆ.

ಆ ಎಲ್ಲ ಆರೋಪಗಳನ್ನು ತಿರಸ್ಕರಿಸಿದ ಮಹುವಾ – ಆಪಾದಿತ ‘ಲಂಚ ನೀಡುವವರು’ ಹಿರಾನಂದಾನಿ ಮತ್ತು ದೂರುದಾರರಾದ ವಕೀಲ ಜೈ ದೇಹದ್ರಾಯಿ ಅವರನ್ನು ಅಡ್ಡ ಪರೀಕ್ಷೆ ಮಾಡಲು ಅನುಮತಿ ನೀಡಬೇಕು ಎಂದು ನೈತಿಕ ಸಮಿತಿಗೆ ಪತ್ರ ಬರೆದಿದ್ದರು.

ಮೊಯಿತ್ರಾ ಅವರಿಗೆ ಸಮಿತಿಯ ಅಧ್ಯಕ್ಷರು ಕೇಳಿದ ಪ್ರಶ್ನೆಗಳು “ಅಗೌರವ ಮತ್ತು ಅನೈತಿಕ” ಎಂದು ಕಾಂಗ್ರೆಸ್ ಸಂಸದ ಮತ್ತು ಸಮಿತಿ ಸದಸ್ಯ ಎನ್ ಉತ್ತಮ್ ಕುಮಾರ್ ರೆಡ್ಡಿ ಆರೋಪಿಸಿದರು.

ಅಕ್ಟೋಬರ್ 19 ರಂದು ಎಥಿಕ್ಸ್ ಕಮಿಟಿಗೆ ಅಫಿಡವಿಟ್‌ನಲ್ಲಿ, ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಒದಗಿಸಿದ್ದಾರೆ ಎಂದು ಹಿರಾನಂದಾನಿ ಹೇಳಿಕೊಂಡಿದ್ದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅಕ್ಟೋಬರ್ 15 ರಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು “ಉದ್ಯಮಿ ಗುಂಪಿನ ಹಿತಾಸಕ್ತಿಗಳನ್ನು ರಕ್ಷಿಸಲು” ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತುವುದಕ್ಕಾಗಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದರು.

ಈ ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದ ನಿಶಿಕಾಂತ್ ದುಬೆ ಅವರು ಸಮಿತಿಯು ವರದಿ ಸಲ್ಲಿಸುವವರೆಗೆ ಅವರನ್ನು ಸದನದಿಂದ ಅಮಾನತುಗೊಳಿಸುವಂತೆ ಕೋರಿದರು.

ಈ ಮಧ್ಯೆ, ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ತಮ್ಮ ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹಿರಾನಂದನಿಗೆ ನೀಡಿದ್ದರು ಆದರೆ ಅವರಿಂದ ಯಾವುದೇ ಹಣವನ್ನು ತೆಗೆದುಕೊಳ್ಳಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಕೇಂದ್ರ ತನಿಖಾ ದಳಕ್ಕೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...